This is the title of the web page

ರಾಷ್ಟ್ರಪತಿ ಚುನಾವಣೆಗೆ ಎನ್.ಡಿ.ಎ. ಅಭ್ಯರ್ಥಿ ಘೋಷಣೆ

 

ಹೊಸದಿಲ್ಲಿ: ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್ ಡಿ ಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಘೋಷಿಸಿದ್ದಾರೆ.

ವಿಪಕ್ಷಗಳ ಮೈತ್ರಿಕೂಟ ಯಶವಂತ ಸಿನ್ಹಾ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದು, ಇದರ ಬೆನ್ನಲ್ಲೇ ಎನ್ ಡಿ ಅ ಮೈತ್ರಿಕೂಟದಿಂದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಲಾಗಿದೆ.

ಆದಿವಾಸಿ ಮಹಿಳೆಯಾಗಿರುವ ದ್ರೌಪದಿ ಅವರು, ಪ್ರಥಮ ಬಾರಿಗೆ ಬುಡಕಟ್ಟು ಮಹಿಳಾ ಅಭ್ಯರ್ಥಿಗೆ ಆದ್ಯತೆ ನೀಡಲಾಗಿದೆ.

ಅವರು ದ್ರೌಪದಿ ಮುರ್ಮು ಶಿಕ್ಷಕಿಯಾಗಿ ಕೆಲಸ ಮಾಡಿದ್ದಾರೆ. ಕೌನ್ಸಿಲರ್ ಆದ ನಂತರ ಶಾಸಕಿಯಾದರು. ಸರ್ವೆಪಲ್ಲಿ ರಾಧಾಕೃಷ್ಣನ್ ಅವರಂತೆ ದ್ರೌಪದಿ ಮುರ್ಮು ಅವರು ಶಿಕ್ಷಣ ಕ್ಷೇತ್ರದೊಂದಿಗೆ ಬಹಳ ಕಾಲ ನಂಟು ಹೊಂದಿದ್ದು, ಸುದೀರ್ಘ ಕಾಲ ಶಾಸಕರಾಗಿ, ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

You might also like
Leave a comment