LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ನಕಲು ಮಾಡುತ್ತಿದ್ದಾಳೆ ಎಂದು ಬಟ್ಟೆ ಬಿಚ್ಚಿಸಿದ ಶಿಕ್ಷಕರು : ಬೆಂಕಿ ಹಚ್ಚಿಕೊಂಡ ವಿದ್ಯಾರ್ಥಿನಿ

ರಾಂಚಿ‌ : ನಕಲು ಮಾಡುತ್ತಿದ್ದಾಳೆ ಎಂಬ ಶಂಕೆಯ ಮೇರೆಗೆ ಶಿಕ್ಷಕರು ವಿದ್ಯಾರ್ಥಿನಿಯ ಬಟ್ಟೆಗಳನ್ನು ಬಿಚ್ಚಿಸಿದ್ದಾರೆ, ಇದರಿಂದ ನೊಂದ ಬಾಲಕಿ ಮನೆಗೆ ಬಂದು ಬೆಂಕಿ ಹಚ್ಚಿಕೊಂಡಿರುವ ದಾರುಣ ಘಟನೆ ಜಾರ್ಖಂಡ​ನ ಜೆಮಶೇಡಪುರ ಜಿಲ್ಲೆಯಲ್ಲಿ ನಡೆದಿದೆ.



9ನೇ ತರಗತಿ ಓದುತ್ತಿದ್ದ ಛಾಯಾನಗರದ ಬಾಲಕಿ ಶುಕ್ರವಾರ ಮಧ್ಯಾಹ್ನ ಪರೀಕ್ಷೆ ಬರೆಯಲು ಶಾಲೆಗೆ ಹೋಗಿದ್ದಳು. ಈ ವೇಳೆ ಶಿಕ್ಷಕಿಯೊಬ್ಬರು ಈ ವಿದ್ಯಾರ್ಥಿನಿ ನಕಲು ಮಾಡುತ್ತಿದ್ದಾಳೆ ಎಂದು ಶಂಕಿಸಿದ್ದಾರೆ. ಇದಾದ ಬಳಿಕ ವಿದ್ಯಾರ್ಥಿನಿಯನ್ನು ಬೇರೆ ಕೋಣೆಗೆ ಕರೆದೊಯ್ದು, ಅಲ್ಲಿ ಬಟ್ಟೆ ಬಿಚ್ಚಿಸಿ ಶಿಕ್ಷಕಿ ತಪಾಸಣೆ ನಡೆಸಿದ್ದಾರೆ. ಇದರಿಂದ ವಿದ್ಯಾರ್ಥಿನಿಗೆ ಪಾಪಪ್ರಜ್ಞೆ ಮೂಡಿದೆ. ಶಾಲೆಯಿಂದ ಸಂಜೆ ಮನೆಗೆ ವಾಪಸಾದ ಬಳಿಕ ವಿದ್ಯಾರ್ಥಿನಿ ಶಾಲಾ ಡ್ರೆಸ್​ನಲ್ಲೇ ಮೈಮೇಲೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ.



ಸುಮಾರು ಶೇ.80ರಷ್ಟು ಸುಟ್ಟಗಾಯಗಳಾಗಿದ್ದು, ಪೋಷಕರು ಎಂಜಿಎಂ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಬಾಲಕಿಯ ಸ್ಥಿತಿಯ ಗಂಭೀರವಾಗಿದ್ದ ಕಾರಣ ಅಲ್ಲಿಂದ ಟಾಟಾ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಈ ಸಂಬಂಧ ಸೀತಾರಾಮದೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತೀಶ ಜಾರಕಿಹೊಳಿ, ಆಪ್ತರ ಮನೆಗಳಲ್ಲಿ ಇಡಿ ಶೋಧ ಅಂತ್ಯಸತೀಶ ಜಾರಕಿಹೊಳಿ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಲಕ್ಷ್ಮಿ ಹೆಬ್ಬಾಳಕರಡಿ.ಕೆ. ಶಿವಕುಮಾರ ತಾಯಿಗೆ ನೋಟಿಸ್ ನೀಡಿಲ್ಲಮತ್ತೆ ಗಾಯಗೊಂಡ ಹರ್ಷಿತ ರಾಣಾ: ಅಫ್ಘಾನಿಸ್ತಾನ ಸರಣಿ, ಏಷ್ಯನ್ ಗೇಮ್ಸ್‌ನಿಂದ ಹೊರಕ್ಕೆಎಸ್‌ಐಆರ್‌ ಅಚ್ಚರಿ: ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!14 ವರ್ಷದ ನಿಶುಗೆ ಅತ್ಯಾಚಾರ ಬೆದರಿಕೆ: ತಕ್ಷಣ ರಕ್ಷಣೆಗೆ ಸುಪ್ರೀಂ ಕೋರ್ಟ ಸೂಚನೆ‘ನನ್ನನ್ನು ಪ್ರಚಾರದ ಸಾಧನವಾಗಿ ಬಳಸಲಾಗಿದೆ’: ಭಾರತ ಸರ್ಕಾರದ ವಿರುದ್ಧ ವಿಜಯ ಮಲ್ಯ ಆರೋಪಉಳಿದ ಭರವಸೆಗಳ ಈಡೇರಿಕೆಗೆ ವೇಗ ನೀಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಸಲಹೆಎಸ್‌ಐಆರ್ : ಡಿ.ಕೆ. ಶಿವಕುಮಾರ ತಾಯಿ ಸೇರಿ ಹಲವು ಗಣ್ಯರಿಗೆ ನೋಟಿಸ್ಗರ್ಬಾದಲ್ಲಿ ಮುಸ್ಲಿಮರಿಗೆ ನಿಷೇಧ ಸರಿಯಲ್ಲ; ಸಂವಿಧಾನ ಎಲ್ಲರಿಗೂ ಸಮಾನ ಹಕ್ಕು ನೀಡಿದೆ: ಅಠಾವಳೆ