“ರಾಣಿ ಚೆನ್ನಮ್ಮ ವಿಮಾನ ನಿಲ್ದಾಣ’’ ಎಂದು ನಾಮಕರಣಕ್ಕೆ ಸಂಸದ ಕಡಾಡಿ ಆಗ್ರಹ

A B Dharwadkar
“ರಾಣಿ ಚೆನ್ನಮ್ಮ ವಿಮಾನ ನಿಲ್ದಾಣ’’ ಎಂದು ನಾಮಕರಣಕ್ಕೆ ಸಂಸದ ಕಡಾಡಿ ಆಗ್ರಹ

ಬೆಳಗಾವಿ: 1824 ರಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿ ಗೆದ್ದ ಕಿತ್ತೂರು ರಾಣಿ ಚನ್ನಮ್ಮ ಅವರ  ವಿಜಯೋತ್ಸವದ 201ನೇ ವರ್ಷದ ಹಿನ್ನೆಲೆಯಲ್ಲಿ ಬೆಳಗಾವಿ ವಿಮಾನ ನಿಲ್ದಾಣಕ್ಕೆ “ಕಿತ್ತೂರು ರಾಣಿ ಚೆನ್ನಮ್ಮ ವಿಮಾನ ನಿಲ್ದಾಣ’’ ಎಂದು ನಾಮಕರಣ ಮಾಡುವುದು ರಾಜ್ಯಸಭೆ ಸಂಸದ ಈರಣ್ಣ ಕಡಾಡಿ ಭೇಟಿಯಾಗಿ ಮನವಿ ಮಾಡಿದ್ದಾರೆ.

ಕೇಂದ್ರ ವಿಮಾನಯಾನ ಸಚಿವ ಕಿಂಜರಾಪು ರಾಮಮೋಹನ್ ನಾಯ್ಡು ಅವರನ್ನು ರಾಜ್ಯಸಭೆ ಸಂಸದ ಈರಣ್ಣ ಕಡಾಡಿ ಅವರು ಭೇಟಿಯಾಗಿ ಈ ಮನವಿ ಮಾಡಿದ್ದು ವಿಮಾನ ನಿಲ್ದಾಣದ ಮುಂಭಾಗದಲ್ಲಿ ಚನ್ನಮ್ಮನ ಭವ್ಯ ಪ್ರತಿಮೆ ಸ್ಥಾಪನೆ ಜೊತೆಗೆ ಬೆಳಗಾವಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಉನ್ನತೀಕರಣಗೊಳಿಸಬೇಕೆಂದು ಮನವಿ ಮಾಡಿದರು.

ಹೊಸದಿಲ್ಲಿಯಲ್ಲಿ ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು, ಕಿತ್ತೂರು ರಾಣಿ ಚೆನ್ನಮ್ಮ ಸ್ವಾತಂತ್ರ‍್ಯ ಸಂಗ್ರಾಮದಲ್ಲಿ ಬ್ರಿಟಿಷರ ವಿರುದ್ಧ ಯುದ್ಧ ಸಾರಿ ಗೆಲುವು ಸಾಧಿಸಿದ ಮೊದಲ ಮಹಿಳೆಯಾಗಿದ್ದಾರೆ. ಅವರ ತ್ಯಾಗ ಬಲಿದಾನಕ್ಕೆ ಗೌರವ ಸಲ್ಲಿಸುವ ಸಲುವಾಗಿ ಹಾಗೂ ಅವರ ವಿರೋಚಿತ ಕಾರ್ಯಗಳನ್ನು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡಲು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಭವ್ಯ ಪ್ರತಿಮೆ ಸ್ಥಾಪನೆ ಮಾಡುವ ಮೂಲಕ ಕರ್ನಾಟಕ ಜನತೆ ಉತ್ತಮ ಕೊಡುಗೆ ನೀಡಬೇಕೆಂದು ವಿನಂತಿಸಿದರು.

ನನ್ನ ಮನವಿಗೆ ಸಕಾರಾತ್ಮವಾಗಿ ಕೇಂದ್ರ ಸಚಿವರು ಸ್ಪಂದಿಸಿದ್ದು ಈ ವಿಷಯವನ್ನು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯಬೇಕಾಗುತ್ತದೆ. ಅದಕ್ಕೆ ತಕ್ಕಂತೆ ಈಗಾಗಲೇ ನಾವು ಸಿದ್ದತೆಗಳನ್ನು ಮಾಡುತ್ತಿದ್ದೇವೆ. ಆದಷ್ಟು ಬೇಗ ಸಚಿವ ಸಂಪುಟದ ಅನುಮೋದನೆ ಪಡೆಯಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ ಎಂದು ಕಡಾಡಿ ತಿಳಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.