LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ನಾಗರ ಪಂಚಮಿ ದಿನವೇ ಹಾವು ಕಡಿತಕ್ಕೆ ಮಹಿಳೆ ಬಲಿ

ರಾಯಬಾಗ: ಎಲ್ಲೆಡೆ ನಾಗರ ಪಂಚಮಿ ಹಬ್ಬದ ಸಂಭ್ರಮ ಮನೆಮಾಡಿದ್ದು, ನಾಗರ ಮೂರ್ತಿಗೆ ಪೂಜೆ ಸಲ್ಲಿಸಿ ಹಾಲೆರೆಯುತ್ತಿದ್ದರೆ, ರಾಯಬಾಗ ಪಟ್ಟಣದ ಬಡ ಕುಟುಂಬವೊಂದರಲ್ಲಿ ಮಾತ್ರ ಹಬ್ಬದ ದಿನವೇ ಸಾವಿನ ಸೂತಕ ಆವರಿಸಿದೆ.

ಹೊಲದಲ್ಲಿ ಕಸ ತೆಗೆಯುವ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ವಿಷಕಾರಿ ಹಾವು ಕಚ್ಚಿ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಮೃತಪಟ್ಟಿರುವ ದಾರುಣ ಘಟನೆ ರಾಯಬಾಗ ಪಟ್ಟಣದಲ್ಲಿ ನಡೆದಿದೆ.

ಮೃತರನ್ನು ರಾಯಬಾಗ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ನಗರದ ನಿವಾಸಿ ಸತ್ಯವ್ವ ಶಿವಾನಂದ ಶಿಂಗೆ (43) ಎಂದು ಗುರುತಿಸಲಾಗಿದೆ.

ಕುಟುಂಬದ ಆರ್ಥಿಕ ಸಂಕಷ್ಟ ನಿವಾರಿಸಲು ಸತ್ಯವ್ವ ಅವರು ಎಂದಿನಂತೆ ಸೋಮವಾರ ಹೊಲದಲ್ಲಿ ಕಸ ತೆಗೆಯುವ ಕೆಲಸಕ್ಕೆ ತೆರಳಿದ್ದರು. ಕೆಲಸ ಮಾಡುತ್ತಿದ್ದ ವೇಳೆ ಹೊಲದಲ್ಲಿ ಅಡಗಿದ್ದ ವಿಷಕಾರಿ ಕೊಳಕು ಮಂಡಲ ಹಾವು ಏಕಾಏಕಿ ಅವರಿಗೆ ಕಚ್ಚಿದೆ. ಹಾವು ಕಚ್ಚಿದ ಕೂಡಲೇ ತೀವ್ರ ಅಸ್ವಸ್ಥಗೊಂಡ ಸತ್ಯವ್ವ ಅವರನ್ನು ಕುಟುಂಬಸ್ಥರು ಹಾಗೂ ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರೂ, ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ.

ಕುಟುಂಬಕ್ಕೆ ಆಧಾರವಾಗಿದ್ದ ಸತ್ಯವ್ವ ಅವರ ಅಕಾಲಿಕ ಸಾವಿನಿಂದ ಮಕ್ಕಳು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ನಾಗರ ಪಂಚಮಿ ಹಬ್ಬದ ದಿನವೇ ಸಂಭವಿಸಿದ ಈ ದುರಂತದಿಂದ ಕುಟುಂಬದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

ಈ ಘಟನೆ ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗರ ಪಂಚಮಿ ದಿನವೇ ಹಾವು ಕಡಿತಕ್ಕೆ ಮಹಿಳೆ ಬಲಿಕಾಡುಹಂದಿಗಳ ದಾಳಿಗೆ ಕಬ್ಬು ಬೆಳೆ ನಾಶಗದ್ದಲದ ನಡುವೆಯೇ ಮುಕ್ತಾಯ ಕಂಡ ಸಂಸತ್ ಅಧಿವೇಶನ: ಚರ್ಚೆಯಿಲ್ಲದೆ 11 ಮಸೂದೆಗಳ ಅಂಗೀಕಾರ300 ಅಡಿ ಕುಸಿದ ವಿಮಾನ, ಪೈಲಟ್ ಗಾಂಜಾ ಸೇವನೆ ಪತ್ತೆ!ಮಾನವ ಹಕ್ಕುಗಳ ಪಾಠ ನಿಲ್ಲಿಸಿ; ಫ್ರಾನ್ಸ್ ವಿರುದ್ಧ ಇರಾನ್ ಕಿಡಿ25 ಬಿಜೆಪಿ ನಾಯಕರು, ಹಿಂದುತ್ವ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ನ್ಯಾಯಾಲಯದ ಅನುಮತಿ!ದೇಶಕ್ಕೇ ಮಾದರಿಯಾಗುವಂತೆ ಗಣೇಶೋತ್ಸವ ಆಚರಿಸೋಣಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಮೊಬೈಲ್‌, ಪೆನ್‌ಡ್ರೈವನಲ್ಲಿ ಅಶ್ಲೀಲ ವಿಡಿಯೋ ಪತ್ತೆ ; ವಿಐಪಿ ಸೆಲ್‌ನಿಂದ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಭೂಕಂಪದೇಶಭಕ್ತಿಯ ಸರ್ಟಿಫಿಕೇಟ್ ನೀಡುವ ಮುನ್ನ ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜದ ಇತಿಹಾಸ ಹೇಳಲಿ: ಪ್ರಿಯಾಂಕ್ ಖರ್ಗೆ