LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಚಲಿಸುತ್ತಿದ್ದ ರೈಲಿಗೆ ನೂಕಿ ತಳ್ಳಿದ ಪ್ರಿಯಕರ : ಸುದ್ದಿ ಕೇಳಿ ಹೃದಯಾಘಾತದಿಂದ ಯುವತಿ ತಂದೆ ಸಾವು 

ಚೆನ್ನೈ: ಚಲಿಸುವ ರೈಲಿಗೆ ಮಗಳನ್ನು ನೂಕಿ ಕೊಲೆ ಮಾಡಿರುವ ಸುದ್ದಿ ಕೇಳಿ ಹೃದಯಾಘಾತಕ್ಕೀಡಾಗಿದ್ದ ತಂದೆ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಚೆನ್ನೈನಲ್ಲಿ ನಡೆದಿದ್ದು ಮೃತ ಯುವತಿಯನ್ನು ಎಂ. ಸತ್ಯ ಎಂದು ಗುರುತಿಸಲಾಗಿದೆ. ಆಕೆಯ ತಂದೆ ಮಾಣಿಕ್ಯಂ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.



ಚೆನ್ನೈನ ಸೆಂಟ್​ ಥಾಮಸ್​ ಮೌಂಟ್​ ರೈಲು ನಿಲ್ದಾಣದಲ್ಲಿ ಚಲಿಸುವ ರೈಲಿಗೆ ಸತ್ಯಳನ್ನು ದೂಡಿ ಕೊಲೆ ಮಾಡಲಾಗಿದೆ. ಮಗಳ ಸಾವಿನ ಸುದ್ದಿ ಕೇಳಿ ಮಾಣಿಕ್ಯಂಗೆ ಎದೆ ನೋವು ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.



ಸತ್ಯ ಅವರ ತಾಯಿ ರಾಮಲಕ್ಷ್ಮೀ ಅಡಂಬಕ್ಕಮ್​ ಪೊಲೀಸ್​ ಠಾಣೆಯಲ್ಲಿ ಹೆಡ್​ ಕಾನ್ಸ್​ಟೇಬಲ್​ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.



ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸತೀಶ್​ (23)ನನ್ನು ವಶಕ್ಕೆ ಪಡೆಯಲಾಗಿದೆ. ಘಟನೆಯ ಬಳಿಕ ಪರಾರಿಯಾಗಿದ್ದ ಆರೋಪಿಯನ್ನು ಥೊರೈಪಕ್ಕಂ ಬಳಿ ಬಂಧಿಸಲಾಗಿದೆ. ಪ್ರೇಮ ವಿಚಾರಕ್ಕೆ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.



ಈ ಘಟನೆ ನಿನ್ನೆ ಮಧ್ಯಾಹ್ನ ಸೆಂಟ್​ ಥಾಮಸ್​ ಮೌಂಟ್​ ರೈಲು ನಿಲ್ದಾಣದಲ್ಲಿ ನಡೆದಿದೆ. ತೃತೀಯ ವರ್ಷದ ಬಿಬಿಎ ವಿದ್ಯಾರ್ಥಿನಿಯಾಗಿದ್ದ ಸತ್ಯ, ನಿನ್ನೆ ಕಾಲೇಜಿಗೆ ತೆರಳಲು ರೈಲು ನಿಲ್ದಾಣಕ್ಕೆ ಬಂದಿದ್ದಳು.



ಈ ಸಮಯದಲ್ಲಿ ಆರೋಪಿ ಮತ್ತು ಸತ್ಯ ನಡುವೆ ಮಾತಿನ ಚಕಮಕಿ ನಡೆದಿದ್ದು, ತಾಳ್ಮೆ ಕಳೆದುಕೊಂಡ ಆರೋಪಿ, ಸತ್ಯಳನ್ನು ಚಲಿಸುವ ರೈಲಿನ ಮುಂದೆ ನೂಕಿದ್ದಾನೆ. ಈ ವೇಳೆ ರೈಲು ನಿಲ್ದಾಣದಲ್ಲಿದ್ದವರು ಆಕೆಯನ್ನು ರಕ್ಷಿಸಲು ಯತ್ನಿಸಿದಾದರೂ ಅದು ಸಾಧ್ಯವಾಗಲಿಲ್ಲ.



ಪೊಲೀಸರು ಸ್ಥಳಕ್ಕೆ ಬರುವ ಮುನ್ನವೇ ಆರೋಪಿ ಸತೀಶ್​ ಅಲ್ಲಿಂದ ಪರಾರಿಯಾಗಿದ್ದ. ವಿಶೇಷ ತಂಡ ರಚಿಸಿ, ಶೋಧ ಕಾರ್ಯಾಚರಣೆಗೆ ಇಳಿದು, ಆರೋಪಿಯನ್ನು ನಿನ್ನೆಯೇ ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ಆರೋಪಿ ವಿರುದ್ಧ ಸತ್ಯಳ ಪಾಲಕರು ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ