ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪ್ರಮೋದ ಮುತಾಲಿಕಗೆ ಜೀವ ಬೆದರಿಕೆ; ದೂರು ದಾಖಲು

ಹುಕ್ಕೇರಿ, ೪- ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ ಅವರಿಗೆ ಫೋನ್ ಮೂಲಕ ಜೀವ ಬೆದರಿಕೆ ಕರೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಅವರು ಹುಕ್ಕೇರಿ ಪೊಲೀಸ್ ಠಾಣೆಗೆ ತೆರಳಿ, ದೂರು ದಾಖಲಿಸಿದ್ದಾರೆ.

ನಾಲ್ಕು, ಐದು ಕರೆಗಳು ಬಂದಿವೆ ಎನ್ನಲಾಗಿದ್ದು, ಬೆದರಿಕೆ ಒಡ್ಡಿದವರು ಉರ್ದು ಮಿಶ್ರಿತ ಮಂಗಳೂರು ಕನ್ನಡ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ನಿನ್ನನ್ನು ಕೊಚ್ಚಿ ತುಂಡು ಮಾಡಿ ನಾಯಿಗೆ ಹಾಕುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗಿದ್ದು, ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಪ್ರಮೋದ ಮುತಾಲಿಕ ಇಂಥದಕ್ಕೆಲ್ಲ ನಾನು ಹೆದರುವುದಿಲ್ಲ. ಕಳೆದ 10 – 15 ವರ್ಷಗಳಿಂದ ಇಂತಹ ಕರೆಗಳು ಬರುತ್ತಲೇ ಇವೆ ಎಂದಿದ್ದಾರೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.