LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

12 ವರ್ಷಗಳಲ್ಲಿ 50 ಕೋಟಿ ಜನ ಬಡತನದಿಂದ ಹೊರಬಂದಿದ್ದಾರೆ

ಖರಗಪುರ, ನ. 21: ಹಿಂದೆ ಕೆಂಪುಕೋಟೆಯಿಂದ ಬಡತನ ನಿರ್ಮೂಲನೆಯ ಕುರಿತು ಭಾಷಣ ಮಾಡುತ್ತಿದ್ದವರು ಕಡತಗಳನ್ನು ಸಿದ್ಧಪಡಿಸುವುದನ್ನು ಬಿಟ್ಟರೆ ಬೇರೇನೂ ಮಾಡುತ್ತಿರಲಿಲ್ಲ. ಆದರೆ, ಕಳೆದ 12 ವರ್ಷಗಳಲ್ಲಿ ತಮ್ಮ ಸರ್ಕಾರ ಬಡವರ ಸಬಲೀಕರಣಕ್ಕೆ ಆದ್ಯತೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ಪಶ್ಚಿಮ ಬಂಗಾಳದ ಐಐಟಿ ಖರಗಪುರದ 75ನೇ ವರ್ಷಾಚರಣೆ ಸಮಾರಂಭದಲ್ಲಿ ಶನಿವಾರ ಮಾತನಾಡಿದ ಅವರು, ಭಾರತ ತನ್ನ ಚಿಂತನೆಯ ಮಿತಿಗಳನ್ನು ಮೀರಿ ಹೊಸ ಅವಕಾಶಗಳನ್ನು ಸೃಷ್ಟಿಸಿದೆ. ದೇಶದ ಸಾಮರ್ಥ್ಯವನ್ನು ಬಳಸಿಕೊಳ್ಳುವ ಮೂಲಕ ಬಡವರ ಜೀವನಮಟ್ಟ ಸುಧಾರಿಸಲು ಸಾಧ್ಯವಾಗಿದೆ ಎಂದರು.

ವಿಶ್ವ ಬ್ಯಾಂಕ್ ವರದಿಯನ್ನು ಉಲ್ಲೇಖಿಸಿದ ಮೋದಿ, ಕಳೆದ 12–13 ವರ್ಷಗಳಲ್ಲಿ ಸುಮಾರು 50 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಇದು ದೇಶದ ಆಡಳಿತ, ನೀತಿಗಳು ಹಾಗೂ ಚಿಂತನೆಯಲ್ಲಾದ ಬದಲಾವಣೆಯ ಪರಿಣಾಮವಾಗಿದೆ ಎಂದು ಪ್ರತಿಪಾದಿಸಿದರು.

ಸ್ವಾತಂತ್ರ್ಯ ಹೋರಾಟದ ನೆನಪು

ಸ್ವಾತಂತ್ರ್ಯ ಹೋರಾಟಗಾರರನ್ನು ಬಂಧಿಸಿಡಲು ಬಳಸುತ್ತಿದ್ದ ಶಿಬಿರವಿದ್ದ ಸ್ಥಳದಲ್ಲೇ ಐಐಟಿ ಖರಗಪುರ ಸ್ಥಾಪನೆಯಾಗಿದೆ. ಹೋರಾಟಗಾರರ ತ್ಯಾಗ ಮತ್ತು ಆದರ್ಶಗಳಿಂದ ವಿದ್ಯಾರ್ಥಿಗಳು ಸ್ಫೂರ್ತಿ ಪಡೆಯಬೇಕು ಎಂದು ಕರೆ ನೀಡಿದರು.

ದೇಶದ ಮೊದಲ ಐಐಟಿಯಾಗಿರುವ ಈ ಸಂಸ್ಥೆಯು 75 ವರ್ಷಗಳ ಪಯಣದಲ್ಲಿ ಅನೇಕ ಮೈಲಿಗಲ್ಲುಗಳನ್ನು ಸಾಧಿಸಿದೆ. ಎತ್ತಿನಗಾಡಿಗಳ ಯುಗದಿಂದ ಬುಲೆಟ್ ರೈಲುಗಳ ಯುಗದವರೆಗೆ ಭಾರತ ಕಂಡಿರುವ ಪರಿವರ್ತನೆಗೆ ಸಾಕ್ಷಿಯಾಗಿದೆ ಎಂದು ಬಣ್ಣಿಸಿದರು.

ಸೆಮಿಕಂಡಕ್ಟರ್‌ಗಳು, ಬಾಹ್ಯಾಕಾಶ ತಂತ್ರಜ್ಞಾನ ಹಾಗೂ ಕೈಗಾರಿಕಾ ಅಭಿವೃದ್ಧಿಯಲ್ಲಿ ಭಾರತ ಮಹತ್ವದ ಪ್ರಗತಿ ಸಾಧಿಸಿದೆ. ‘ವಿಕಸಿತ ಭಾರತ’ ಗುರಿ ಸಾಧಿಸುವಲ್ಲಿ ಐಐಟಿ ಖರಗ್‌ಪುರದ ಸಂಶೋಧನೆ ಮತ್ತು ನಾವೀನ್ಯತೆ ಪ್ರಮುಖ ಪಾತ್ರ ವಹಿಸಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST