LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಕಡಲೆಕಾಯಿ ಗಂಟಲಲ್ಲಿ ಸಿಲುಕಿ 3 ವರ್ಷದ ಬಾಲಕನ ಸಾವು

ಮಲಪ್ಪುರಂ, ಜು. 15: ಕೇರಳದ ಮಲಪ್ಪುರಂ ಜಿಲ್ಲೆಯ ಕುನ್ನುಂಪುರಂನಲ್ಲಿ ಮಿಕ್ಸ್ಚರ್ ಸೇವಿಸುತ್ತಿದ್ದ ವೇಳೆ ಅದರಲ್ಲಿದ್ದ ಕಡಲೆಕಾಯಿ ಗಂಟಲಲ್ಲಿ ಸಿಲುಕಿ ಮೂರು ವರ್ಷದ ಬಾಲಕ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಮೃತ ಬಾಲಕನನ್ನು ಚೆಂಗಣಿ ನಿವಾಸಿಗಳಾದ ಮುನೀರ ಹಾಗೂ ಫರ್ಸಿನಾ ದಂಪತಿಯ ಪುತ್ರ ಮುಹಮ್ಮದ ರಿಝಾನ್ ಎಂದು ಗುರುತಿಸಲಾಗಿದೆ. ಸೋಮವಾರ ಬೆಳಗ್ಗೆ ಮನೆಯಲ್ಲಿ ಮಿಕ್ಸ್ಚರ್ ತಿನ್ನುತ್ತಿದ್ದ ವೇಳೆ ಅದರಲ್ಲಿದ್ದ ಕಡಲೆಕಾಯಿ ಆಕಸ್ಮಿಕವಾಗಿ ಬಾಲಕನ ಗಂಟಲಲ್ಲಿ ಸಿಲುಕಿದೆ. ಇದರಿಂದ ತೀವ್ರ ಉಸಿರಾಟದ ತೊಂದರೆ ಉಂಟಾಗಿ ಬಾಲಕ ಒದ್ದಾಡಲಾರಂಭಿಸಿದ್ದಾನೆ.

ಬಾಲಕನ ಸ್ಥಿತಿ ಗಂಭೀರವಾಗಿರುವುದನ್ನು ಗಮನಿಸಿದ ಪೋಷಕರು ಕೂಡಲೇ ಆತನನ್ನು ಕುನ್ನುಂಪುರಂನ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯರು ತುರ್ತು ಚಿಕಿತ್ಸೆ ನೀಡಿ ಪ್ರಾಣ ಉಳಿಸಲು ಹರಸಾಹಸ ಪಟ್ಟರೂ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ.

ಗಂಟಲಲ್ಲಿ ಕಡಲೆಕಾಯಿ ಸಿಲುಕಿ ಉಸಿರಾಟದ ಮಾರ್ಗ ಸಂಪೂರ್ಣವಾಗಿ ಮುಚ್ಚಿಕೊಂಡಿದ್ದೇ ಸಾವಿಗೆ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ. ಇತ್ತೀಚೆಗೆ ಕೇರಳದಲ್ಲೇ ಅನಸ್ತೇಶಿಯಾ ನೀಡಿದ ಬಳಿಕ 18 ತಿಂಗಳ ಮಗು ಮೃತಪಟ್ಟ ಪ್ರಕರಣವೂ ವರದಿಯಾಗಿದ್ದು, ಸಂಬಂಧಪಟ್ಟ ವೈದ್ಯರ ವಿರುದ್ಧ ಪ್ರಕರಣ ದಾಖಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ