ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜೈ ಶ್ರೀರಾಮ ಘೋಷಣೆಗಳ ನಡುವೆ ಅಲ್ಲಾಹು ಅಕ್ಬರ ಎಂದು ಕೂಗಿದ ಮಹಿಳೆ

ಶಿವಮೊಗ್ಗ, 22:  ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಇಲ್ಲಿನ ಶಿವಪ್ಪ ನಾಯಕ ವೃತ್ತದಲ್ಲಿ ಸೋಮವಾರ ಬಿಜೆಪಿ ಜಿಲ್ಲಾ ಘಟಕದಿಂದ ಸಾರ್ವಜನಿಕರಿಗೆ ಸಿಹಿ ಹಂಚಿಕೆ, ಸಂಭ್ರಮಾಚರಣೆ ವೇಳೆ ಬಿಜೆಪಿ ಕಾರ್ಯಕರ್ತರ 'ಜೈ ಶ್ರೀರಾಮ' ಘೋಷಣೆಗಳಿಗೆ ಪ್ರತಿಯಾಗಿ ಅಲ್ಲಿದ್ದ ಮುಸ್ಲಿಂ ಮಹಿಳೆಯೊಬ್ಬರು 'ಅಲ್ಲಾಹು ಅಕ್ಬರ' ಎಂದು ಘೋಷಣೆ ಕೂಗಿದಾಗ ಕೆಲಕಾಲ ಸ್ಥಳದಲ್ಲಿ ಗೊಂದಲ ಸೃಷ್ಟಿಯಾಯಿತು.

ಬಿಜೆಪಿ ಸಂಭ್ರಮಾಚರಣೆ ವೇಳೆ ಶಿವಪ್ಪ ನಾಯಕ ವೃತ್ತದ ಮೂಲಕ ಸ್ಕೂಟರ್ ನಲ್ಲಿ ಮಗುವಿನೊಂದಿಗೆ ಹೊರಟಿದ್ದ ಮಹಿಳೆ ಸಂಭ್ರಮಾಚರಣೆ ಕಾರ್ಯಕ್ರಮ ನೋಡುತ್ತಾ ನಿಂತಿದ್ದರು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಸಂಚಾರ ದಟ್ಟಣೆ ತಪ್ಪಿಸಲು ಅವರನ್ನು ಅಲ್ಲಿಂದ ಕಳಿಸಲು ಮುಂದಾದರು. ಆಗ ಮಹಿಳೆ ಪ್ರತಿಭಟಿಸಿದರು. ಇದೇ ವೇಳೆ ಸಂಭ್ರಮಾಚರಣೆಯಲ್ಲಿ ನಿರತರಾಗಿದ್ದವರು 'ಜೈ ಶ್ರೀರಾಮ' ಎಂದು ಘೋಷಣೆ ಕೂಗುತ್ತಿದ್ದರು. ಆಗ ಮಹಿಳೆಯೂ 'ಅಲ್ಲಾಹು ಅಕ್ಬರ್' ಎಂದು ಘೋಷಣೆ ಕೂಗಿದರು. ಇದರಿಂದ ಪೊಲೀಸರು ತಬ್ಬಿಬ್ಬಾದರು. ಪೊಲೀಸರು ಅಲ್ಲಿಂದ ಕಳುಹಿಸಲು ಮುಂದಾದರೂ ಮಹಿಳೆ ಘೋಷಣೆ ಕೂಗುವುದು ಮುಂದುವರೆಸಿದರು.

ಆಗ ಗುಂಪು ಕೂಡ 'ಜೈಶ್ರೀರಾಮ' ಘೋಷಣೆ ಕೂಗತೊಡಗಿ ಆಕೆಯ ಹಿಂದೆ ಧಾವಿಸಿ ಹೋಯಿತು. ಇದರಿಂದ ಕೆಲಕಾಲ ಗೊಂದಲವೇರ್ಪಟ್ಟಿತು. ಆಗ ಮಹಿಳೆಯನ್ನು ವಶಕ್ಕೆ ಪಡೆದ ಪೊಲೀಸರು ವಾಹನದಲ್ಲಿ ಠಾಣೆಗೆ ಕರೆದೊಯ್ದರು.

'ಅಲ್ಲಾ ಹು ಅಕ್ಬರ' ಎಂದು ಘೋಷಣೆ ಕೂಗಿದ ಮಹಿಳೆಗೆ ಮಾನಸಿಕ ಸ್ಥೀಮಿತ ಇಲ್ಲ ಎಂದು ಆಕೆಯ ತಂದೆ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ ಎಂದು ಜಿಲ್ಲಾ ಪೊಲೀಸ ವರಿಷ್ಠ ಜಿ.ಕೆ.ಮಿಥುನ ಕುಮಾರ ತಿಳಿಸಿದ್ದಾರೆ.

ಮಾನಸಿಕ ಸ್ಥೀಮಿತತೆ ಇಲ್ಲದ ಕಾರಣಕ್ಕೆ ಆಕೆ ಚಿಕಿತ್ಸೆ ಕೂಡ ಪಡೆಯುತ್ತಿದ್ದಾರೆ ಎಂದು ಆಕೆಯ ಕುಟುಂಬದವರು ತಿಳಿಸಿದ್ದು, ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಮಿಥುನ ಕುಮಾರ ತಿಳಿಸಿದ್ದಾರೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.