LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಸೂರ್ಯಕಾಂತಿ ಖರೀದಿಗೆ ಬೆಂಬಲ ಬೆಲೆ ಘೋಷಣೆ

ಬೆಂಗಳೂರು, ಮೇ 8 : ಬೆಂಬಲ ಬೆಲೆ ಯೋಜನೆಯಡಿ 2025-26ನೇ ಸಾಲಿನ ಹಿಂಗಾರು ಹಂಗಾಮಿನ ಸೂರ್ಯಕಾಂತಿ ಬೆಳೆಯನ್ನು ಪ್ರತಿ ಕ್ವಿಂಟಾಲ್‌ಗೆ 7,721 ರೂ. ದರದಲ್ಲಿ ಖರೀದಿಸಲು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಆದೇಶ ಹೊರಡಿಸಿದ್ದಾರೆ.

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳ ಅನ್ವಯ ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ವಿಜಯನಗರ, ರಾಯಚೂರು ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ಖರೀದಿ ಕೇಂದ್ರಗಳನ್ನು ತೆರೆಯಲು ಸೂಚನೆ ನೀಡಲಾಗಿದೆ.

ಕೇಂದ್ರ ಸರ್ಕಾರದ ಖರೀದಿ ಸಂಸ್ಥೆಗಳಾಗಿ ನಾಫೆಡ್‌ ಮತ್ತು ಎನ್‌ಸಿಸಿಎಫ್‌ ಸಂಸ್ಥೆಗಳನ್ನು ನೇಮಕ ಮಾಡಲಾಗಿದ್ದು, ರಾಜ್ಯ ಸರ್ಕಾರದ ಖರೀದಿ ಸಂಸ್ಥೆಯಾಗಿ ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾಮಂಡಳವನ್ನು ನೇಮಿಸಲಾಗಿದೆ.

ರೈತರ ನೋಂದಣಿ ಅವಧಿಯನ್ನು 50 ದಿನ ಹಾಗೂ ಖರೀದಿ ಅವಧಿಯನ್ನು 60 ದಿನ ನಿಗದಿಪಡಿಸಲಾಗಿದೆ. ನೋಂದಣಿಯೊಂದಿಗೆ ಖರೀದಿ ಪ್ರಕ್ರಿಯೆಯನ್ನೂ ಆರಂಭಿಸಬೇಕು ಎಂದು ಜಿಲ್ಲಾ ಟಾಸ್ಕ್‌ಫೋರ್ಸ್‌ ಸಮಿತಿ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

ಗ್ರಾಮೀಣ ಭಾಗದ ರೈತರಿಗೆ ಅನುಕೂಲವಾಗುವಂತೆ ತಾಂತ್ರಿಕ ಮತ್ತು ವೈಜ್ಞಾನಿಕ ಸೌಲಭ್ಯ ಹೊಂದಿರುವ ಗೋದಾಮುಗಳಿರುವ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡು ಖರೀದಿ ಕೇಂದ್ರಗಳನ್ನು ತೆರೆಯಬೇಕು ಎಂದು ಸಚಿವರು ತಿಳಿಸಿದ್ದಾರೆ.

ನೋಂದಣಿ ಮತ್ತು ಖರೀದಿ ಪ್ರಕ್ರಿಯೆಯಲ್ಲಿ ಯಾವುದೇ ಸಮಸ್ಯೆ ಉಂಟಾಗದಂತೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ರೈತರ ಹೆಸರಿನಲ್ಲಿ ವರ್ತಕರು ಹಾಗೂ ಖರೀದಿ ಸಂಸ್ಥೆಗಳು ಬೆಂಬಲ ಬೆಲೆ ಯೋಜನೆಯನ್ನು ದುರ್ಬಳಕೆ ಮಾಡಿಕೊಳ್ಳದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿದೆ.

ಖರೀದಿ ಪ್ರಗತಿಯ ಮಾಹಿತಿಯನ್ನು ಪ್ರತಿದಿನ ರಾಜ್ಯ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯ ಸರ್ಕಾರದ ವೈಫಲ್ಯ ಬಯಲಿಗೆಳೆಯಲು ಸೆ. 1ರಿಂದ ಬಿಜೆಪಿ ಪಾದಯಾತ್ರೆ: ವಿಜಯೇಂದ್ರಜನರ ಆರೋಗ್ಯಕ್ಕಿಂತ ಆಹಾರ ಕಂಪನಿಗಳ ಲಾಬಿ ಮೇಲು! ‘ರೆಡ್‌ ಅಲರ್ಟ್‌’ ಲೇಬಲ್‌ ಪ್ರಸ್ತಾವದಿಂದ ಹಿಂದೆ ಸರಿದ ಸರ್ಕಾರಎಸ್‌ಐಆರ್‌ ಕರಡು ಪಟ್ಟಿಗೆ ನಾಗರಿಕ ಸಂಘಟನೆಗಳ ವಿರೋಧ; ಸೆಪ್ಟೆಂಬರ್‌ 1ರಂದು ಚುನಾವಣಾ ಆಯೋಗ ಚಲೋಅವಧಿ ಮೀರಿದ ಚಾಕೊಲೇಟ್‌ಗಾಗಿ ಕಸದ ರಾಶಿಗೆ ಮುಗಿಬಿದ್ದ ಜನ; ವಿಡಿಯೊ ವೈರಲ್ಅತ್ಯಾಚಾರಿ ಗುರ್ಮೀತ್ ಸಿಂಗ್‌ಗೆ ಮತ್ತೆ ಪೆರೋಲ್; 17ನೇ ಬಾರಿ ಜೈಲಿನಿಂದ ಹೊರಗೆಆಹಾರ ಧಾನ್ಯವನ್ನು ಕಡಿಮೆ ದರದಲ್ಲಿ ನೀಡಿ ಎಥೆನಾಲ್‌ ಖರೀದಿ: ಕೇಂದ್ರದ ವಿಚಿತ್ರ ನೀತಿಗೆ ಪ್ರಿಯಾಂಕ್‌ ಖರ್ಗೆ ಪ್ರಶ್ನೆಪಾಟ್ನಾದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ: ಪೊಲೀಸರೊಂದಿಗೆ ಘರ್ಷಣೆಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ ‘ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್’ ಸೀರತ್ ಅಭಿಯಾನದೆಹಲಿಯಲ್ಲಿ ರಸ್ತೆ ಅಪಘಾತ: ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಸೇರಿ ಆರು ಮಂದಿಗೆ ಗಾಯಶಾಲೆ ಸರಿಪಡಿಸುವ ಹೋರಾಟಕ್ಕೆ ಹಿಂಸೆಯ ಉತ್ತರ! ರಾಜಸ್ಥಾನದಲ್ಲಿ ಸಿಜೆಪಿ ತಂಡದ ಮೇಲೆ ದಾಳಿ