LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಸಿಬಿಐ, ದಿಲ್ಲಿ ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ₹15.98 ಲಕ್ಷ ವಂಚನೆ

ಉಡುಪಿ, ನ. 18: ಸಿಬಿಐ ಹಾಗೂ ದಿಲ್ಲಿ ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧಿಸುವುದಾಗಿ ಬೆದರಿಸಿ ವ್ಯಕ್ತಿಯೊಬ್ಬರಿಂದ ₹15.98 ಲಕ್ಷ ವರ್ಗಾಯಿಸಿಕೊಂಡು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ಉಡುಪಿಯ ಶೇಷಾಚಲ (51) ವಂಚನೆಗೊಳಗಾದವರು. ಅಕ್ಟೋಬರ್ 18ರಂದು ಬೆಳಗ್ಗೆ 11.25ಕ್ಕೆ ಕರೆ ಮಾಡಿದ ಅಪರಿಚಿತ ವ್ಯಕ್ತಿ, ದಿಲ್ಲಿಯಲ್ಲಿ ಶೇಷಾಚಲ ಅವರ ಹೆಸರಿನ ಐಸಿಐಸಿಐ ಬ್ಯಾಂಕ್ ಪಾಸ್‌ಬುಕ್ ಪತ್ತೆಯಾಗಿದೆ. ಅದು ಪಂಕಜ್ ಶರ್ಮಾ ಎಂಬಾತನ ಮನಿ ಲಾಂಡರಿಂಗ್, ಮಾದಕವಸ್ತು ಹಾಗೂ ಮಕ್ಕಳ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದೆ ಎಂದು ತಿಳಿಸಿದ್ದಾನೆ.

ಈ ಪ್ರಕರಣದಲ್ಲಿ ಬಂಧನಕ್ಕೆ ನ್ಯಾಯಾಲಯ ಆದೇಶಿಸಿದ್ದು, ತಕ್ಷಣ ದಿಲ್ಲಿಗೆ ಬರಬೇಕು ಅಥವಾ ವಿಡಿಯೊ ಕರೆ ಮೂಲಕ ತನಿಖೆಗೆ ಸಹಕರಿಸಬೇಕು ಎಂದು ಬೆದರಿಸಿದ್ದಾನೆ.

ಆರೋಪಿಗಳು ಹಿಂದಿಯಲ್ಲಿ ಮಾತನಾಡುತ್ತಿದ್ದ ಕಾರಣ ಶೇಷಾಚಲ ತಮ್ಮ ಪತ್ನಿಯ ಮೊಬೈಲ್ ಸಂಖ್ಯೆ ನೀಡಿದ್ದಾರೆ. ಬಳಿಕ ಆ ಸಂಖ್ಯೆಗೆ ವಿಡಿಯೊ ಕರೆ ಮಾಡಿದ ವ್ಯಕ್ತಿ ಪೊಲೀಸ್ ಸಮವಸ್ತ್ರ ಧರಿಸಿ, ತಾನು ದಿಲ್ಲಿ ಪೊಲೀಸ್ ತನಿಖಾಧಿಕಾರಿ ಎಂದು ಪರಿಚಯಿಸಿಕೊಂಡಿದ್ದಾನೆ. ಮತ್ತೊಂದು ಮೊಬೈಲ್‌ನಲ್ಲಿ ಪ್ರಕರಣದ ಸಂಖ್ಯೆಯನ್ನು ತೋರಿಸಿ ನಂಬಿಸಿದ್ದಾನೆ.

ನಂತರ ಮತ್ತೊಬ್ಬ ವ್ಯಕ್ತಿ ಕರೆ ಮಾಡಿ, ಪ್ರತಿ ಗಂಟೆಗೊಮ್ಮೆ ಸಂದೇಶ ಕಳುಹಿಸಬೇಕು. ಈ ವಿಷಯವನ್ನು ಯಾರಿಗೂ ತಿಳಿಸಬಾರದು, ತಿಳಿಸಿದರೆ ಅಪಾಯ ಎದುರಿಸಬೇಕಾಗುತ್ತದೆ ಎಂದು ಬೆದರಿಸಿದ್ದಾನೆ.

ಪ್ರತಿದಿನ ಶೇಷಾಚಲ ಅವರ ಪತ್ನಿಯ ಮೊಬೈಲ್‌ಗೆ ವಿಡಿಯೊ ಕರೆ ಮಾಡುತ್ತಿದ್ದ ಆರೋಪಿಗಳು, ನ್ಯಾಯಾಧೀಶರು, ಸಿಬಿಐ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ ಎಂದು ಹೇಳಿ, ಹಣ, ಚಿನ್ನಾಭರಣ ಮತ್ತು ಬ್ಯಾಂಕ್ ಖಾತೆಗಳ ವಿವರಗಳನ್ನು ಪಡೆದುಕೊಂಡಿದ್ದಾರೆ.

ರಿಸರ್ವ್ ಬ್ಯಾಂಕ್ ತನಿಖೆಯ ನೆಪದಲ್ಲಿ ಹಣವನ್ನು ತಾವು ಸೂಚಿಸಿದ ಖಾತೆಗಳಿಗೆ ವರ್ಗಾಯಿಸುವಂತೆ ತಿಳಿಸಿದ್ದಾರೆ. ಇದನ್ನು ನಂಬಿದ ಶೇಷಾಚಲ ಅಕ್ಟೋಬರ್ 31ರಂದು ಯೆಸ್ ಬ್ಯಾಂಕ್ ಖಾತೆಗೆ ₹11 ಲಕ್ಷ ಹಾಗೂ ನವೆಂಬರ್ 5ರಂದು ಬ್ಯಾಂಕ್ ಆಫ್ ಇಂಡಿಯಾ ಖಾತೆಗೆ ₹4,98,976 ವರ್ಗಾಯಿಸಿದ್ದಾರೆ.

ಒಟ್ಟು ₹15,98,976.40 ವಂಚನೆಯಾಗಿರುವುದಾಗಿ ಶೇಷಾಚಲ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಸಂಬಂಧ ಅಪರಾಧ ಕ್ರಮಾಂಕ 37/2026ರಡಿ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಕಲಂ 66(ಡಿ) ಹಾಗೂ ಭಾರತೀಯ ನ್ಯಾಯ ಸಂಹಿತೆಯ ಕಲಂ 318(4), 319(2), 308(2) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST