LIVE TV LocalCrimeNationalInternationalPoliticsFinancialEducationTechnologyEntertainmentSportsHealthFeatureTravelingBeautyRecipes
Crime News

ನಿಪ್ಪಾಣಿ ಬಳಿ ಅಪಘಾತ: ಪೊಲೀಸ್, ಪುತ್ರಿ ಸಾವು

ನಿಪ್ಪಾಣಿ: ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಸಮೀಪದ ಸ್ಥವನಿಧಿ ಘಾಟ್‌ನಲ್ಲಿ ಗುರುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪೊಲೀಸ್ ಹೆಡ್‌ಕಾನ್ಸ್‌ಟೇಬಲ್ ಹಾಗೂ ಅವರ ಪುತ್ರಿ ಮೃತಪಟ್ಟಿದ್ದಾರೆ.

ಮೃತರನ್ನು ಪುಂಡಲೀಕ ಹಟ್ಟಿ (50) ಹಾಗೂ ಅವರ ಪುತ್ರಿ ನಿಖಿತಾ ಹಟ್ಟಿ (24) ಎಂದು ಗುರುತಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಇಬ್ಬರೂ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ವೇಗತಡೆ ಬಳಿ ಪುಂಡಲೀಕ ಬ್ರೇಕ್ ಹಾಕಿದ್ದಾರೆ. ಹಿಂದಿನಿಂದ ಬರುತ್ತಿದ್ದ ಲಾರಿ ಚಾಲಕ ಸಮಯಕ್ಕೆ ಸರಿಯಾಗಿ ವಾಹನ ನಿಲ್ಲಿಸಲು ಸಾಧ್ಯವಾಗದೆ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ.

ಡಿಕ್ಕಿಯ ರಭಸಕ್ಕೆ ತಂದೆ, ಮಗಳು ರಸ್ತೆಗೆ ಬಿದ್ದು ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST