ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮತದಾರ ಪಟ್ಟಿ ಅಕ್ರಮ; ಸಚಿವರಿಗೆ ಸೇರಿದ ಲೆಟರ್ ಹೆಡ್, ಚೆಕ್ ಪತ್ತೆ!

ಬೆಂಗಳೂರು: ಮತದಾರರ ಪಟ್ಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆ ಮೇಲೆ ಪೊಲೀಸರು ನಡೆಸಿದ ದಾಳಿಯ ವೇಳೆ ಸಚಿವರಿಗೆ ಸೇರಿದ ಲೆಟರ್ ಹೆಡ್, ಚೆಕ್ ಪತ್ತೆಯಾಗಿವೆ ಎಂಬ ಮಾಹಿತಿ ತಿಳಿದುಬಂದಿದೆ.

ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ವೋಟರ್ ಐಡಿ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆ ವಿರುದ್ಧ ಪ್ರಕರಣ ದಾಖಲಾಗಿದ್ದು, ಸಂಸ್ಥೆಯ 6 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ನಡುವೆ ಪೊಲೀಸರು ಸಂಸ್ಥೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ದಾಳಿ ವೇಳೆ ಸಚಿವರ ಲೆಟರ್ ಹೆಡ್, ಚೆಕ್ ಹಾಗೂ ಹೊಂಬಾಳೆ ಸಂಸ್ಥೆಗೆ ಸೇರಿದ ಮಹತ್ವದ ದಾಖಲೆಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಸಧ್ಯ ಪತ್ತೆಯಾದ ಚೆಕ್ ಹಾಗೂ ಲೆಟರ್ ಹೆಡ್ ಯಾವ ಸಚಿವರದ್ದು ಎಂಬುದೇ ಕುತೂಹಲಕ್ಕೆ ಕಾರಣವಾಗಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.