This is the title of the web page

ಬಜರಂಗದಳ ಕಾರ್ಯಕರ್ತನ ಕೊಲೆ; 12 ಬಂಧನ

ಬೆಂಗಳೂರು, 22- ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು 12 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ 12 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ನಗರದ ಸೀಗೆಹಟ್ಟಿ ನಿವಾಸಿ ಹರ್ಷನ ಮೇಲೆ ಮಾರಕಾಸ್ತ್ರಗಳಿಂದ ಹತ್ಯೆಗೈದು ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದರು. ನಂತರ ನಗರದಲ್ಲಿ ಕಲ್ಲು ತೂರಾಟ ನಡೆದಿತ್ತು. ಈ ವೇಳೆ ಪೊಲೀಸರು ಲಾಠಿ ಚಾರ್ಜ‌ ‌ಮಾಡಿ ಪರಿಸ್ಥಿತಿ ನಿಯಂತ್ರಿಸಿದ್ದರು.

ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳವಾರ ಸಹ ನಗರದ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ರಜೆ ಘೋಷಣೆ ಮಾಡಿದ್ದಾರೆ.

You might also like
Leave a comment