This is the title of the web page

ಬೆಂಗಳೂರಲ್ಲಿ ಕೋವಿಡ್ ರೂಪಾಂತರಿ ತಳಿ ಪತ್ತೆ; 4ನೇ ಅಲೆ ಸಾಧ್ಯತೆ

ಬೆಂಗಳೂರು, ೨೩- ಮೂಲ ತಳಿಗಿಂತ ಹೆಚ್ಚು ವೇಗವಾಗಿ ಹರಡಬಲ್ಲ ಓಮಿಕ್ರಾನ್ ಉಪ-ರೂಪಾಂತರ ಬಿಎ.2 ಇದರ ಎರಡು ಪ್ರಕರಣಗಳು ಬೆಂಗಳೂರಿನಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಉದ್ಭವಿಸುತ್ತಿರುವ ಪರಿಸ್ಥಿತಿಯನ್ನು ನಿಭಾಯಿಸಲು ಕರ್ನಾಟಕ ಆರೋಗ್ಯ ಇಲಾಖೆ ಕ್ರಮಗಳನ್ನು ಚುರುಕುಗೊಳಿಸಿದೆ.

ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಹೆಚ್ಚಿನ ಪ್ರಮುಖ ಐಟಿ ಕಂಪನಿಗಳು ಲಕ್ಷಾಂತರ ಸಾಫ್ಟವೇರ್ ವೃತ್ತಿಪರರನ್ನು ಹೊಂದಿರುವ ಬೆಂಗಳೂರಿನ ಮಹದೇವಪುರ ಮತ್ತು ಪೂರ್ವ ವಲಯಗಳಿಂದ ಹೆಚ್ಚಿನ ಸಂಖ್ಯೆಯ ಕೋವಿಡ್ ಪ್ರಕರಣಗಳು ವರದಿಯಾಗುತ್ತಿವೆ.

ರಾಜ್ಯದಲ್ಲಿ ಕೋವಿಡ್ ರೂಪಾಂತರಗಳಾದ ಬಿಎ.2.10 ಮತ್ತು ಬಿಎ.2.12 ಪತ್ತೆಯಾಗಿವೆ. ಬಿಎ.2 ರೂಪಾಂತರಗಳು ಈ ಹಿಂದೆ ದೆಹಲಿ ಮತ್ತು ಮುಂಬೈನಲ್ಲಿ ಕಂಡು ಬಂದಿದ್ದವು ಎಂದು ಬೆಂಗಳೂರಿನ ಶ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಸಿ.ಎನ್.ಮಂಜುನಾಥ ತಿಳಿಸಿದ್ದಾರೆ.

ಮೂರರಿಂದ ನಾಲ್ಕು ವಾರಗಳಲ್ಲಿ ಕರ್ನಾಟಕದಲ್ಲಿ ನಾಲ್ಕನೇ ಕೋವಿಡ್ ಅಲೆ ಪ್ರಾರಂಭವಾಗುವ ಸಾಧ್ಯತೆಯಿದೆ. ಬಿಎ .2 ರೂಪಾಂತರವು ಉಲ್ಬಣಕ್ಕೆ ಕಾರಣವಾಗಬಹುದು ” ಎಂದು ಮಂಜುನಾಥ ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದಲ್ಲಿ ನಾಲ್ಕನೇ ಅಲೆಯು ಅಪ್ಪಳಿಸಿ ಸೋಂಕಿತರು ವೇಗವಾಗಿ ಹರಡಿದರೂ ಆಸ್ಪತ್ರೆಗಳಿಗೆ ದಾಖಲಾಗುವವರ ಸಂಖ್ಯೆ ಮೊದಲಿಗಿಂತ ಕಡಿಮೆ ಇರುತ್ತದೆ ಎಂದು ಮಂಜುನಾಥ ಹೇಳಿದರು.

ರಾಜ್ಯದಲ್ಲಿ ಈಗ ಯಾವುದೇ ನಿರ್ಬಂಧಗಳು ಜಾರಿಯಲ್ಲಿಲ್ಲ. ಇನ್ನೆರಡು ವಾರಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಹೆಚ್ಚಳಕ್ಕೆ ಕಾರಣವಾಗಲಿದೆ. ಜನರು ಜಾಗರೂಕರಾಗಿರಬೇಕು ಎಂದು ಅವರು ಎಚ್ಚರಿಕೆ ನೀಡಿದರು.

You might also like
Leave a comment