LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ರಾಜ್ಯದ ಮಹಿಳೆಯರಿಗೆ ಪ್ರತಿ ತಿಂಗಳು ೨ ಸಾವಿರ ರೂ.; ಕಾಂಗ್ರೆಸ್‌ ಘೋಷಣೆ

ಬೆಂಗಳೂರು ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬದ ಒಬ್ಬ ಮಹಿಳೆಗೆ ಪ್ರತಿ ತಿಂಗಳು 2,000 ರೂ. ಸಹಾಯಧನ ನೀಡುವ 'ಗೃಹಲಕ್ಷ್ಮಿ' ಯೋಜನೆಯನ್ನು ಕಾಂಗ್ರೆಸ್ ಇಂದು ಪ್ರಕಟಿಸಿದೆ.



ನಗರದ ಅರಮನೆ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ 'ನಾ ನಾಯಕಿ' ಸಮಾವೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಈ ಯೋಜನೆಗೆ ಸಂಬಂಧಿಸಿದ ಭಿತ್ತ ಪತ್ರ ಅನಾವರಣ ಮೂಲಕ ಅಧಿಕೃತವಾಗಿ ಯೋಜನೆಯನ್ನು ಘೋಷಿಸಿದರು.



ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರಕ್ಕೇರಿದರೆ ರಾಜ್ಯದ ಪ್ರತಿ ಕುಟುಂಬದ ಯಜಮಾನಿಗೆ ತಿಂಗಳಿಗೆ ರೂ. 2,000 ನೀಡಲಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಹ ಟ್ವೀಟ್ ಮಾಡಿದ್ದಾರೆ.



ರಾಜ್ಯದ ಮಹಿಳೆಯರೇ ನಿಮ್ಮ ಮನೆಯ ಗ್ಯಾಸ್ ಸಿಲಿಂಡರ್ ಖಾಲಿಯಾಗಿದೆ ಎಂಬ ಚಿಂತೆ ಬಿಡಿ. ನಿಮ್ಮ ಮನೆಯ ಸಿಲಿಂಡರ್ ತುಂಬಿಸುವುದು ಇನ್ನು ಮುಂದೆ ಕಾಂಗ್ರೆಸ್ ಹೊಣೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST