ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಹಿರ್ದೆಸೆಗೆ ತೆರಳಿದ್ದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ

ಕಲಬುರಗಿ: ಬಹಿರ್ದೆಸೆಗೆ ತೆರಳಿದ್ದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಕೃತ್ಯ ಜಿಲ್ಲೆಯ ಆಳಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

15 ವರ್ಷದ ಬಾಲಕಿ ಶಾಲೆಗೆ ತೆರಳಲು ಆಳಂದ ತಾಲೂಕಿನ‌ ಗ್ರಾಮವೊಂದರಲ್ಲಿನ ತನ್ನ ಅತ್ತೆ ಮನೆಯಲ್ಲಿದ್ದಳು. ಬಹಿರ್ದೆಸೆಗೆಂದು ಮನೆಯಿಂದ ಹೊರಹೋಗಿದ್ದ ಬಾಲಕಿ ಸುಮಾರು ಹೊತ್ತು ಕಳೆದರೂ ಬಂದಿರಲಿಲ್ಲ. ಗಾಬರಿಗೊಂಡ ಕುಟುಂಬಸ್ಥರು, ಗ್ರಾಮಸ್ಥರು ಹುಡುಕಾಟ ನಡೆದಿದಾಗ ಗ್ರಾಮದ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ.

ಬಾಲಕಿಯ ಮೈಮೇಲೆ ಎಳೆದಾಡಿ ತರಚಿದ ಗಾಯಗಳಾಗಿವೆ. ನಂತರ ವೇಲ್​ನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಲಾಗಿದೆ. ಮೇಲ್ನೋಟಕ್ಕೆ ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರವೆಸಗಿ ಕೊಲೆಗೈದಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.