LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

15 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಬೆತ್ತಲಾಗಿ 2 ಕಿಲೋ ಮೀಟರ್ ಓಡಿದ ಬಾಲಕಿ

ಲಖನೌ :ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ದುಷ್ಕರ್ಮ ನಡೆದ ಬಗ್ಗೆ ದಿನನಿತ್ಯ ವರದಿಗಳು ಬರುತ್ತಿದ್ದು ಅಂಥದ್ದೇ ಮತ್ತೊಂದು ಹೀನಕೃತ್ಯ ವರದಿಯಾಗಿದೆ. ಮೊರಾದಾಬಾದ್‌ನಲ್ಲಿ ಜಾತ್ರೆಗೆ ತೆರಳಿದ್ದ 15 ವರ್ಷದ ಬಾಲಕಿಯನ್ನು ಅಪಹರಿಸಿ ಆಕೆಯ ಮೇಲೆ ಐವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.



ಇದರಿಂದ ಆಘಾತಗೊಂಡ ರಕ್ತಸ್ರಾವವಾಗುತ್ತಿದ್ದ ಆಕೆ ತನ್ನ ಪ್ರಾಣ ಉಳಿಸಿಕೊಳ್ಳಲು ರಸ್ತೆಯಲ್ಲಿ ನಗ್ನವಾಗಿಯೇ ಓಡಿಕೊಂಡು ಹೋಗುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.



ಬಾಲಕಿಯ ಬಟ್ಟೆಯನ್ನು ಕಸಿದುಕೊಂಡ ಕಾಮುಕರು ಆಕೆಯನ್ನು ಬೆತ್ತಲೆಯಾಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುವಂತೆ ಮಾಡಿದ್ದಾರೆ.



ಆ ರಸ್ತೆಯಲ್ಲಿ ರಾತ್ರಿ ವೇಳೆ ಆ ಬಾಲಕಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ ಸವಾರರು, ಕಾರು ಚಾಲಕರು ತಮ್ಮ ವಾಹನವನ್ನು ನಿಲ್ಲಿಸಿ ಆಕೆಯನ್ನೇ ನೋಡುತ್ತಿರುವ ವಿಡಿಯೋವೊಂದು ಎಲ್ಲೆಡೆ ಹರಿದಾಡುತ್ತಿದೆ.



ಈ ಘಟನೆ ನಡೆದ 15 ದಿನಗಳ ನಂತರ ಈ ವಿಡಿಯೋ ಬಹಿರಂಗವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆತಂಕ ಸೃಷ್ಟಿಸಿದೆ. 30 ಸೆಕೆಂಡುಗಳ ಈ ವಿಡಿಯೋದಲ್ಲಿ ಸಾಕಷ್ಟು ರಕ್ತಸ್ರಾವವಾಗುತ್ತಿದ್ದಾಗ ಆ ಬಾಲಕಿ ನಗ್ನ ಸ್ಥಿತಿಯಲ್ಲಿಯೇ ರಸ್ತೆಯಲ್ಲಿ ನಡೆದುಕೊಂಡು ಸುಮಾರು 2 ಕಿಲೋ ಮೀಟರ್ ದೂರದಲ್ಲಿರುವ ತನ್ನ ಮನೆಗೆ ತಲುಪಿದ್ದಾಳೆ. 15 ವರ್ಷದ ಬಾಲಕಿ ಅತ್ಯಾಚಾರದ ನಂತರ ಸಂಪೂರ್ಣ ಆಘಾತಕ್ಕೊಳಗಾಗಿದ್ದಳು.



ಕಾಮುಕರು ಆಕೆಯ ಮೈಮೇಲೆ ಸಣ್ಣ ತುಂಡು ಬಟ್ಟೆಯನ್ನೂ ಬಿಟ್ಟಿರಲಿಲ್ಲ. ಆಕೆಯನ್ನು ನಗ್ನ ಸ್ಥಿತಿಯಲ್ಲಿ ಕಾರಿನಿಂದ ಹೊರಗೆ ಎಸೆಯಲಾಯಿತು. ಅಲ್ಲಿಂದ ಆಕೆ ನಡೆದುಕೊಂಡು, ಓಡಿಕೊಂಡು ಮನೆ ತಲುಪಿದ್ದಾಳೆ.



https://twitter.com/amandwivedi48/status/1572845590853320704?t=3BLlhO7M_cCuCybvmwGfXw&s=19



ಅಲ್ಲದೇ ಕೆಲವರು ಆಕೆ ನಗ್ನವಾಗಿ ನಡೆದುಕೊಂಡು ಹೋಗುತ್ತಿರುವುದನ್ನು ಮೊಬೈಲ್​ನಲ್ಲಿ ರೆಕಾರ್ಡ್ ಮಾಡಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಅಪ್​ಲೋಡ್ ಮಾಡಿದ್ದಾರೆ. ಆದರೆ, ಇದ್ಯಾವುದರ ಪರಿವೆಯೂ ಇಲ್ಲದ ಆ ಬಾಲಕಿ ಆಘಾತದಿಂದ ತನ್ನಷ್ಟಕ್ಕೆ ತಾನು ಮೈಮೇಲೆ ಪ್ರಜ್ಞೆ ಇಲ್ಲದಂತೆ ನಡೆದುಕೊಂಡು ಹೋಗುತ್ತಲೇ ಇದ್ದಳು.



ಆ ಬಾಲಕಿಯ ಮನೆಯವರು ನೀಡಿದ ದೂರಿನ ಆಧಾರದಲ್ಲಿ ಸೆಪ್ಟೆಂಬರ್ 7ರಂದು ಎಫ್‌ಐಆರ್ ದಾಖಲಿಸಿದ ನಂತರ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಗಳು ಬಾಲಕಿ ಹಾಗೂ ಆಕೆಯ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರುದಾರರು ತಿಳಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ