Live Stream

November 2022
W T F S S M T
 1
2345678
9101112131415
16171819202122
23242526272829
30  

| Latest Version 8.2.9 |

State News

ಪರೇಶ ಮೇಸ್ತಾ ಪ್ರಕರಣಕ್ಕೆ ಹೊಸ ತಿರುವು: ಸಾಯುವ ಮುನ್ನ ಕಾಂಗ್ರೆಸ್ ಸಮಾವೇಶದಲ್ಲಿ ಭಾಗಿ


ಕಾರವಾರ: ಹಿಂದೂ ಕಾರ್ಯಕರ್ತ ಪರೇಶ ಮೇಸ್ತಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವರದಿ ಸಲ್ಲಿಸಿದೆ. ಸಾಯುವ ಮೊದಲು ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪರೇಶ ಮೆಸ್ತಾ ಭಾಗಿಯಾಗಿದ್ದ ಬಗ್ಗೆ ಸಿಬಿಐ ವರದಿ ಸಲ್ಲಿಸಿದೆ.

ನ್ಯಾಯಾಲಯಕ್ಕೆ ಸಿಬಿಐನಿಂದ ಅಂತಿಮ ವರದಿ ಸಲ್ಲಿಸಲಾಗಿದ್ದು, ಕುಮಟಾದಲ್ಲಿ ನಡೆದ ಸಿದ್ದರಾಮಯ್ಯನವರ ಕಾರ್ಯಕ್ರಮದಲ್ಲಿ ಪರೇಶ ಮೆಸ್ತಾ ಭಾಗಿಯಾಗಿದ್ದರು. 25 ಕಿಲೋ ಮೀಟರ್ ಪ್ರಯಾಣಿಸಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮ ಮುಗಿಸಿ ಸಂಜೆ ಮನೆಗೆ ಬಂದಿದ್ದ ಪರೇಶ ಮೇಸ್ತಾ ಮನೆಯಿಂದ ಸ್ನೇಹಿತರ ಭೇಟಿಗೆ ಹೋಗಿದ್ದರು ಎಂದು ಹೊನ್ನಾವರ ಕೋರ್ಟಗೆ ಸಿಬಿಐ ವರದಿ ಸಲ್ಲಿಸಿದೆ.

ಪರೇಶ ಮೇಸ್ತಾ ಒಡನಾಡಿಗಳು ಮತ್ತು ಆತನ ಸ್ನೇಹಿತರ ಹೇಳಿಕೆ ಪಡೆಯಲಾಗಿದೆ. ಪರೇಶ ಮೇಸ್ತಾ ಯಾವುದೇ ಹುಡುಗಿಯನ್ನು ಪ್ರೀತಿಸುತ್ತಿರಲಿಲ್ಲ.  ಶಬರಿಮಲೆಗೆ ಹೋಗಲು ತಂದೆಯ ಒಪ್ಪಿಗೆ ಪಡೆದುಕೊಂಡಿದ್ದ ಎಂದು ಹೇಳಲಾಗಿದೆ.

ಆತನ ಕೊಲೆ ಮಾಡಿದ ಕುರಿತು ಪುರಾವೆ ಇಲ್ಲ ಎಂದು ಸಿಬಿಐ ವರದಿ ಸಲ್ಲಿಸಿದೆ. 2017ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಕೋಮು ಗಲಭೆ ನಡೆದ ನಂತರ ಪರೇಶ ಮೇಸ್ತಾ ಶವವಾಗಿ ಪತ್ತೆಯಾಗಿದ್ದ. ಆತ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟಿರಬಹುದು ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದೆ.


Leave a Reply