ಬಂಧಿತರನ್ನು ಮಹಾರಾಷ್ಟ್ರದ ಸಾಂಗ್ಲಿಯ ಸಚಿನ ಮೇನಕುದಳೆ ಹಾಗೂ ಮಹಾರಾಷ್ಟ್ರದ ಮಾರುತಿ ಮಾರಗುಡೆ ಎಂದು ಗುರುತಿಸಲಾಗಿದೆ.
ಬೆಳಗಾವಿ ಪೊಲೀಸ್ ಆಯುಕ್ತರು ಹಾಗೂ ಇತರ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸಪೆಕ್ಟರ್ ನಂದೀಶ್ವರ ಕುಂಬಾರ ಹಾಗೂ ತಂಡವು ಸಾಂಗ್ಲಿಯಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಅಶೋಕ ಲೇಲ್ಯಾಂಡ್ ಗೂಡ್ಸ ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ ಸೂಕ್ತ ದಾಖಲೆಗಳಿಲ್ಲದೇ ಅಕ್ರಮವಾಗಿ ಕೋಟ್ಯಂತರ ರೂಪಾಯಿ ಹಣ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.ವಾಹನದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು, 2,73,27,500 ರೂಪಾಯಿ ನಗದು ಹಣವನ್ನು ಜಪ್ತಿ ಮಾಡಿದ್ದಾರೆ. ಅಕ್ರಮ ಹಣ ಸಾಗಣೆ ಮಾಡಲೆಂದೇ ಗೂಡ್ಸ ವಾಹನದ ಕ್ಯಾಬಿನ್ ನಲ್ಲಿ ಮಾರ್ಪಾಡು ಮಾಡಿರುವುದು ಕಂಡುಬಂದಿದೆ.
ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.








