Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

ಎಸ್ ಸಿ, ಎಸ್ ಟಿ ಸಮಾಜಕ್ಕೆ ಕೊಟ್ಟಂತೆ ನಮಗೂ ಮೀಸಲಾತಿ ಬೇಕು


ಹುಕ್ಕೇರಿ :  2 ಎ ಮೀಸಲಾತಿ ನೀಡುವಲ್ಲಿ ಸರ್ಕಾರ ವಿಳಂಬ ನೀತಿ ತೋರುತ್ತಿರುವುದನ್ನು ಖಂಡಿಸಿ 25 ಲಕ್ಷ ಜನರಿಂದ ಡಿಸೆಂಬರ 12 ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು‌ ಕೂಡಲಸಂಗಮ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಹುಕ್ಕೇರಿಯಲ್ಲಿ ಹಮ್ಮಿಕೊಂಡ ಪಂಚಮಸಾಲಿ ಲಿಂಗಾಯತ ಸಮಾವೇಶದಲ್ಲಿ ಮಾತನಾಡಿದ ಅವರು, ಎಸ್​ಸಿ ಎಸ್​ಟಿ ಸಮಾಜಕ್ಕೆ ಮೀಸಲಾತಿ ಕೊಟ್ಟಂತೆ ನಮಗೂ ಮೀಸಲಾತಿ ಕೊಡಬೇಕು ಎಂದರು.

ನಮ್ಮ ಸಮಾಜದ 2ಎ ಮೀಸಲಾತಿ ಹೋರಾಟ ಕೆಲವೇ ದಿನಗಳಲ್ಲಿ ತಾರ್ಕಿಕ ಅಂತ್ಯ ಕಾಣಲಿದೆ. ಶೇ 82ರಷ್ಟು ಬಹುಸಂಖ್ಯಾತ ಪಂಚಮಸಾಲಿ ಸಮಾಜದವರು ಅಧಿಕಾರದಿಂದ ವಂಚಿತರಾಗಿದ್ದಾರೆ. ಪಂಚಮಸಾಲಿ ಹೃದಯವಂತ ಸಮಾಜ, ನಾನು ಪೀಠಾಧ್ಯಕ್ಷನಾದ ಬಳಿಕ ಎಂದೆಂದಿಗೂ ಯಾರೂ ಏನನ್ನೂ ಕೇಳಿಲ್ಲ. ಮೀಸಲಾತಿ ಸಿಗುವ ವರೆಗೂ ಏನೂ ಬೇಡ, ಹೋರಾಟಕ್ಕೆ ಬನ್ನಿ ಎಂದು ಕರೆ ಕೊಟ್ಟಿದ್ದೇನೆ ಎಂದು ಅವರು ತಿಳಿಸಿದರು.

2ಎ ಮೀಸಲಾತಿಗೆ ಆಗ್ರಹಿಸಿ ಸರ್ಕಾರಕ್ಕೆ ಕೊಟ್ಟ ಗಡುವು ಮುಗಿದು ಹೋಗಿದೆ. ಸರ್ಕಾರ ನಾಲ್ಕು ಬಾರಿ ಮಾತು ಕೊಟ್ಟು ಮರಿದುಕೊಂಡಿದೆ. ಹೀಗಾಗಿ, ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ ಮಾಡಿದ್ದೇವೆ. ಈಗ ಮೀಸಲಾತಿ ಹೋರಾಟ ವಿಳಂಬ ಆಗ್ತಿದೆ.

ಚುನಾವಣೆ ಬರುವ ಮುಂಚೆ ಮೀಸಲಾತಿ ಘೋಷಣೆ ಮಾಡಬೇಕು. ಮುಖ್ಯಮಂತ್ರಿಗಳಿಗೆ ಕಳಕಳಿ ಇದ್ದರೆ ಮೀಸಲಾತಿಯನ್ನು ಕೂಡಲೇ ಘೋಷಿಸಲಿ ಎಂದು ಅವರು ಸವಾಲು ಹಾಕಿದರು.


A B Dharwadkar
the authorA B Dharwadkar

Leave a Reply