LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ತೇಗೂರು ಬಳಿ ಕಾರ್ - ಲಾರಿ ಅಪಘಾತ; 5 ಸಾವು

ಕಿತ್ತೂರು : ಮುಂದೆ ಹೊರಟಿದ್ದ ಲಾರಿಗೆ ಹಿಂದಿನಿಂದ ರಭಸವಾಗಿ ಕಾರ್ ಡಿಕ್ಕಿ ಹೊಡೆದು ಓರ್ವ ಪಾದಚಾರಿ ಸೇರಿದಂತೆ ಐವರು ಸ್ಥಳದಲ್ಲೇ ಅಸುನೀಗಿದ ಘಟನೆ ಕಿತ್ತೂರು ತಾಲೂಕಿನ ತೇಗೂರು ಗ್ರಾಮದ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ ಗುರುವಾರ ರಾತ್ರಿ ಸಂಭವಿಸಿದೆ. ಘಟನೆಯಲ್ಲಿ ಇತರ ನಾಲ್ವರು ಗಾಯಗೊಂಡಿದ್ದಾರೆ.



ಮೃತರನ್ನು ಕಿತ್ತೂರ ತಾಲ್ಲೂಕಿನ ಅವರಾದಿ ಗ್ರಾಮದ ಮಹಾಂತೇಶ ಬಸಪ್ಪ ಮುದ್ದೋಜಿ, 29, ನಾಗಪ್ಪ ಈರಪ್ಪ ಮುದ್ದೋಜಿ 40, ಮತ್ತು ನೀಚಣಿಕಿ ಗ್ರಾಮದ

ಬಸವರಾಜ ಶಿವಪುತ್ರಪ್ಪ ನರಗುಂದ, 35, ಶ್ರೀಕುಮಾರ ನರಗುಂದ, 5, ಮತ್ತು ಹೆಬ್ಬಳ್ಳಿಯ ಈರಣ್ಣ ಗುರುಸಿದ್ದಪ್ಪ ರಾಮಮನಗೌಡರ 35 ಎಂದು ಗುರುತ್ತಿಸಲಾಗಿದೆ.



ಈರಣ್ಣ ರಾಮನಗೌಡರ ರಸ್ತೆ ಬದಿಯಿಂದ ಹೊರಟಿದ್ದರು. ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಕಾರ್ ಈರಣ್ಣ ಅವರಿಗೂ ಹಾಯ್ದು ಅವರೂ ಸ್ಥಳದಲ್ಲೇ ಸಾವಿಗೀಡಾದರು.



ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಲ್ಲಿ ಗಾಯಗೊಂಡಿರುವ ಶಿವಕುಮಾರ ಬಸವರಾಜ ನರಗುಂದ, ಮಡಿವಾಳಪ್ಪ ರಾಜು ಅಳ್ನಾವರ ಅವರನ್ನು ಹುಬ್ಬಳ್ಳಿಯ ಕಿಮ್ಸ ಆಸ್ಪತ್ರೆಗೆ ಮತ್ತು ಪ್ರಕಾಶ ಗೌಡ ಶಂಕರಗೌಡ ಪಾಟೀಲ ಮತ್ತು ಮಂಜುನಾಥ ಮಹಾಂತೇಶ ಮುಧೋಳ ಅವರನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೂ ಸೇರಿಸಲಾಗಿದೆ.



ಗರಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ