LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಪ್ರವಾಸಕ್ಕೆ ಕರೆದೊಯ್ದು ವಿದ್ಯಾರ್ಥಿನಿ ಮೇಲೆ ಪ್ರಾಂಶುಪಾಲನಿಂದ ಅತ್ಯಾಚಾರ

ಮೀರತ, ೧೨- ಪ್ರಾಂಶುಪಾಲ ಅತ್ಯಾಚಾರ ಎಸಗಿದ ಆರೋಪ ಉತ್ತರಪ್ರದೇಶದ ಮೀರತ್ ನಲ್ಲಿ ವರದಿಯಾಗಿದೆ.



ಪ್ರಾಂಶುಪಾಲರು ನವೆಂಬರ್ 23 ರಂದು ಶಾಲೆಯ ಒಂಭತ್ತು ವಿದ್ಯಾರ್ಥಿನಿಯರನ್ನು ವೃಂದಾವನಕ್ಕೆ ಪ್ರವಾಸಕ್ಕೆ ಕರೆದೊಯ್ದಿದ್ದರು ಮತ್ತು ವಿದ್ಯಾರ್ಥಿನಿಯರಿಗೆ ವಸತಿಗಾಗಿ ಹೋಟೆಲ್‌ನಲ್ಲಿ ಎರಡು ಕೊಠಡಿಗಳನ್ನು ತೆಗೆದುಕೊಂಡಿದ್ದರು.



ಒಂದು ಕೊಠಡಿಯಲ್ಲಿ ಎಂಟು ವಿದ್ಯಾರ್ಥಿನಿಯರು ಉಳಿದುಕೊಂಡಿದ್ದರೆ, ಇನ್ನೊಂದು ಕೊಠಡಿಯಲ್ಲಿ ಪ್ರಾಂಶುಪಾಲರು 11ನೇ ತರಗತಿ ವಿದ್ಯಾರ್ಥಿನಿ -17 ವರ್ಷದ ಬಾಲಕಿಯೊಂದಿಗೆ ಉಳಿದುಕೊಂಡಿದ್ದರು ಎನ್ನಲಾಗಿದೆ.



ಪ್ರಾಂಶುಪಾಲರು ವಿದ್ಯಾರ್ಥಿನಿಯ ಆಹಾರದಲ್ಲಿ ಮಾದಕ ವಸ್ತುವನ್ನು ಬೆರೆಸಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿ ಪ್ರತಿರೋಧ ವ್ಯಕ್ತಪಡಿಸಿದಾಗ, ಪರೀಕ್ಷೆಯಲ್ಲಿ ಅನುತ್ತೀರ್ಣ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಮತ್ತು ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.



ಪ್ರವಾಸದಿಂದ ವಿದ್ಯಾರ್ಥಿಗಳು ನವೆಂಬರ್ 24 ರಂದು ತಮ್ಮ ಮನೆಗೆ ಮರಳಿದ್ದರು. ಆರಂಭದಲ್ಲಿ ಬಾಲಕಿ ಘಟನೆಯ ಬಗ್ಗೆ ಮೌನವಾಗಿದ್ದಳು. ಆದರೆ ನಂತರ ಘಟನೆಗಳ ಕುರಿತು ಸಂಪೂರ್ಣವಾಗಿ ತನ್ನ ಕುಟುಂಬ ಸದಸ್ಯರಿಗೆ ವಿವರಿಸಿದಳು ಎಂದು ಅವರು ಹೇಳಿದರು.



ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಪ್ರಾಂಶುಪಾಲನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು ನಾಪತ್ತೆಯಾಗಿರುವ ಪ್ರಾಂಶುಪಾಲರನ್ನು ಹಿಡಿಯುವ ಪ್ರಯತ್ನ ಮುಂದುವರಿದಿದೆ ಎಂದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತೀಶ ಜಾರಕಿಹೊಳಿ, ಆಪ್ತರ ಮನೆಗಳಲ್ಲಿ ಇಡಿ ಶೋಧ ಅಂತ್ಯಸತೀಶ ಜಾರಕಿಹೊಳಿ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಲಕ್ಷ್ಮಿ ಹೆಬ್ಬಾಳಕರಡಿ.ಕೆ. ಶಿವಕುಮಾರ ತಾಯಿಗೆ ನೋಟಿಸ್ ನೀಡಿಲ್ಲಮತ್ತೆ ಗಾಯಗೊಂಡ ಹರ್ಷಿತ ರಾಣಾ: ಅಫ್ಘಾನಿಸ್ತಾನ ಸರಣಿ, ಏಷ್ಯನ್ ಗೇಮ್ಸ್‌ನಿಂದ ಹೊರಕ್ಕೆಎಸ್‌ಐಆರ್‌ ಅಚ್ಚರಿ: ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!14 ವರ್ಷದ ನಿಶುಗೆ ಅತ್ಯಾಚಾರ ಬೆದರಿಕೆ: ತಕ್ಷಣ ರಕ್ಷಣೆಗೆ ಸುಪ್ರೀಂ ಕೋರ್ಟ ಸೂಚನೆ‘ನನ್ನನ್ನು ಪ್ರಚಾರದ ಸಾಧನವಾಗಿ ಬಳಸಲಾಗಿದೆ’: ಭಾರತ ಸರ್ಕಾರದ ವಿರುದ್ಧ ವಿಜಯ ಮಲ್ಯ ಆರೋಪಉಳಿದ ಭರವಸೆಗಳ ಈಡೇರಿಕೆಗೆ ವೇಗ ನೀಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಸಲಹೆಎಸ್‌ಐಆರ್ : ಡಿ.ಕೆ. ಶಿವಕುಮಾರ ತಾಯಿ ಸೇರಿ ಹಲವು ಗಣ್ಯರಿಗೆ ನೋಟಿಸ್ಗರ್ಬಾದಲ್ಲಿ ಮುಸ್ಲಿಮರಿಗೆ ನಿಷೇಧ ಸರಿಯಲ್ಲ; ಸಂವಿಧಾನ ಎಲ್ಲರಿಗೂ ಸಮಾನ ಹಕ್ಕು ನೀಡಿದೆ: ಅಠಾವಳೆ