ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಿಸಿ ಸಾಂಬಾರಿಗೆ ಬಿದ್ದು 6 ತಿಂಗಳ ಮಗು ಸಾವು

ಧಾರವಾಡ : ಆಟವಾಡುತ್ತಾ ಬಿಸಿ ಸಾಂಬಾರು ಪಾತ್ರೆಗೆ ಬಿದ್ದು ಮಗು ಮೃತಪಟ್ಟ ಘಟನೆ ಜಿಲ್ಲೆಯ ಕುಂದಗೋಳ ತಾಲೂಕಿನ ಬಿಳೇಬಾಳ ಗ್ರಾಮದಲ್ಲಿ ನಡೆದಿದೆ. ವರ್ಷ 6 ತಿಂಗಳ ಮಗು ಸ್ವಾತಿ ಚಲವಾದಿ ಸಾವಿಗೀಡಾಗಿದ್ದಾಳೆ.

ನವೆಂಬರ್ 10ರಂದು ಮನೆಯಲ್ಲಿ ಆಟವಾಡುತ್ತಿದ್ದಾಗ ಮಗು ಬಿಸಿ ಸಾಂಬರಿನಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಳು. ತಕ್ಷಣ ಕುಂದಗೋಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದೆ. ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.