LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಬೀದಿನಾಯಿ ದಾಳಿಗೆ 5 ತಿಂಗಳ ಹಸುಗೂಸು ಬಲಿ

ಬೀದರ್, ಮೇ 9 : ರಾಜ್ಯದಲ್ಲಿ ಬೀದಿನಾಯಿಗಳ ಹಾವಳಿ ಮುಂದುವರಿದಿರುವ ನಡುವೆ ಬೀದರ್‌ ಜಿಲ್ಲೆಯ ಹುಮ್ನಾಬಾದ್‌ ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ಬೀದಿನಾಯಿ ದಾಳಿಗೆ 5 ತಿಂಗಳ ಹಸುಗೂಸು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಶಿವಾನಿ ಮೃತಪಟ್ಟ ಮಗು. ಸುಧಾ ಮತ್ತು ಸಿದ್ದಪ್ಪ ದಂಪತಿಯ ಪುತ್ರಿಯಾಗಿದ್ದಾಳೆ.

ಮಗುವನ್ನು ಮನೆಯ ಪಡಸಾಲೆಯಲ್ಲಿ ಮಲಗಿಸಿ ತಾಯಿ ಕೆಲಸ ಮಾಡುತ್ತಿದ್ದ ವೇಳೆ ಬೀದಿನಾಯಿ ಮನೆಯೊಳಗೆ ನುಗ್ಗಿ ಮಗುವಿನ ಮೇಲೆ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

ನಾಯಿ ಮಗುವನ್ನು ಮನಬಂದಂತೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ. ತಕ್ಷಣ ಮಗುವನ್ನು ಬೀದರ್‌ ಬ್ರಿಮ್ಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ.

ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಬೀದಿನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯ ಸರ್ಕಾರದ ವೈಫಲ್ಯ ಬಯಲಿಗೆಳೆಯಲು ಸೆ. 1ರಿಂದ ಬಿಜೆಪಿ ಪಾದಯಾತ್ರೆ: ವಿಜಯೇಂದ್ರಜನರ ಆರೋಗ್ಯಕ್ಕಿಂತ ಆಹಾರ ಕಂಪನಿಗಳ ಲಾಬಿ ಮೇಲು! ‘ರೆಡ್‌ ಅಲರ್ಟ್‌’ ಲೇಬಲ್‌ ಪ್ರಸ್ತಾವದಿಂದ ಹಿಂದೆ ಸರಿದ ಸರ್ಕಾರಎಸ್‌ಐಆರ್‌ ಕರಡು ಪಟ್ಟಿಗೆ ನಾಗರಿಕ ಸಂಘಟನೆಗಳ ವಿರೋಧ; ಸೆಪ್ಟೆಂಬರ್‌ 1ರಂದು ಚುನಾವಣಾ ಆಯೋಗ ಚಲೋಅವಧಿ ಮೀರಿದ ಚಾಕೊಲೇಟ್‌ಗಾಗಿ ಕಸದ ರಾಶಿಗೆ ಮುಗಿಬಿದ್ದ ಜನ; ವಿಡಿಯೊ ವೈರಲ್ಅತ್ಯಾಚಾರಿ ಗುರ್ಮೀತ್ ಸಿಂಗ್‌ಗೆ ಮತ್ತೆ ಪೆರೋಲ್; 17ನೇ ಬಾರಿ ಜೈಲಿನಿಂದ ಹೊರಗೆಆಹಾರ ಧಾನ್ಯವನ್ನು ಕಡಿಮೆ ದರದಲ್ಲಿ ನೀಡಿ ಎಥೆನಾಲ್‌ ಖರೀದಿ: ಕೇಂದ್ರದ ವಿಚಿತ್ರ ನೀತಿಗೆ ಪ್ರಿಯಾಂಕ್‌ ಖರ್ಗೆ ಪ್ರಶ್ನೆಪಾಟ್ನಾದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ: ಪೊಲೀಸರೊಂದಿಗೆ ಘರ್ಷಣೆಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ ‘ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್’ ಸೀರತ್ ಅಭಿಯಾನದೆಹಲಿಯಲ್ಲಿ ರಸ್ತೆ ಅಪಘಾತ: ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಸೇರಿ ಆರು ಮಂದಿಗೆ ಗಾಯಶಾಲೆ ಸರಿಪಡಿಸುವ ಹೋರಾಟಕ್ಕೆ ಹಿಂಸೆಯ ಉತ್ತರ! ರಾಜಸ್ಥಾನದಲ್ಲಿ ಸಿಜೆಪಿ ತಂಡದ ಮೇಲೆ ದಾಳಿ