LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

30% ಕಮಿಷನ್ ಬೇಡಿಕೆ; ಗ್ರಾಮ ಪಂಚಾಯತ್ ಸದಸ್ಯೆ ರಾಜೀನಾಮೆ

ರಾಯಬಾಗ : ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಕಮಿಷನ್ ಪ್ರಕರಣದಿಂದ ರಾಷ್ಟ್ರ ಮಟ್ಟದಲ್ಲಿ '40% ಕಮಿಷನ್' ಸರಕಾರ ಎಂದು ಕುಖ್ಯಾತಿಗೊಳಗಾಗಿರುವ ಬಿಜೆಪಿ ಈಗ ಅಂತಹದೇ ಮತ್ತೊಂದು ಪ್ರಕರಣದ ಆರೋಪಕ್ಕೆ ಗುರಿಯಾಗಿದೆ.



ರಾಯಬಾಗ ತಾಲೂಕಿನ ಮೇಖಳಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಕಮೀಷನ್ ಬೇಡಿಕೆ ಇಟ್ಟಿರುತ್ತಾರೆ ಎಂದು ಆರೋಪಿಸಿ ಗ್ರಾ.ಪಂ. ಸದಸ್ಯೆಯೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ರಾಜೀನಾಮೆ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.



ಮೇಖಳಿ ಗ್ರಾಮ ಪಂಚಾಯತಿಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಗ್ರಾ.ಪಂ. ಸದಸ್ಯೆ ಸುಧಾ ಸಿದ್ದಪ್ಪ ರಾಜಂಗಳೆ ಅವರು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮ ರಾಜೀನಾಮೆ ಪತ್ರದಲ್ಲಿ ಗ್ರಾ.ಪಂ. ಯೋಜನೆಯಡಿ ಬರುವ ೧೪ನೇ, ೧೫ನೇ ಹಾಗೂ ಉದ್ಯೋಗ ಖಾತ್ರಿ ಯೋಜನೆ ಅನುದಾನಗಳಿಗೆ ಅನುಮತಿ ಪಡೆಯಲು ಪ್ರತಿ ಶತ ಹಣವನ್ನು ತಾ.ಪಂ. ಮತ್ತು ಜಿ.ಪಂ.ಯರಿಗೆ ನೀಡಬೇಕೆಂದು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಕೇಳುತ್ತಾರೆ ಎಂದು ಗಂಭೀರ  ಆರೋಪ ಮಾಡಿದ್ದಾರೆ.



ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಾಡಿಸುವ ಕಾಮಗಾರಿ ಕಾರ‍್ಯಗಳಿಗೆ ಪಿಡಿಒ ಅವರಿಗೆ ಶೇ 10% ಇಂಜನೀಯರ ಅವರಿಗೆ ಶೇ10% ತಾ.ಪಂ. ಎಡಿ ಮತ್ತು ಇಒ ಅವರಿಗೆ ಶೇ 7% ಹಾಗೂ ಟೆಕ್ನಿಕಲ್‌ದವರಿಗೆ ಪ್ರತಿಶತ ಶೇ 3% ಹೀಗೆ ಒಟ್ಟು ಪ್ರತಿಶತ ಶೇ 30 % ರಷ್ಟು ನೀಡಬೇಕೆಂದು ಅಧಿಕಾರಿ ಕೇಳುತ್ತಾರೆಂದು ಆರೋಪಿಸಿ, ತಮಗೆ ಹಣ ನೀಡಲು ಆಗದೇ ಇರುವುದರಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ.



ಈ ಪ್ರಕರಣ ಸಂಬಂಧಿಸಿದಂತೆ ದೂರವಾಣಿಯಲ್ಲಿ ಪ್ರತಿಕ್ರಿಯೆ ನೀಡಿದ ಪಿಡಿಒ ಮಂಜುನಾಥ ದಳವಾಯಿ ಅವರು, ಈ ಪ್ರಕರಣ ತಮ್ಮ ಗಮನಕ್ಕೆ ಬಂದಿಲ್ಲ ಎಂದು ಉತ್ತರಿಸಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ