ಹಾವೇರಿ ವಿಶ್ವವಿದ್ಯಾಲಯದ ನೂತನ ಗಣಕಯಂತ್ರ ವಿಭಾಗವನ್ನು ಉದ್ಘಾಟಿಸಿದ ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ.

A B Dharwadkar
ಹಾವೇರಿ ವಿಶ್ವವಿದ್ಯಾಲಯದ ನೂತನ ಗಣಕಯಂತ್ರ ವಿಭಾಗವನ್ನು ಉದ್ಘಾಟಿಸಿದ ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ.

ಹಾವೇರಿ: ನಗರದ ಹೊರವಲಯದಲ್ಲಿರುವ ಕೆರಿಮತ್ತಿಹಳ್ಳಿಯ ಹಾವೇರಿ ವಿಶ್ವ ವಿದ್ಯಾಲಯದಲ್ಲಿ ಸುಮಾರು ೧೮ಲಕ್ಷಕ್ಕೂ ಅಧಿಕ ವೆಚ್ಚದಲ್ಲಿ ನೂತನವಾಗಿ ಪ್ರಾರಂಭಿಸಲಾದ ಗಣಕಯಂತ್ರ ವಿಭಾಗವನ್ನು ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಭಾನುವರ ಸಂಜೆ ಜಂಟಿಯಾಗಿ ಲೋಕಾರ್ಪಣೆಗೊಳಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಯದುವೀರ ಒಡೆಯರ, ಸಂಸದ ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ ಹಾವೇರಿಯಲ್ಲಿ ಹೊಸ ವಿಶ್ವ ವಿದ್ಯಾಲಯ ಸ್ಥಾಪನೆಯಾಗಿದೆ. ಹಾವೇರಿ ವಿವಿ ಸುಸಜ್ಜಿತವಾಗಿ ವಿಶಾಲವಾದ ಪರಿಸರ, ಮೂಲ ಸೌಕರ್ಯಗಳನ್ನು ಹೊಂದಿದ್ದುö, ವಿದ್ಯಾರ್ಥಿಗಳಿಗೆ ಉತ್ತಮ ಸೇವೆಯನ್ನು ಒದಗಿಸುತ್ತಿದೆ. ಈ ಭಾಗದ ಹಿಂದುಳಿದ, ಬಡ ಮಕ್ಕಳ ಕಲಿಕೆಗೆ ಪೂರಕವಾಗಿದೆ. ಗ್ರಾಮೀಣ ಭಾಗದ ಮಕ್ಕಳು ಉನ್ನತ ಶಿಕ್ಷಣ ಪಡೆಯಲಿಕ್ಕೆ ನಗರಕ್ಕೆ ಬರುವುದು ಕಡಿಮೆ, ಅವರಿಗೆ ಉನ್ನತ ಶಿಕ್ಷಣ ಪಡೆಯಲು ಹಾವೇರಿ ವಿವಿ ಒಳ್ಳೆಯ ಅವಕಾಶ ಒದಗಿಸುತ್ತಿದೆ ಎಂದರು.
ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿ, ರಾಜ್ಯ ಸರಕಾರದ ಯಾವುದೇ ಅನುದಾನ ಇಲ್ಲದೇ ಹಾವೇರಿ ವಿಶ್ವ ವಿದ್ಯಾಲಯ ನಡೆಯುತ್ತಿದೆ. ಅತ್ಯಂತ ಕಡಿಮೆ ಮೂಲ ಸೌಕರ್ಯದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳಿಗೆ ಪದವಿ ಕೊಡುತ್ತಿದೆ. ಪರೀಕ್ಷೆ ನಡೆದು ಹದಿನೈದು ದಿನದಲ್ಲಿ ಫಲಿತಾಂಶ ಸಿಗುತ್ತಿದೆ. ಮುಂದಿನ ದಿನಗಳಲ್ಲಿ ಇದು ಮಾದರಿ ವಿಶ್ವ ವಿದ್ಯಾಲಯವಾಗುತ್ತದೆ. ರಾಜ್ಯ ಸರಕಾರ ಹಾವೇರಿ ವಿಶ್ವ ವಿದ್ಯಾಲಯದಲ್ಲಿ ಕನಿಷ್ಠ ಹುದ್ದೆಗಳನ್ನು ಸೃಷ್ಟಿ ಮಾಡಿ ನೇಮಕಾತಿಯನ್ನಾದರೂ ಮಾಡಿದರೆ, ಮುಂದಿನ ದಿನಗಳಲ್ಲಿ ಯುಜಿಸಿಯಿಂದ ಅನುದಾನ ತರಲು ಅನುಕೂಲವಾಗಲಿದೆ. ಅದನ್ನು ಮಾಡಬೇಕೆಂದು ಆಗ್ರಹಿಸುವುದಾಗಿ ತಿಳಿಸಿದರು.

*ಕೋಟ್:*

ಹಾವೇರಿ ವಿವಿಯಲ್ಲಿ ಕಂಪ್ಯೂಟರ್ ವಿಭಾಗ ಉದ್ಘಾಟನೆ ಮಾಡಿರುವುದು ಮತ್ತು ಹುಕ್ಕೇರಿಮಠದ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ನನ್ನ ಸೌಭಾಗ್ಯವಾಗಿದೆ. ಹುಕ್ಕೇರಿಮಠ ಕರ್ನಾಟಕದ ಧಾರ್ಮಿಕ ನೆಲೆಗಟ್ಟಿನಲ್ಲಿ ತನ್ನದೇಯಾದ ಪರಂಪರೆಯನ್ನು ಹೊಂದಿದೆ. ಅದರಲ್ಲಿ ಭಾಗವಹಿಸುವುದು ನನ್ನ ಸುದೈವ.

-ಯದುವೀರ ಕೃಷ್ಣದತ್ತ ಒಡೆಯರ್, ಮೈಸೂರು ಸಂಸದ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.