Please assign a menu to the primary menu location under menu

State

ನಿರೀಕ್ಷಣಾ ಜಾಮೀನು ಕೋರಿ ಮುರುಘಾಮಠ ಸ್ವಾಮಿಗಳ ಅರ್ಜಿ

swamiji

ಚಿತ್ರದುರ್ಗ: ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಸ್ವಾಮೀಜಿಗಳು ನಿರೀಕ್ಷಣಾ ಜಾಮೀನು ಕೋರಿ ಕೋರ್ಟಗೆ ಅರ್ಜಿ ಸಲ್ಲಿಸಿದ್ದಾರೆ.

ಸೋಮವಾರ ನಿರೀಕ್ಷಣಾ ಜಾಮೀನು ಕೋರಿ ಮುರುಘಾ ಶ್ರೀಗಳ ಪರ ವಕೀಲರು ಚಿತ್ರದುರ್ಗದ ಎರಡನೇ ಸೆಷನ್ಸ್ ಕೋರ್ಟ ಅರ್ಜಿ ಸಲ್ಲಿಸಿದ್ದು, ಅರ್ಜಿ ಸ್ವೀಕರಿಸಿ ವಿಚಾರಣೆಯನ್ನು ಕೋರ್ಟ್ ಸೆಪ್ಟೆಂಬರ 1ಕ್ಕೆ ನಿಗದಿಪಡಿಸಿದೆ.

ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ಅವರನ್ನು ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಆದರೆ ತಮ್ಮ ವಿರುದ್ಧದ ಆರೋಪಗಳನ್ನು ಮುರುಘಾ ಶ್ರೀಗಳು ತಳ್ಳಿ ಹಾಕಿದ್ದು, ನನ್ನ ವಿರುದ್ಧ ಪಿತೂರಿ ನಡೆದಿದೆ. ಇದೇನು ಹೊಸದಲ್ಲ, ಕಳೆದ 15 ವರ್ಷದಿಂದ ಪಿತೂರಿ ನಡೆಯುತ್ತಿದೆ. ನಮ್ಮ ಮಠ ನ್ಯಾಯ ದೇಗುಲದಂತಿತ್ತು. ಇದೀಗ ಮಠದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದಿದ್ದಾರೆ.


Samadarshi News

Leave a Reply