Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

Crime News

ಹುಬ್ಬಳ್ಳಿ ರೈಲಿನಲ್ಲಿ ಕೊಲೆ 


ಹುಬ್ಬಳ್ಳಿ : ರೈಲಿನ ಒಳಗಡೆಯೇ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಿರುಪತಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿನಲ್ಲಿ ನಡೆದಿದೆ.

ಸಾಮಾನ್ಯ ಬೋಗಿಯಲ್ಲಿ ದುಷ್ಕರ್ಮಿಗಳು ವ್ಯಕ್ತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ. ರೈಲು ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಬಳಿ ರೈಲು ಬಂದಾಗ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ರಕ್ತದ ಕಲೆಗಳಿರುವುದು ಬೆಳಕಿಗೆ ಬಂದಿದೆ.

ಕೂಡಲೇ ಸಿಬ್ಬಂದಿ ರೈಲು ನಿಲ್ಲಿಸಲು ಸೂಚನೆ ನೀಡಿದ್ದಾರೆ. ರೈಲನ್ನು ನಿಲ್ಲಿಸಿ ಪರಿಶೀಲನೆ ನಡೆಸಿದಾಗ ಕೊಲೆಯಾಗಿರುವುದು ಬಯಲಾಗಿದೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೊಲೆಯಾದ ವ್ಯಕ್ತಿ , ಹತ್ಯೆ ಮಾಡಿದವರು ಯಾರೆಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


A B Dharwadkar
the authorA B Dharwadkar

Leave a Reply