LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಚಾಲನೆಯಲ್ಲೇ ಹೊತ್ತಿ ಉರಿದ ಕಾರು; ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಬೆಳಗಾವಿ, ಜೂನ್ 29: ನಗರದ ರಾಮದೇವ್ ಹೋಟೆಲ್ ಎದುರಿನ ಡಿ-ಮಾರ್ಟ್ ಕಾರ್ನರ್ ಕಡೆಗೆ ತೆರಳುವ ರಸ್ತೆಯಲ್ಲಿ ಸೋಮವಾರ ಚಲಿಸುತ್ತಿದ್ದ ಸ್ವಿಫ್ಟ್ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಕೆಲವೇ ನಿಮಿಷಗಳಲ್ಲಿ ಸಂಪೂರ್ಣ ವಾಹನ ಸುಟ್ಟು ಕರಕಲಾದ ಘಟನೆ ನಡೆದಿದೆ.

ಕಾರು ಸಂಚರಿಸುತ್ತಿದ್ದ ವೇಳೆ ಎಂಜಿನ್ ಭಾಗದಿಂದ ಹೊಗೆ ಹಾಗೂ ಬೆಂಕಿ ಕಾಣಿಸಿಕೊಂಡಿದ್ದು, ಇದನ್ನು ಗಮನಿಸಿದ ಚಾಲಕ ತಕ್ಷಣವೇ ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿದ್ದಾರೆ. ಕಾರಿನಲ್ಲಿದ್ದ ಎಲ್ಲರೂ ಕೂಡಲೇ ಕೆಳಗಿಳಿದು ಸುರಕ್ಷಿತ ಸ್ಥಳಕ್ಕೆ ತೆರಳಿದ್ದರಿಂದ ಸಂಭವಿಸಬಹುದಾಗಿದ್ದ ದೊಡ್ಡ ದುರಂತ ತಪ್ಪಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ.

ಬೆಂಕಿಯ ತೀವ್ರತೆಗೆ ಕಾರು ಕೇವಲ 10ರಿಂದ 15 ನಿಮಿಷಗಳಲ್ಲೇ ಸಂಪೂರ್ಣವಾಗಿ ಭಸ್ಮವಾಗಿದ್ದು, ವಾಹನ ಬೆಳಗಾವಿ ನೋಂದಣಿಯನ್ನು ಹೊಂದಿದೆ ಎಂದು ತಿಳಿದುಬಂದಿದೆ. ಪ್ರಾಥಮಿಕ ಮಾಹಿತಿಯಂತೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂದು ಶಂಕಿಸಲಾಗಿದ್ದು, ನಿಖರ ಕಾರಣ ತನಿಖೆಯ ಬಳಿಕವೇ ತಿಳಿಯಬೇಕಿದೆ.

ರಸ್ತೆ ಮಧ್ಯೆಯೇ ಕಾರು ಹೊತ್ತಿ ಉರಿಯುತ್ತಿರುವ ದೃಶ್ಯ ಕಂಡು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳಕ್ಕೆ ಜಮಾಯಿಸಿದ್ದರು. ಇದರಿಂದ ಕೆಲಕಾಲ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಯಿತು. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST