LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಡಿ.22 ರಿಂದ 30 ರವರೆಗೆ ಬೆಳಗಾವಿಯಲ್ಲಿ ಬೃಹತ್ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ; ನಾಳೆ ಮುಖ್ಯಮಂತ್ರಿಗಳಿಂದ ಉದ್ಘಾಟನೆ

ಬೆಳಗಾವಿ, ಡಿ.21: ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ ಮತ್ತು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಬೆಳಗಾವಿ ರವರ ಸಹಯೋಗದೊಂದಿಗೆ ಬೆಳಗಾವಿಯಲ್ಲಿ ಅಧಿವೇಶನದ ನಿಮಿತ್ತವಾಗಿ 22 ರಿಂದ 30 ರವರೆಗೆ ಬೆಳಗಾವಿಯ ಸರ್ದಾರ ಹೈಸ್ಕೂಲ್ ಮೈದಾನದಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳ ಬೃಹತ್ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ಆಯೋಜಿಸಲಾಗಿದೆ.



ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ಹಾಗೂ ಆರಂಭಿಕ ಗ್ರಾಮೀಣ ಉದ್ಯಮ ಯೋಜನೆಯಡಿ ಸಮುದಾಯ ಉದ್ಯಮ ನಿಧಿ ವಿತರಣೆ ಸಮಾರಂಭವನ್ನು ದಿ. 22 ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವ ಡಾ. ಸಿ.ಎನ್. ಅಶ್ವಥ ನಾರಾಯಣ ಉಪಸ್ಥಿತರಿರುತ್ತಾರೆ.



ರಾಜ್ಯದ ವಿವಿಧ ಜಿಲ್ಲೆಗಳಿಂದ ಅತ್ಯುತ್ತಮ ಗುಣಮಟ್ಟದ ವಿವಿಧ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟವನ್ನು ಈ ಮೇಳದಲ್ಲಿ ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ ಸಮಾರಂಭದಲ್ಲಿ ಆರಂಭಿಕ ಗ್ರಾಮೀಣ ಉದ್ಯಮ ಯೋಜನೆಯಡಿ ಕೊಪ್ಪಳ ಹಾಗೂ ಟಿ.ನರಸೀಪುರ ತಾಲ್ಲೂಕುಗಳ ಸ್ವ-ಸಹಾಯ ಗುಂಪುಗಳಿಗೆ ಸಮುದಾಯ ಉದ್ಯಮ ನಿಧಿಯನ್ನು ವಿತರಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.



ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಸಚಿವರಾದ ಗೋವಿಂದ ಎಂ, ಕಾರಜೋಳ, ಶ್ರೀಮತಿ ಶಶಿಕಲಾ ಅ. ಜೊಲ್ಲೆ ಆಗಮಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಅನಿಲ ಎಸ್. ಬೆನಕೆ ವಹಿಸಲಿದ್ದಾರೆ ಎಂದು ಎಂದು ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಅಭಿಯಾನ ನಿರ್ದೇಶಕ ಡಾ. ರಾಗಪಿಯಾ.ಆರ್ ತಿಳಿಸಿದ್ದಾರೆ.



150 ಮಳಿಗೆ ಸ್ಥಾಪನೆ; ಪ್ರವೇಶ ಉಚಿತ:



ಈ ಮೇಳದಲ್ಲಿ 150 ಮಳಿಗೆಗಳನ್ನು ಸ್ಥಾಪಿಸಲಾಗಿದ್ದು, ದಿನಾಂಕಃ22.12.2022 ರಿಂದ ದಿನಾಂಕ: 30.12.2022ರವರೆಗೆ ಉಚಿತ ಪ್ರವೇಶವಿದ್ದು, ಬೆಳಿಗ್ಗೆ 10.30 ಯಿಂದ ರಾತ್ರಿ 9.30ರವರೆಗೆ ಪ್ರದರ್ಶನ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಡಾ. ರಾಗಪಿಯಾ ಆರ್ ತಿಳಿಸಿದ್ದಾರೆ.



ಮಳಿಗೆಯಲ್ಲಿ ಸ್ವ-ಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸುವ ಉತ್ಪನ್ನಗಳಾದ ಈ ಮೇಳದಲ್ಲಿ ಕರಕುಶಲ ವಸ್ತುಗಳಾದ ಚನ್ನಪಟ್ಟಣದ ಮರದ ಗೊಂಬೆಗಳು, ಕೊಪ್ಪಳದ ಕಿನ್ನಾಳ ಆಟದ ಸಾಮಾನುಗಳು, ಮೊಳಕಾಲ್ಮೂರು ಸೀರೆಗಳು, ಇಳಕಲ್ ಸೀರೆಗಳು, ರೇಷ್ಮೆ ಸೀರೆಗಳು, ಮಸಾಲಾ ಉತ್ಪನ್ನಗಳು, ಸಿರಿ ಧಾನ್ಯ ಉತ್ಪನ್ನಗಳು, ಮೌಲ್ಯವರ್ಧಿತ ಕರಾವಳಿ ಉತ್ಪನ್ನಗಳು, ವಿವಿಧ ಬಗೆಯ ಉಪ್ಪಿನಕಾಯಿ, ಖಾದಿ ಉತ್ಪನ್ನಗಳು, ಬಾಳೆ ನಾರಿನಿಂದ ಉತ್ಪಾದಿಸಿದ ಉತ್ಪನ್ನಗಳು, ಗೃಹಾಲಂಕಾರಿಕ ವಸ್ತುಗಳು, ಪಾರಂಪರಿಕ ವಸ್ತುಗಳು, ಗೃಹೋಪಯೋಗಿ ವಸ್ತುಗಳು, ಆಹಾರ ಉತ್ಪನ್ನಗಳು ಮುಂತಾದವುಗಳು ಸಾರ್ವಜನಿಕರಿಗೆ ಕೈಗೆಟುಕುವ ಬೆಲೆಯಲ್ಲಿ ಲಭ್ಯವಾಗಲಿದೆ.



ಈ ಮೇಳದ ಮೈದಾನದಲ್ಲಿ ಮಕ್ಕಳಿಗೆ ಆಟಿಕೆ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಉತ್ತರ ಕರ್ನಾಟಕ ಸೇರಿದಂತೆ ಹೆಸರುವಾಸಿ ಆಹಾರಗಳ 10 ಮಳಿಗೆಗಳು ಸ್ಥಾಪಿಸಲಾಗಿದೆ. ಪ್ರಮುಖವಾಗಿ, ಆಹಾರ ಮಳಿಗೆಗಳಲ್ಲಿ ಉತ್ತರ ಕರ್ನಾಟಕದ ಚುರುಮರಿ ಮಂಡಕ್ಕಿ, ಜೋಳದ ಖಡಕ ರೊಟ್ಟಿ ಸೇರಿದಂತೆ ಹೋಳಿಗೆ, ನೀರ ದೋಸೆ ಮುಂತಾದ ಖಾದ್ಯಗಳು ದೊರೆಯಲಿವೆ.



25 ರಂದು ಅರ್ಜುನ ಜನ್ಯ-ಶಮಿತಾ ಮಲ್ನಾಡ ಸಂಗೀತ ಸಂಜೆ:



ಖ್ಯಾತ ಸಂಗೀತ ನಿರ್ದೇಶಕ ಅರ್ಜುನ ಜನ್ಯ, ಗಾಯಕಿಯರಾದ ಡಾ.ಶಮಿತಾ ಮಲ್ನಾಡ ಹಾಗೂ ತಂಡದವರಿಂದ ದಿನಾಂಕಃ25.12.2022 ರಂದು ಸಂಜೆ ಸಾಂಸ್ಕøತಿಕ ಕಾರ್ಯಕ್ರಮ ಆಯೋಜಿಸಲಾಗಿರುತ್ತದೆ ಹಾಗೂ ಪ್ರತೀ ದಿನ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಸ್ಥಳೀಯ ಕಲಾವಿದರಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.



ಈ ಒಂದು ಮೇಳದಲ್ಲಿ ಪ್ರಮುಖವಾಗಿ ನಗರ ಹಾಗೂ ಗ್ರಾಮೀಣ ಸ್ವ-ಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸುವ ಉತ್ಪನ್ನಗಳು ಮಾರಾಟ ಮಾಡುತ್ತಿರುವುದರಿಂದ ಹೆಚ್ಚು ಹೆಚ್ಚು ಸಾರ್ವಜನಿಕರು ಈ ಮೇಳದ ಸದುಪಯೋಗವನ್ನು ಪಡೆದುಕೊಂಡು ಸ್ವ-ಸಹಾಯ ಗುಂಪಿನ ಮಹಿಳೆಯರ ಆರ್ಥಿಕ ಸಬಲತೆಗೆ ಕೈಜೋಡಿಸಬೇಕೆಂದು ಕೋರಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗರ ಪಂಚಮಿ ದಿನವೇ ಹಾವು ಕಡಿತಕ್ಕೆ ಮಹಿಳೆ ಬಲಿಕಾಡುಹಂದಿಗಳ ದಾಳಿಗೆ ಕಬ್ಬು ಬೆಳೆ ನಾಶಗದ್ದಲದ ನಡುವೆಯೇ ಮುಕ್ತಾಯ ಕಂಡ ಸಂಸತ್ ಅಧಿವೇಶನ: ಚರ್ಚೆಯಿಲ್ಲದೆ 11 ಮಸೂದೆಗಳ ಅಂಗೀಕಾರ300 ಅಡಿ ಕುಸಿದ ವಿಮಾನ, ಪೈಲಟ್ ಗಾಂಜಾ ಸೇವನೆ ಪತ್ತೆ!ಮಾನವ ಹಕ್ಕುಗಳ ಪಾಠ ನಿಲ್ಲಿಸಿ; ಫ್ರಾನ್ಸ್ ವಿರುದ್ಧ ಇರಾನ್ ಕಿಡಿ25 ಬಿಜೆಪಿ ನಾಯಕರು, ಹಿಂದುತ್ವ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ನ್ಯಾಯಾಲಯದ ಅನುಮತಿ!ದೇಶಕ್ಕೇ ಮಾದರಿಯಾಗುವಂತೆ ಗಣೇಶೋತ್ಸವ ಆಚರಿಸೋಣಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಮೊಬೈಲ್‌, ಪೆನ್‌ಡ್ರೈವನಲ್ಲಿ ಅಶ್ಲೀಲ ವಿಡಿಯೋ ಪತ್ತೆ ; ವಿಐಪಿ ಸೆಲ್‌ನಿಂದ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಭೂಕಂಪದೇಶಭಕ್ತಿಯ ಸರ್ಟಿಫಿಕೇಟ್ ನೀಡುವ ಮುನ್ನ ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜದ ಇತಿಹಾಸ ಹೇಳಲಿ: ಪ್ರಿಯಾಂಕ್ ಖರ್ಗೆ