ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನಾರಾಯಣಪೂರ ಬಳಿ ಅಕ್ರಮ ಮರಳು ಸಾಗಾಣಿಕೆಗೆ ನೆಲೋಗಿ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಮಯೂರ (50) ಬಲಿಯಾಗಿದ್ದಾರೆ.ಅಕ್ರಮ ಮರಳು ಸಾಗಣಿಕೆ ತಡೆಯಲು ಮಯೂರ ಅವರನ್ನು ನಿಯೋಜಿಸಲಾಗಿತ್ತು. ಕೃಷ್ಣಾ ನದಿಯಿಂದ ಮರಳನ್ನು ಯಾವುದೇ ಅನುಮತಿಯಿಲ್ಲದೇ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ತಡೆಯಲು ಯತ್ನಿಸಿದ್ದಾರೆ. ಆದರೆ ಚಾಲಕ ಅವರಿಗೆ ಡಿಕ್ಕಿ ಹೊಡೆಸಿ ವಾಹನದ ಸಮೇತ ಪರಾರಿಯಾಗಿದ್ದಾನೆ.
ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.








