LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

250 ರೂಪಾಯಿ ಸಿಹಿ ತಿನಿಸು ತರಿಸಲು ಹೋಗಿ 28,000 ರೂ. ಕಳೆದುಕೊಂಡ ಯುವತಿ…!

ಬೆಂಗಳೂರು, ೧೭- ಇತ್ತೀಚಿನ ದಿನಗಳಲ್ಲಿ ಆನ್ ಲೈನ್ ವಂಚನೆ ಪ್ರಕರಣಗಳು ಹೆಚ್ಚಾಗತೊಡಗಿದ್ದು, ಪಿನ್ ನಂಬರ್ ಪಡೆಯುವ ಮೂಲಕ ಮತ್ತು ಕ್ಯೂಆರ್ ಕೋಡ್ ಕಳುಹಿಸುವ ಮೂಲಕ ಹಣ ಲಪಟಾಯಿಸುತ್ತಿದ್ದಾರೆ. ಇದೀಗ ಇಂಥವುದೇ ಮತ್ತೊಂದು ವಂಚನೆ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ.



ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರ ನಿವಾಸಿ ಸ್ಮೃತಿ ಎಂಬವರು ಇತ್ತೀಚೆಗೆ ಆನ್ಲೈನ್ ಮೂಲಕ ಸಿಹಿ ತಿನಿಸು ತರಿಸಲು ಮುಂದಾಗಿದ್ದಾರೆ. ಇದಕ್ಕಾಗಿ ಅವರು ಆನ್ಲೈನ್ ನಲ್ಲಿ ಕಾಂತಿ ಸ್ವೀಟ್ಸ್ ಮಳಿಗೆಯಿಂದ ರೂ.250 ಮೊತ್ತದ ಸಿಹಿತಿನಿಸು ಬುಕ್ ಮಾಡಿದ್ದರು ಎನ್ನಲಾಗಿದೆ.



ಇದಾದ ಸ್ವಲ್ಪ ಹೊತ್ತಿನಲ್ಲಿಯೇ ಕರೆ ಮಾಡಿದವನೊಬ್ಬ ಸಿಹಿ ತಿನಿಸು ಆರ್ಡರ್ ಮಾಡುವ ಮೊದಲು ನೋಂದಣಿ ಮಾಡಬೇಕಾಗುತ್ತದೆ ಎಂದು ತಿಳಿಸಿದ್ದಾನೆ. ಅಷ್ಟೇ ಅಲ್ಲ, ಕ್ಯೂಆರ್ ಕೋಡ್ ಒಂದನ್ನು ಕಳುಹಿಸಿದ್ದಾನೆ. ಇದನ್ನು ನಂಬಿದ ಸ್ಮೃತಿಯವರು ಸ್ಕ್ಯಾನ್ ಮಾಡಿದ ಕೂಡಲೇ ಅವರ ಖಾತೆಯಿಂದ 28,000 ರೂಪಾಯಿ ಕಡಿತವಾಗಿದೆ.



ತಾವು ವಂಚನೆಗೊಳಗಾಗಿರುವುದನ್ನು ಅರಿತ ಸ್ಮೃತಿ ಅವರು ಇದೀಗ ಈಶಾನ್ಯ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗರ ಪಂಚಮಿ ದಿನವೇ ಹಾವು ಕಡಿತಕ್ಕೆ ಮಹಿಳೆ ಬಲಿಕಾಡುಹಂದಿಗಳ ದಾಳಿಗೆ ಕಬ್ಬು ಬೆಳೆ ನಾಶಗದ್ದಲದ ನಡುವೆಯೇ ಮುಕ್ತಾಯ ಕಂಡ ಸಂಸತ್ ಅಧಿವೇಶನ: ಚರ್ಚೆಯಿಲ್ಲದೆ 11 ಮಸೂದೆಗಳ ಅಂಗೀಕಾರ300 ಅಡಿ ಕುಸಿದ ವಿಮಾನ, ಪೈಲಟ್ ಗಾಂಜಾ ಸೇವನೆ ಪತ್ತೆ!ಮಾನವ ಹಕ್ಕುಗಳ ಪಾಠ ನಿಲ್ಲಿಸಿ; ಫ್ರಾನ್ಸ್ ವಿರುದ್ಧ ಇರಾನ್ ಕಿಡಿ25 ಬಿಜೆಪಿ ನಾಯಕರು, ಹಿಂದುತ್ವ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ನ್ಯಾಯಾಲಯದ ಅನುಮತಿ!ದೇಶಕ್ಕೇ ಮಾದರಿಯಾಗುವಂತೆ ಗಣೇಶೋತ್ಸವ ಆಚರಿಸೋಣಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಮೊಬೈಲ್‌, ಪೆನ್‌ಡ್ರೈವನಲ್ಲಿ ಅಶ್ಲೀಲ ವಿಡಿಯೋ ಪತ್ತೆ ; ವಿಐಪಿ ಸೆಲ್‌ನಿಂದ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಭೂಕಂಪದೇಶಭಕ್ತಿಯ ಸರ್ಟಿಫಿಕೇಟ್ ನೀಡುವ ಮುನ್ನ ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜದ ಇತಿಹಾಸ ಹೇಳಲಿ: ಪ್ರಿಯಾಂಕ್ ಖರ್ಗೆ