LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
International News

ಇರಾನ್ ಮೇಲೆ ದಾಳಿಗೆ ವಿರಾಮ; ಮಾತುಕತೆಗೆ ಟ್ರಂಪ್ ಮತ್ತೆ ಒಲವು

ವಾಷಿಂಗ್ಟನ್‌, ಜುಲೈ 28: ಇರಾನ್‌ನ ಮನವಿ ಮೇರೆಗೆ ಅಮೆರಿಕ ಸದ್ಯಕ್ಕೆ ಸೇನಾ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದ್ದು, ರಾಜತಾಂತ್ರಿಕ ಮಾತುಕತೆಗೆ ಅವಕಾಶ ನೀಡಲಾಗಿದೆ ಎಂದು ತಾಸಿಗೊಂದು ವಿವಿಧ ಬಗೆಯ ಹೇಳಿಕೆ ನೀಡುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಆದರೆ ಸಂಧಾನ ಯತ್ನಗಳು ವಿಫಲವಾದರೆ ಮತ್ತೆ ಸೇನಾ ದಾಳಿ ಆರಂಭಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

'ಏರ್ ಫೋರ್ಸ್ ಒನ್' ವಿಮಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಇರಾನ್‌ನೊಂದಿಗೆ ನಡೆಯುತ್ತಿರುವ ರಾಜತಾಂತ್ರಿಕ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದರು.

"ದಯವಿಟ್ಟು ದಾಳಿ ನಿಲ್ಲಿಸಿ. ನಾವಿಬ್ಬರೂ ಭೇಟಿಯಾಗಿ ಮಾತುಕತೆ ನಡೆಸೋಣ" ಎಂದು ಇರಾನ್ ಅತ್ಯಂತ ವಿನಮ್ರವಾಗಿ ಮನವಿ ಮಾಡಿದೆ. ಅದರ ಬೆನ್ನಲ್ಲೇ ದಾಳಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಮಾತುಕತೆಗೆ ಮುಂದಾಗಿದ್ದೇವೆ. ಆದರೆ ಹೊಸ ಒಪ್ಪಂದ ಸಾಧ್ಯವಾಗದಿದ್ದರೆ ಸೇನಾ ಕಾರ್ಯಾಚರಣೆ ಮತ್ತೆ ಆರಂಭವಾಗಲಿದೆ ಎಂದು ಅವರು ಸ್ಪಷ್ಟಪಡಿಸಿದರು.

ಇರಾನ್‌ನೊಂದಿಗೆ ನೇರ ಸಂಪರ್ಕದ ಜೊತೆಗೆ ಮಧ್ಯಸ್ಥಿಕೆದಾರರ ಮೂಲಕವೂ ನಿರಂತರ ಮಾತುಕತೆ ನಡೆಯುತ್ತಿದೆ. ಈ ಸಂವಾದಗಳು ಸಕಾರಾತ್ಮಕ ದಿಕ್ಕಿನಲ್ಲಿ ಸಾಗುತ್ತಿವೆ ಎಂದು ಟ್ರಂಪ್ ಹೇಳಿದರು.

ಅಮೆರಿಕ ನಡೆಸಿದ ತೀವ್ರ ಸೇನಾ ದಾಳಿಯ ಪರಿಣಾಮವಾಗಿಯೇ ಇರಾನ್ ಇಂದು ಮಾತುಕತೆಗೆ ಮುಂದಾಗಿದೆ ಎಂದು ಪ್ರತಿಪಾದಿಸಿದ ಅವರು, ಸೇನಾ ಒತ್ತಡವೇ ರಾಜತಾಂತ್ರಿಕ ಪ್ರಕ್ರಿಯೆಗೆ ದಾರಿ ಮಾಡಿಕೊಟ್ಟಿದೆ ಎಂದು ಹೇಳಿದರು.

ಇದೇ ವೇಳೆ, ಯುದ್ಧ ಮುಂದುವರಿದರೆ 'ಪೇಟ್ರಿಯಾಟ್' ಕ್ಷಿಪಣಿಗಳು ಸೇರಿದಂತೆ ಶಸ್ತ್ರಾಸ್ತ್ರಗಳ ಕೊರತೆ ಎದುರಾಗುವ ಸಾಧ್ಯತೆ ಇದೆ ಎಂದು ಸೇನಾ ಅಧಿಕಾರಿಗಳು ಹಾಗೂ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಸಲಹೆ ನೀಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಟ್ರಂಪ್ ಸೇನಾ ಕಾರ್ಯಾಚರಣೆಗೆ ತಾತ್ಕಾಲಿಕ ವಿರಾಮ ನೀಡುವ ನಿರ್ಧಾರ ಕೈಗೊಂಡಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ.

ಆದರೆ ಅಮೆರಿಕದ ಬಳಿ ಯುದ್ಧ ಸಾಮಗ್ರಿಗಳ ಕೊರತೆ ಇದೆ ಎಂಬ ವರದಿಗಳನ್ನು ಟ್ರಂಪ್ ತಳ್ಳಿಹಾಕಿದ್ದು, ದೇಶದ ಸೇನಾ ಸಾಮರ್ಥ್ಯದ ಬಗ್ಗೆ ಯಾವುದೇ ಅನುಮಾನಕ್ಕೆ ಅವಕಾಶವಿಲ್ಲ ಎಂದು ಹೇಳಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಡುಹಂದಿಗಳ ದಾಳಿಗೆ ಕಬ್ಬು ಬೆಳೆ ನಾಶಗದ್ದಲದ ನಡುವೆಯೇ ಮುಕ್ತಾಯ ಕಂಡ ಸಂಸತ್ ಅಧಿವೇಶನ: ಚರ್ಚೆಯಿಲ್ಲದೆ 11 ಮಸೂದೆಗಳ ಅಂಗೀಕಾರ300 ಅಡಿ ಕುಸಿದ ವಿಮಾನ, ಪೈಲಟ್ ಗಾಂಜಾ ಸೇವನೆ ಪತ್ತೆ!ಮಾನವ ಹಕ್ಕುಗಳ ಪಾಠ ನಿಲ್ಲಿಸಿ; ಫ್ರಾನ್ಸ್ ವಿರುದ್ಧ ಇರಾನ್ ಕಿಡಿ25 ಬಿಜೆಪಿ ನಾಯಕರು, ಹಿಂದುತ್ವ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ನ್ಯಾಯಾಲಯದ ಅನುಮತಿ!ದೇಶಕ್ಕೇ ಮಾದರಿಯಾಗುವಂತೆ ಗಣೇಶೋತ್ಸವ ಆಚರಿಸೋಣಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಮೊಬೈಲ್‌, ಪೆನ್‌ಡ್ರೈವನಲ್ಲಿ ಅಶ್ಲೀಲ ವಿಡಿಯೋ ಪತ್ತೆ ; ವಿಐಪಿ ಸೆಲ್‌ನಿಂದ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಭೂಕಂಪದೇಶಭಕ್ತಿಯ ಸರ್ಟಿಫಿಕೇಟ್ ನೀಡುವ ಮುನ್ನ ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜದ ಇತಿಹಾಸ ಹೇಳಲಿ: ಪ್ರಿಯಾಂಕ್ ಖರ್ಗೆಖರ್ಗೆ ರ‍್ಯಾಲಿ ನಡೆದ ಸ್ಥಳದಲ್ಲಿ ‘ಶುದ್ಧೀಕರಣ’ ಹವನ; ಬಿಜೆಪಿ–ಕಾಂಗ್ರೆಸ್ ನಡುವೆ ವಾಕ್ಸಮರ