ಬೆಳಗಾವಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಪ್ರಕರಣದಲ್ಲಿ ಭೂಗತನಾಗಿದ್ದ ಉತ್ತರ ಕರ್ನಾಟಕದ ಜಾನಪದ ಹಾಡುಗಾರ, “ಮ್ಯೂಸಿಕ್ ಮೈಲಾರಿ” ಯನ್ನು ಬಾಗಲಕೋಟೆ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಮೂಲದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಮೈಲಾರಿ ತಲೆಮರೆಸಿಕೊಂಡಿದ್ದ. ಮಹಾರಾಷ್ಟ್ರದಲ್ಲಿ ತಲೆಮಾರೆಸಿಕೊಂಡಿರುವ ಕುರಿತು ಕರ್ನಾಟಕ ಪೊಲೀಸರು ನೀಡಿದ್ದ ಮಾಹಿತಿಯoತೆ ಮಂಗಳವಾರ ತಡರಾತ್ರಿ ಜತ್ ಪೊಲೀಸರು ಬಂಧಿಸಿದ್ದಾರೆ. ಆಗ ಮೈಲಾರಿ ಬೇರೊಂದು ಸ್ಥಳಕ್ಕೆ ಪಲಾಯನ ಮಾಡುವ ಯತ್ನದಲ್ಲಿದ್ದ.
ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಪ್ರಕರಣದಲ್ಲಿ ಸಂತ್ರಸ್ತೆ ನೀಡಿದ ದೂರಿನ ಹಿನ್ನೆಲೆಯ ಬೆಳಗಾವಿಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪ್ರಕರಣವನ್ನು ಬಾಗಲಕೋಟೆ ಠಾಣೆಗೆ ವರ್ಗಾಯಿಸಲಾಗಿತ್ತು. ಮ್ಯೂಸಿಕ್ ಮೈಲಾರಿ ಸೇರಿ ಏಳು ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ ಮೈಲಾರಿ ತಲೆಮರೆಸಿಕೊಂಡಿದ್ದ. ಇದೀಗ ಆತನನ್ನು ಬಂಧಿಸಲಾಗಿದೆ.

