LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ದೇವಸ್ಥಾನಗಳ ಸರಣಿ ಕಳ್ಳತನ ಪ್ರಕರಣ; ನಾಲ್ವರ ಬಂಧನ

ಬೆಳಗಾವಿ, ಜುಲೈ 16: ದೇವಸ್ಥಾನಗಳನ್ನೇ ಗುರಿಯಾಗಿಸಿಕೊಂಡು ಸರಣಿ ಕಳ್ಳತನ ನಡೆಸುತ್ತಿದ್ದ ಅಂತರ್ ಜಿಲ್ಲಾ ಖದೀಮರ ಗ್ಯಾಂಗ್‌ನ್ನು ಬೆಳಗಾವಿ ಜಿಲ್ಲೆಯ ಹಾರೂಗೇರಿ ಪೊಲೀಸರು ಬಂಧಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿಯ ಆಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ರಾಯಬಾಗ ತಾಲೂಕಿನ ಹಂದಿಗುಂದ ಗ್ರಾಮದ ತೋಟದ ಜಮೀನಿನಲ್ಲಿರುವ ಶ್ರೀ ರಾಣಮ್ಮಾ ದೇವಿ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದಿದ್ದ ಬಂಗಾರದ ಮಂಗಳಸೂತ್ರ ಹಾಗೂ ಬೆಳ್ಳಿಯ ಆಭರಣಗಳ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಳಗಾವಿ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ. ರಾಮರಾಜನ್ ಅವರ ಮಾರ್ಗದರ್ಶನದಲ್ಲಿ ರಚಿಸಲಾದ ವಿಶೇಷ ತನಿಖಾ ತಂಡ ಕಾರ್ಯಾಚರಣೆ ನಡೆಸಿ, ಅಡಳಹಟ್ಟಿ ಗ್ರಾಮದ ನಿವಾಸಿಗಳಾದ ವಿಜಯ ಭೀಮಪ್ಪ ಗುಡದಿನ್ನಿ, ಕಲೇಶ ಅಲ್ಲಪ್ಪ ಮೂರಾಬಟ್ಟಿ, ಶಿವಾನಂದ ವಿಠಲ ಚಿಕ್ಕಟ್ಟಿ ಹಾಗೂ ಸಂಗಮೇಶ ಶಂಕರ ಐನಾಪೂರ ಎಂಬ ನಾಲ್ವರನ್ನು ಬಂಧಿಸಿದೆ.

ಬಂಧಿತರಿಂದ ವಿವಿಧ ದೇವಸ್ಥಾನಗಳಿಂದ ಕಳವಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿಯ ವಸ್ತುಗಳು ಮತ್ತು ಕಳ್ಳತನಕ್ಕೆ ಬಳಸಿದ್ದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಇತರ ಕಳ್ಳತನ ಪ್ರಕರಣಗಳ ಬಗ್ಗೆಯೂ ತನಿಖೆ ಮುಂದುವರಿದಿದ್ದು, ಇನ್ನಷ್ಟು ಕೃತ್ಯಗಳು ಬೆಳಕಿಗೆ ಬರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಎಸ್‌ಟಿ ಸಂಗ್ರಹ ಶೇ. 14.8ರಷ್ಟು ಏರಿಕೆ: ಆಗಸ್ಟನಲ್ಲಿ ₹2 ಲಕ್ಷ ಕೋಟಿ ವರಮಾನಬಿಜೆಪಿ–ಜೆಡಿಎಸ್‌ನ ನೋಬಾಲ್, ಫುಲ್‌ಟಾಸ್‌ಗೆ ನನ್ನ ವಿಕೆಟ್ ಬೀಳುವುದಿಲ್ಲ: ಪ್ರಿಯಾಂಕ್ ಖರ್ಗೆಡಿಸಿಪಿ ನೇಮಗೌಡ ಮೇಲೆ ಹಲ್ಲೆ ಆರೋಪ: ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ವಿರುದ್ಧ ಜೆಡಿಎಸ್ ವಾಗ್ದಾಳಿಜಿಡಿಪಿ ಅಂಕಿಅಂಶ ತಿರುಚಿ ಆರ್ಥಿಕ ದುಸ್ಥಿತಿ ಮರೆಮಾಚಲಾಗುತ್ತಿದೆ: ಕಾಂಗ್ರೆಸ್‘2028ರಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ’: ಬಿ.ವೈ. ವಿಜಯೇಂದ್ರ‘ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು: ನೂರ್ ಶ್ರೀಧರ ಆಗ್ರಹ‘ಎಸ್‌ಐಆರ್ ದೇಶವನ್ನು ಹಾಳು ಮಾಡುವ ಸಂಚು’: ನಟ ಪ್ರಕಾಶ ರಾಜ್ದೇಶಾದ್ಯಂತ ನೀಟ್ ಪ್ರತಿಭಟನಾಕಾರರ ವಿರುದ್ಧದ ಎಲ್ಲ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟದೇಶಾದ್ಯಂತ ಟೀಕೆಗೆ ಗುರಿಯಾದ ಝೀ ಗ್ರೂಪ್ ಮುಖ್ಯಸ್ಥನ ₹22,000 ಕೋಟಿ ಸಾಲ ಮನ್ನಾ ಆದೇಶಕ್ಕೆ ತಡೆಇರಾನ್ ಸಂಘರ್ಷದ ನಡುವೆಯೂ ಭಾರತದ ಜಿಡಿಪಿ ಶೇ 7.8ರ ಬೆಳವಣಿಗೆ: ಪ್ರಧಾನಿ ಮೋದಿ