ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಂಗಡಿ ಇಡುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಹೊಡೆದಾಟ 

ಕೊಪ್ಪಳ : ಅಂಗಡಿ ಇಡುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿಯಲ್ಲಿ ನಡೆದಿದೆ.

ಅಂಜನಾದ್ರಿಯಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹನುಮನಹಳ್ಳಿಯ ಮುತ್ತಪ್ಪ (23), ಸುರೇಶ (21) ಹಾಗೂ ಲಿಂಗರಾಜ (26) ಎಂಬುವರು ಗಾಯಗೊಂಡಿದ್ದಾರೆ.

ಮೂವರ ಮೇಲೆ ಅನ್ಯ ಕೋಮಿನ ಯುವಕರ ಗುಂಪು ಮೂವರು ಯುವಕರ ಮೇಲೆ ಕಟ್ಟಿಗೆ, ಮಚ್ಚುಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದ ಯುವಕರನ್ನು ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.