LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸಹಕಾರಿ ಸಂಘಗಳ ಲೆಕ್ಕಪರಿಶೋಧನೆಗೆ 6 ತಿಂಗಳ ಡಿಪ್ಲೊಮಾ ಕೋರ್ಸ

ಬೆಂಗಳೂರು, ಅ.28: ಸಹಕಾರಿ ಕ್ಷೇತ್ರದ ಹಣಕಾಸು ವ್ಯವಹಾರಗಳಲ್ಲಿ ಪಾರದರ್ಶಕತೆ ಹೆಚ್ಚಿಸುವುದರ ಜತೆಗೆ ನಿರುದ್ಯೋಗಿ ಪದವೀಧರರಿಗೆ ಸ್ವಯಂ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ರಾಜ್ಯದಲ್ಲಿ 6 ತಿಂಗಳ ಅವಧಿಯ ‘ಡಿಪ್ಲೊಮಾ ಇನ್ ಕೋ-ಆಪರೇಟಿವ್ ಆಡಿಟ್’ ಎಂಬ ನೂತನ ಕೋರ್ಸ್ ಆರಂಭಿಸಲಾಗುತ್ತಿದೆ ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಬುಧವಾರ ನಗರದ ರೇಸ್‌ಕೋರ್ಸ್ ರಸ್ತೆಯ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ರಾಜ್ಯ ಸಹಕಾರ ಇಲಾಖೆಯ ಸಹಯೋಗದಲ್ಲಿ ಈ ತರಬೇತಿ ಕಾರ್ಯಕ್ರಮ ರೂಪಿಸಲಾಗಿದೆ. ಬಿಬಿಎ, ಬಿಬಿಎಂ, ಎಂಬಿಎ ಹಾಗೂ ಬಿಕಾಂ ಪದವೀಧರರು ಕೋರ್ಸ್‌ಗೆ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ 6 ತಿಂಗಳ ಕಾಲ 8 ವಿಭಾಗಗಳಲ್ಲಿ ಸಹಕಾರಿ ಸಂಘಗಳ ಲೆಕ್ಕಪರಿಶೋಧನೆ ಕುರಿತು ಸಮಗ್ರ ತರಬೇತಿ ನೀಡಲಾಗುವುದು ಎಂದು ವಿವರಿಸಿದರು.

ತರಬೇತಿ ಯಶಸ್ವಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ಪರವಾನಗಿ ನೀಡಲಾಗುವುದು. ಪರವಾನಗಿ ಪಡೆದವರು ಸಹಕಾರಿ ಸಂಘಗಳ ಲೆಕ್ಕಪರಿಶೋಧನೆ ನಡೆಸಿ ನಿಗದಿತ ಶುಲ್ಕ ಪಡೆಯಬಹುದು. ಇದರಿಂದ ಪದವೀಧರರಿಗೆ ಸ್ವಯಂ ಉದ್ಯೋಗದ ಅವಕಾಶ ದೊರೆಯಲಿದೆ ಎಂದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಅರ್ಹ ಅಭ್ಯರ್ಥಿಗಳಿಗೆ ಸಂಪೂರ್ಣ ಉಚಿತ ತರಬೇತಿ ನೀಡಲಾಗುವುದು. ಇತರ ಅಭ್ಯರ್ಥಿಗಳಿಗೆ 6 ತಿಂಗಳ ಕೋರ್ಸ್‌ಗೆ ₹10,000 ಶುಲ್ಕ ನಿಗದಿಪಡಿಸಲಾಗಿದೆ. ಅಕ್ಟೋಬರ್ 30ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ನವೆಂಬರ್ 14 ಕೊನೆಯ ದಿನವಾಗಿದೆ. ಅದೇ ದಿನ ಆರಂಭವಾಗುವ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭದಲ್ಲಿ ಯೋಜನೆಗೆ ಅಧಿಕೃತ ಚಾಲನೆ ನೀಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ಬೆಂಗಳೂರು, ಬೆಳಗಾವಿ, ಧಾರವಾಡ, ಮೈಸೂರು, ಮಡಿಕೇರಿ, ಕಲಬುರಗಿ, ಮಂಗಳೂರು ಹಾಗೂ ಶಿವಮೊಗ್ಗದ 8 ಪ್ರಮುಖ ಸಹಕಾರ ತರಬೇತಿ ಕೇಂದ್ರಗಳಲ್ಲಿ ಕೋರ್ಸ್ ನಡೆಸಲಾಗುವುದು. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧಿಕೃತ ಜಾಲತಾಣದ ಮೂಲಕ ಹೆಚ್ಚಿನ ಮಾಹಿತಿ ಪಡೆಯಬಹುದು.

ಸಹಕಾರಿ ಸಂಘಗಳ ಲೆಕ್ಕಪರಿಶೋಧನೆಯ ಸಂದರ್ಭದಲ್ಲಿ ಹಣ ದುರುಪಯೋಗ, ಆಡಳಿತಾತ್ಮಕ ಲೋಪ ಅಥವಾ ಕಾನೂನುಬಾಹಿರ ಚಟುವಟಿಕೆಗಳು ಕಂಡುಬಂದರೆ ಅವುಗಳನ್ನು ಸಂಬಂಧಪಟ್ಟ ಸಂಘಗಳ ಆಡಳಿತ ಮಂಡಳಿಯ ಗಮನಕ್ಕೆ ತರಬೇಕು. ಲೆಕ್ಕಪರಿಶೋಧನಾ ವರದಿಯ ಪ್ರತಿಯನ್ನು ಇಲಾಖೆಗೆ ಸಲ್ಲಿಸಬೇಕು. ವರದಿಯ ಆಧಾರದ ಮೇಲೆ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಲು ಅವಕಾಶವಿದೆ ಎಂದು ಸಚಿವರು ಹೇಳಿದರು.

ರಾಜ್ಯದಲ್ಲಿ ಸುಮಾರು 32 ಲಕ್ಷ ಕೃಷಿಕ ಕುಟುಂಬಗಳಿಗೆ ವಾರ್ಷಿಕ ₹25,000 ಕೋಟಿ ಬಡ್ಡಿರಹಿತ ಬೆಳೆ ಸಾಲ ವಿತರಿಸಲಾಗುತ್ತಿದೆ. ಸಹಕಾರಿ ಬ್ಯಾಂಕುಗಳು, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕುಗಳು ಹಾಗೂ ಅಪೆಕ್ಸ್ ಬ್ಯಾಂಕುಗಳ ಮೂಲಕ ರೈತರಿಗೆ ಸಾಲ ಸೌಲಭ್ಯ ಒದಗಿಸಲಾಗುತ್ತಿದೆ. ಅಲ್ಪಾವಧಿ ಬೆಳೆ ಸಾಲದ ಜತೆಗೆ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲಗಳನ್ನೂ ನೀಡಲಾಗುತ್ತಿದೆ ಎಂದು ವಿವರಿಸಿದರು.

ಸಹಕಾರಿ ಸಂಸ್ಥೆಗಳ ಮೇಲೆ ಸಾರ್ವಜನಿಕರ ವಿಶ್ವಾಸ ಉಳಿಸಿಕೊಳ್ಳಲು ಹಣಕಾಸು ನಿರ್ವಹಣೆಯಲ್ಲಿ ಪಾರದರ್ಶಕತೆ ಅತ್ಯಗತ್ಯ. ಬಹುರಾಜ್ಯ ಸಹಕಾರಿ ಸಂಘಗಳ ಕಾರ್ಯನಿರ್ವಹಣೆ ಹಾಗೂ ಲೆಕ್ಕಪರಿಶೋಧನೆ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿದ್ದು, ಅವುಗಳ ಸಮರ್ಪಕ ಪರಿಶೀಲನೆಗೆ ಆದ್ಯತೆ ನೀಡಲಾಗುವುದು ಎಂದು ಲಕ್ಷ್ಮಣ ಸವದಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಹಾಗೂ ಶಾಸಕ ಜಿ.ಟಿ. ದೇವೇಗೌಡ ಸೇರಿದಂತೆ ಪದಾಧಿಕಾರಿಗಳು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಿತ್ತೂರು ಬಳಿ ಭೀಕರ ರಸ್ತೆ ಅಪಘಾತ: ಪತಿ, ಪತ್ನಿ ಹಾಗೂ ಅಳಿಯನ ದುರ್ಮರಣಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಶೂನ್ಯ: ಪ್ರಧಾನಿ ಮೋದಿ ವ್ಯಂಗ್ಯಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ.3ರಷ್ಟು ಹೆಚ್ಚಳ20 ನಿಮಿಷಗಳಲ್ಲಿ ಅಂಬ್ಯುಲೆನ್ಸ್ ತಲುಪದಿದ್ದರೆ ದಂಡ; ಪ್ರತಿ ತಾಲೂಕಿನಲ್ಲಿ 5 ಹಾಸಿಗೆಗಳ ತೀವ್ರ ನಿಗಾ ಘಟಕಪರಿಷತ್ ಚುನಾವಣೆ ಸೋಲು: ಅಧ್ಯಯನ ಮಾಡಿ ತಪ್ಪು ಸರಿಪಡಿಸಿಕೊಳ್ಳುತ್ತೇವೆಸಹಕಾರಿ ಸಂಘಗಳ ಲೆಕ್ಕಪರಿಶೋಧನೆಗೆ 6 ತಿಂಗಳ ಡಿಪ್ಲೊಮಾ ಕೋರ್ಸಎಸ್‌ಐಆರ್ ಕುರಿತು ಕಾಂಗ್ರೆಸ್ ಆರೋಪಗಳಲ್ಲಿ ಹುರುಳಿಲ್ಲ: ಅಶ್ವತ್ಥನಾರಾಯಣಸಕ್ಕರೆ ಎಂಎಸ್‌ಪಿ ಹೆಚ್ಚಳಕ್ಕೆ ಆಗ್ರಹಿಸಿ ಗೋದಾಮುಗಳಿಗೆ ಬೀಗಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರ