LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ನದಿ ದಂಡೆಯಲ್ಲಿದ್ದ ವ್ಯಕ್ತಿ ಮೇಲೆ ಮೊಸಳೆ ದಾಳಿ

ದಾಂಡೇಲಿ, ಮೇ 3 : ಕಾಳಿ ನದಿಗೆ ಇಳಿದಿದ್ದ ವ್ಯಕ್ತಿಯೊಬ್ಬನ ಮೇಲೆ ಮೊಸಳೆಯೊಂದು ದಾಳಿ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ.

ಮೊಸಳೆ ದಾಳಿಯಿಂದ ಗಾಯಗೊಂಡ ವ್ಯಕ್ತಿಯನ್ನು ದಾಂಡೇಲಿಯ ಕುಳಗಿ ರಸ್ತೆಯ ನಿವಾಸಿ ಆನಂದ (42) ಎಂದು ಗುರುತಿಸಲಾಗಿದೆ. ಶೌಚಕ್ಕಾಗಿ ಕಾಳಿ ನದಿಗೆ ತೆರಳಿದ್ದ ವೇಳೆ ಮೊಸಳೆಯೊಂದು ಏಕಾಏಕಿ ದಾಳಿ ನಡೆಸಿ, ನದಿಯೊಳಗೆ ಹೊತ್ತೊಯ್ಯಲು ಯತ್ನಿಸಿದೆ.

ಮೊಸಳೆಯ ದಾಳಿಯಿಂದ ಗಾಯಗೊಂಡ ಆನಂದ ಕಿರುಚಾಡಿದ ಶಬ್ದ ಕೇಳಿ ಸ್ಥಳೀಯರು ತಕ್ಷಣವೇ ಆಗಮಿಸಿ ಮೊಸಳೆಯನ್ನು ಓಡಿಸಿದ್ದಾರೆ. ದಾಳಿಯಿಂದ ಅವರ ಕಾಲು ಹಾಗೂ ದೇಹದ ಹಲವು ಭಾಗಗಳಲ್ಲಿ ಗಂಭೀರ ಗಾಯಗಳಾಗಿದ್ದು, ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಧಾರವಾಡಕ್ಕೆ ಕಳುಹಿಸಲಾಗಿದೆ.

ಘಟನೆ ಸಂಬಂಧ ಪೊಲೀಸ್ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನದಿ ದಂಡೆಯಲ್ಲಿದ್ದ ವ್ಯಕ್ತಿ ಮೇಲೆ ಮೊಸಳೆ ದಾಳಿದಾಂಡೇಲಿಯಲ್ಲಿ ಪತ್ನಿಯ ಅನೈತಿಕ ಸಂಬಂಧಕ್ಕೆ ನೊಂದು ಪತಿಯ ಆತ್ಮಹತ್ಯೆ!ಮೇ 20ರಿಂದ ಸಾರಿಗೆ ನೌಕರರ ಮುಷ್ಕರ ಘೋಷಣೆಅಭಿವೃದ್ಧಿ ಕಾರ್ಯಗಳಲ್ಲಿ ನಿರ್ಲಕ್ಷ್ಯ ತೋರಿಸುವ ಅಧಿಕಾರಿಗಳಿಗೆ ಮುಖ್ಯಮಂತ್ರಿ ಖಡಕ್‌ ಎಚ್ಚರಿಕೆಉದ್ಯೋಗ ಸಿಗದೆ ಖಿನ್ನತೆ: ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿ ಆತ್ಮಹತ್ಯೆಕಮರ್ಷಿಯಲ್ ಗ್ಯಾಸ್ ದರ ಶೇ.50ರಿಂದ ಶೇ.60ರಷ್ಟು ಹೆಚ್ಚಳ!ಬೋಟ್ ದುರಂತದಲ್ಲಿ ಮನಕಲಕುವ ದೃಶ್ಯ: ಮಗುವನ್ನು ಎದೆಗವಚಿಕೊಂಡ ತಾಯಿಚುನಾವಣೋತ್ತರ ಸಮೀಕ್ಷೆ ಮೇಲೆ ನಂಬಿಕೆ ಇಲ್ಲ: ಡಿ.ಕೆ.ಶಿವಕುಮಾರಮತ ಎಣಿಕೆಯಲ್ಲಿ ಕೇಂದ್ರ ಸಿಬ್ಬಂದಿ ನಿಯೋಜನೆಗೆ ಟಿಎಂಸಿ ವಿರೋಧ: ಅರ್ಜಿ ತಿರಸ್ಕರಿಸಿದ ಸುಪ್ರೀಮ ಕೋರ್ಟವಾಣಿಜ್ಯ ಎಲ್‌ಪಿಜಿ ಸಿಲಿಂಡರ 993ರೂ.ಹೆಚ್ಚಳ!