ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮೊಬೈಲನಲ್ಲಿ ಕಾರ್ಟೂನ್ ನೋಡುತ್ತಿದ್ದ 5 ವರ್ಷದ ಮಗು ಹೃದಯಾಘಾತದಿಂದ ಸಾವು!

ಲಖನೌ, 22:  ಮೊಬೈಲ್‌ ನಲ್ಲಿ ಕಾರ್ಟೂನ್‌ ನೋಡುತ್ತಿದ್ದ 5 ವರ್ಷದ ಮಗುವೊಂದು ಹೃದಯಾಘಾತದಿಂದ ಮೃತಪಟ್ಟಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಹಸನಪುರ ಕೊತ್ವಾಲಿಯದ ಹತೈಖೇಡಾದಲ್ಲಿ ರವಿವಾರ ನಡೆದಿದೆ.

ಕಾಮಿನಿ ಎಂಬ ಮಗು ಹಾಸಿಗೆಯಲ್ಲಿ ತನ್ನ ಅಮ್ಮನ ಪಕ್ಕದಲ್ಲಿ ಮಲಗಿಕೊಂಡು ಮೊಬೈಲ್‌ ನಲ್ಲಿ ಕಾರ್ಟೂನ್‌ ವೀಕ್ಷಿಸುತ್ತಿತ್ತು. ಈ ವೇಳೆ ಮಗುವಿನ ಕೈಯಿಂದ ಫೋನ್ ಇದ್ದಕ್ಕಿದ್ದಂತೆ ಕೆಳಗೆ ಬಿದ್ದಿದೆ. ಆ ಬಳಿಕ ಮಗು ಪ್ರಜ್ಞಾಹೀನವಾಗಿ ಬಿದ್ದಿದೆ. ಗಾಬರಿಗೊಂಡ ತಾಯಿ ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷಿಸಿದ ಬಳಿಕ ಮಗು ಆದಾಗಲೇ ಮೃತಪಟ್ಟಿದೆ ಎಂದು ಹೇಳಿದ್ದಾರೆ. “ಮಗು ಹೃದಯಾಘಾತದಿಂದ ಸಾವನ್ನಪ್ಪಿರಬಹುದು” ಎಂದು ಹಸನಪುರ ಸಮುದಾಯ ಆರೋಗ್ಯ ಕೇಂದ್ರದ ಪ್ರಭಾರಿ ಧ್ರುವೇಂದ್ರಕುಮಾರ ಹೇಳಿದ್ದಾರೆ.

"ಶವವನ್ನು ಮರಣೋತ್ತರ ಪರೀಕ್ಷೆಗೆ ಹಸ್ತಾಂತರಿಸುವಂತೆ ನಾವು ಕುಟುಂಬಕ್ಕೆ ಮನವಿ ಮಾಡಿದ್ದೇವೆ. ಆದರೆ ಅವರು ಒಪ್ಪಲಿಲ್ಲ. ಮಗು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಯೇ ಅಥವಾ ಬೇರೆ ಯಾವುದಾದರೂ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆಯೇ ಎಂಬುದು ತನಿಖೆಯ ವಿಷಯವಾಗಿದೆ" ಎಂದು ಅಮ್ರೋಹಾ ಮುಖ್ಯ ವೈದ್ಯಾಧಿಕಾರಿ ಸತ್ಯಪಾಲ್ ಸಿಂಗ್ ಹೇಳಿದ್ದಾರೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.