LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಪ್ರಾರ್ಥನೆ ಮಾಡುವಾಗ 200 ಜನರಿಂದ ಮಸೀದಿ ಮೇಲೆ ದಾಳಿ 

ಗುರುಗ್ರಾಮ: 200 ಕ್ಕೂ ಹೆಚ್ಚು ಜನರ ಗುಂಪು ರಾಜಧಾನಿ ದೆಹಲಿಗೆ ಹತ್ತಿಕೊಂಡಿರುವ ಗುರುಗ್ರಾಮ‌ನ ಭೋರಾ ಕಲನ್ ಗ್ರಾಮದಲ್ಲಿ ಮಸೀದಿಯನ್ನು ಧ್ವಂಸ ಮಾಡಿದೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.



ಪ್ರಾರ್ಥನೆ ಮಾಡುತ್ತಿದ್ದ ಜನರ ಮೇಲೆ ಹಲ್ಲೆ ನಡೆದಿದ್ದು, ಗ್ರಾಮದಿಂದ ಹೊರಹಾಕುವುದಾಗಿ ಬೆದರಿಕೆಯನ್ನೂ ಒಡ್ಡಲಾಗಿದೆ.



ಸುಬೇದಾರ್ ನಜರ್ ಮೊಹಮ್ಮದ್ ನೀಡಿದ ದೂರಿನ ಪ್ರಕಾರ, ಭೋರ ಕಾಳನ್ ಗ್ರಾಮದಲ್ಲಿ ಕೇವಲ ನಾಲ್ಕು ಮುಸ್ಲಿಂ ಕುಟುಂಬಗಳಿವೆ. ರಾಜೇಶ ಚೌಹಾಣ ಅಲಿಯಾಸ್ ಬಾಬು, ಅನಿಲ ಭಡೋರಿಯಾ ಮತ್ತು ಸಂಜಯ ವ್ಯಾಸ್ ನೇತೃತ್ವದ ಸುಮಾರು 200 ಜನರನ್ನು ಒಳಗೊಂಡ ಗುಂಪು ಮಸೀದಿಯನ್ನು ಸುತ್ತುವರೆದು ಪ್ರಾರ್ಥನಾ ಮಂದಿರಕ್ಕೆ ಪ್ರವೇಶಿಸಿ ಅಲ್ಲಿ ನಮಾಜ ಮಾಡುತ್ತಿದ್ದವರನ್ನು ಗ್ರಾಮದಿಂದ ಹೊರಹಾಕುವುದಾಗಿ ಆ ಗುಂಪು ಬೆದರಿಕೆ ಹಾಕಿದೆ.



ರಾತ್ರಿ ಮತ್ತೆ ನಾವು ಮಸೀದಿಯ ಪ್ರಾರ್ಥನಾ ಮಂದಿರದ ಒಳಗೆ ಪ್ರಾರ್ಥನೆ ಮಾಡುತ್ತಿದ್ದಾಗ ಗುಂಪು ಬಂದು ಪ್ರಾರ್ಥನೆ ಮಾಡುವವರ ಮೇಲೆ ಹಲ್ಲೆ ನಡೆಸಿ,  ಪ್ರಾರ್ಥನಾ ಮಂದಿರ ಧ್ವಂಸಗೊಳಿಸಿ ಬೀಗ ಜಡಿದಿದೆ. ನಮ್ಮನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸುಬೇದಾರ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.



ಪೊಲೀಸರು ತಲುಪುವಷ್ಟರಲ್ಲಿ ಆರೋಪಿಗಳು ಪರಾರಿಯಾಗಿದ್ದರು. ಮೊಹಮ್ಮದ್ ಅವರ ದೂರಿನ ನಂತರ, ರಾಜೇಶ ಚೌಹಾಣ, ಅನಿಲ ಭಡೋರಿಯಾ, ಸಂಜಯ ವ್ಯಾಸ್ ಮತ್ತು ಇತರ ಹಲವರ ವಿರುದ್ಧ ಗಲಭೆ, ಧಾರ್ಮಿಕ ಕಲಹವನ್ನು ಉಂಟುಮಾಡಲು ಪ್ರಯತ್ನಿಸುವುದು ಮತ್ತು ಬಿಲಾಸ್‌ಪುರ ಪೊಲೀಸ್ ಠಾಣೆಯಲ್ಲಿ ಕಾನೂನುಬಾಹಿರ ಸಭೆಯ ಆರೋಪದಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.



ದೂರಿನನ್ವಯ ಎಫ್‌ಐಆರ್ ದಾಖಲಾಗಿದ್ದು, ಸತ್ಯಾಸತ್ಯತೆ ಪರಿಶೀಲಿಸುತ್ತಿದ್ದೇವೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತನಿಖಾಧಿಕಾರಿ ಹಿರಿಯ ಪೊಲೀಸ್ ಅಧಿಕಾರಿ ಗಜೇಂದರ ಸಿಂಗ್ ಹೇಳಿದ್ದಾರೆ
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ