LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ವಾಂಗ್ಚುಕ ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ ಅಭಿಜೀತ ದೀಪ್ಕೆ ಉಪವಾಸ ಆರಂಭ: ‘ಚಲೋ ಸಂಸದ’ ಹೋರಾಟ ಮುಂದುವರಿಕೆ ಘೋಷಣೆ

ಹೊಸದಿಲ್ಲಿ, ಜುಲೈ 18: ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ ಅವರನ್ನು ದೆಹಲಿ ಪೊಲೀಸರು ಬಲವಂತವಾಗಿ ಸಫ್ದರಜಂಗ್ ಆಸ್ಪತ್ರೆಗೆ ದಾಖಲಿಸಿದ ಬೆನ್ನಲ್ಲೇ ಜಂತರ್ ಮಂತರ್‌ನಲ್ಲಿನ ಹೋರಾಟಕ್ಕೆ ಹೊಸ ತಿರುವು ಸಿಕ್ಕಿದೆ. ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ ದೀಪ್ಕೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು, ವಾಂಗ್ಚುಕ ಅವರನ್ನು ತೆರವುಗೊಳಿಸಿದರೂ ಚಳವಳಿ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಘೋಷಿಸಿದ್ದಾರೆ.

ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅಭಿಜೀತ ದೀಪ್ಕೆ, "ನಾನು ಇಂದಿನಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸುತ್ತಿದ್ದೇನೆ. ಯಾರೂ ಹಿಂದೆ ಸರಿಯಬೇಡಿ. ಈ ಚಳವಳಿ ಇನ್ನಷ್ಟು ದೊಡ್ಡದಾಗಿ ಬೆಳೆಯಲಿದೆ. ವಾಂಗ್ಚುಕ ಅವರನ್ನು ಇಲ್ಲಿಂದ ಕರೆದೊಯ್ದರೆ ಹೋರಾಟ ಕೊನೆಗೊಳ್ಳುತ್ತದೆ ಎಂದು ಸರ್ಕಾರ ಭಾವಿಸಿದ್ದರೆ ಅದು ಅವರ ದೊಡ್ಡ ತಪ್ಪು. ಎಲ್ಲರೂ ಜಂತರ್ ಮಂತರ್‌ಗೆ ಬನ್ನಿ. ನಮ್ಮ ಹೋರಾಟ ಇಲ್ಲಿಂದಲೇ ಮುಂದುವರಿಯಲಿದೆ" ಎಂದು ಕರೆ ನೀಡಿದರು.

ಜುಲೈ 20ರಂದು ನಿಗದಿಯಾಗಿರುವ 'ಚಲೋ ಸಂಸದ್' ಮೆರವಣಿಗೆ ಯಾವುದೇ ಕಾರಣಕ್ಕೂ ಮುಂದೂಡಲಾಗುವುದಿಲ್ಲ. ಮೊದಲೇ ನಿಗದಿಪಡಿಸಿದಂತೆ ಅದು ನಡೆಯಲಿದೆ ಎಂದು ಅಭಿಜೀತ ದೀಪ್ಕೆ ಸ್ಪಷ್ಟಪಡಿಸಿದರು.

ಸಿಜೆಪಿ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಅಭಿಜೀತ ದೀಪ್ಕೆ ಉಪವಾಸ ಸತ್ಯಾಗ್ರಹ ಆರಂಭಿಸಿರುವುದನ್ನು ದೃಢಪಡಿಸಿದೆ. "ಅಭಿಜೀತ ದೀಪ್ಕೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಜುಲೈ 20ರಂದು ನಡೆಯಲಿರುವ 'ಚಲೋ ಸಂಸದ್' ಮೆರವಣಿಗೆ ಯೋಜನೆಯಂತೆ ನಡೆಯಲಿದೆ" ಎಂದು ಪೋಸ್ಟ್ ಮಾಡಿದೆ.

ವಾಂಗ್ಚುಕ ಅವರನ್ನು ಮುಂಜಾನೆ ದೆಹಲಿ ಪೊಲೀಸರು ಬಲವಂತವಾಗಿ ಸಫ್ದರಜಂಗ್ ಆಸ್ಪತ್ರೆಗೆ ದಾಖಲಿಸಿದ ನಂತರ ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರ ಆಕ್ರೋಶ ಹೆಚ್ಚಾಗಿದೆ. ವಾಂಗ್ಚುಕ ಅವರ ಅನುಪಸ್ಥಿತಿಯಲ್ಲೂ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಪ್ರತಿಭಟನಾಕಾರರು ಘೋಷಿಸಿದ್ದು, ಅಭಿಜೀತ ದೀಪ್ಕೆ ಅವರ ಉಪವಾಸ ಸತ್ಯಾಗ್ರಹದೊಂದಿಗೆ ಚಳವಳಿಗೆ ಹೊಸ ನಾಯಕತ್ವ ದೊರೆತಂತಾಗಿದೆ.

ಇದಲ್ಲದೆ, ಪೊಲೀಸರ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಅಭಿಜೀತ ದೀಪ್ಕೆ, ವಾಂಗ್ಚುಕ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ಯುವ ಮೂಲಕ ಸರ್ಕಾರ ಪ್ರತಿಭಟನೆಯನ್ನು ಹತ್ತಿಕ್ಕಲು ಯತ್ನಿಸಿದೆ. ಆದರೆ ಈ ಕ್ರಮದಿಂದ ಹೋರಾಟ ನಿಲ್ಲುವುದಿಲ್ಲ. ಬದಲಾಗಿ ಮತ್ತಷ್ಟು ಬಲಿಷ್ಠವಾಗಲಿದೆ ಎಂದು ಹೇಳಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಡುಹಂದಿಗಳ ದಾಳಿಗೆ ಕಬ್ಬು ಬೆಳೆ ನಾಶಗದ್ದಲದ ನಡುವೆಯೇ ಮುಕ್ತಾಯ ಕಂಡ ಸಂಸತ್ ಅಧಿವೇಶನ: ಚರ್ಚೆಯಿಲ್ಲದೆ 11 ಮಸೂದೆಗಳ ಅಂಗೀಕಾರ300 ಅಡಿ ಕುಸಿದ ವಿಮಾನ, ಪೈಲಟ್ ಗಾಂಜಾ ಸೇವನೆ ಪತ್ತೆ!ಮಾನವ ಹಕ್ಕುಗಳ ಪಾಠ ನಿಲ್ಲಿಸಿ; ಫ್ರಾನ್ಸ್ ವಿರುದ್ಧ ಇರಾನ್ ಕಿಡಿ25 ಬಿಜೆಪಿ ನಾಯಕರು, ಹಿಂದುತ್ವ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ನ್ಯಾಯಾಲಯದ ಅನುಮತಿ!ದೇಶಕ್ಕೇ ಮಾದರಿಯಾಗುವಂತೆ ಗಣೇಶೋತ್ಸವ ಆಚರಿಸೋಣಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಮೊಬೈಲ್‌, ಪೆನ್‌ಡ್ರೈವನಲ್ಲಿ ಅಶ್ಲೀಲ ವಿಡಿಯೋ ಪತ್ತೆ ; ವಿಐಪಿ ಸೆಲ್‌ನಿಂದ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಭೂಕಂಪದೇಶಭಕ್ತಿಯ ಸರ್ಟಿಫಿಕೇಟ್ ನೀಡುವ ಮುನ್ನ ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜದ ಇತಿಹಾಸ ಹೇಳಲಿ: ಪ್ರಿಯಾಂಕ್ ಖರ್ಗೆಖರ್ಗೆ ರ‍್ಯಾಲಿ ನಡೆದ ಸ್ಥಳದಲ್ಲಿ ‘ಶುದ್ಧೀಕರಣ’ ಹವನ; ಬಿಜೆಪಿ–ಕಾಂಗ್ರೆಸ್ ನಡುವೆ ವಾಕ್ಸಮರ