LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Entertainment News

ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿರುವ ನಟಿ ಉಮಾ ಶಂಕರಿ

ಬೆಂಗಳೂರು, 15: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ 'ಉಪ್ಪಿದಾದ ಎಂ.ಬಿ.ಬಿ.ಎಸ್' ಚಿತ್ರದ ಮೂಲಕ ಜನಪ್ರಿಯತೆ ಗಳಿಸಿದ್ದ ನಟಿ ಉಮಾ ಶಂಕರಿ ಅವರಿಗೆ ಸ್ತನ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಈ ವಿಷಯವನ್ನು ಸ್ವತಃ ಅವರು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ್ದು, ಅಭಿಮಾನಿಗಳು ಹಾಗೂ ಚಿತ್ರರಂಗದಲ್ಲಿ ಕಳವಳ ಮೂಡಿಸಿದೆ.

ಕನ್ನಡ, ತಮಿಳು ಹಾಗೂ ತೆಲುಗು ಚಿತ್ರರಂಗದಲ್ಲಿ ನಟಿಸಿದ್ದ ಉಮಾ ಶಂಕರಿ, ಮದುವೆಯ ಬಳಿಕ ಚಿತ್ರರಂಗದಿಂದ ದೂರ ಉಳಿದಿದ್ದರು. ಇದೀಗ ತಮಗೆ ಸ್ತನ ಕ್ಯಾನ್ಸರ್ ಇರುವುದು ದೃಢಪಟ್ಟಿದ್ದು, ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ. ಸದ್ಯ ಎರಡನೇ ಸುತ್ತಿನ ಕಿಮೊಥೆರಪಿ ಹಾಗೂ ಇಮ್ಯುನೊಥೆರಪಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಅವರು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕವಾಗಿ ಬರೆದುಕೊಂಡಿರುವ ಉಮಾ ಶಂಕರಿ, "ಪ್ರಸ್ತುತ ಎರಡನೇ ಸುತ್ತಿನ ಕಿಮೊಥೆರಪಿ ಮತ್ತು ಇಮ್ಯುನೊಥೆರಪಿ ಚಿಕಿತ್ಸೆಗೆ ಒಳಗಾಗಿದ್ದೇನೆ. ಪ್ರತಿಯೊಂದು ದಿನವನ್ನೂ ಧೈರ್ಯದಿಂದ ಎದುರಿಸುತ್ತಿದ್ದೇನೆ. ನೋವಿನಿಂದ ಕೂಡಿದ ದಿನಗಳನ್ನು ಹೇಗೆ ನಿಭಾಯಿಸಬೇಕು ಎಂಬುದನ್ನು ಕಲಿಯುತ್ತಿದ್ದೇನೆ" ಎಂದು ತಿಳಿಸಿದ್ದಾರೆ.

ಈ ಕಠಿಣ ಸಂದರ್ಭದಲ್ಲಿ ತಮ್ಮ ಬೆಂಬಲಕ್ಕೆ ನಿಂತಿರುವ ಕುಟುಂಬದ ಸದಸ್ಯರು ಹಾಗೂ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿರುವ ಅವರು, ಎಲ್ಲರ ಪ್ರೀತಿ, ಪ್ರಾರ್ಥನೆ ಮತ್ತು ಶುಭಹಾರೈಕೆಗಳು ತಮ್ಮಲ್ಲಿ ಧೈರ್ಯ ತುಂಬಿವೆ ಎಂದು ಹೇಳಿದ್ದಾರೆ. ಚಿಕಿತ್ಸೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಸಂಪೂರ್ಣ ಗುಣಮುಖರಾಗುವತ್ತ ಗಮನ ಹರಿಸಿರುವುದಾಗಿ ಉಮಾ ಶಂಕರಿ ತಿಳಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಡುಹಂದಿಗಳ ದಾಳಿಗೆ ಕಬ್ಬು ಬೆಳೆ ನಾಶಗದ್ದಲದ ನಡುವೆಯೇ ಮುಕ್ತಾಯ ಕಂಡ ಸಂಸತ್ ಅಧಿವೇಶನ: ಚರ್ಚೆಯಿಲ್ಲದೆ 11 ಮಸೂದೆಗಳ ಅಂಗೀಕಾರ300 ಅಡಿ ಕುಸಿದ ವಿಮಾನ, ಪೈಲಟ್ ಗಾಂಜಾ ಸೇವನೆ ಪತ್ತೆ!ಮಾನವ ಹಕ್ಕುಗಳ ಪಾಠ ನಿಲ್ಲಿಸಿ; ಫ್ರಾನ್ಸ್ ವಿರುದ್ಧ ಇರಾನ್ ಕಿಡಿ25 ಬಿಜೆಪಿ ನಾಯಕರು, ಹಿಂದುತ್ವ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ನ್ಯಾಯಾಲಯದ ಅನುಮತಿ!ದೇಶಕ್ಕೇ ಮಾದರಿಯಾಗುವಂತೆ ಗಣೇಶೋತ್ಸವ ಆಚರಿಸೋಣಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಮೊಬೈಲ್‌, ಪೆನ್‌ಡ್ರೈವನಲ್ಲಿ ಅಶ್ಲೀಲ ವಿಡಿಯೋ ಪತ್ತೆ ; ವಿಐಪಿ ಸೆಲ್‌ನಿಂದ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಭೂಕಂಪದೇಶಭಕ್ತಿಯ ಸರ್ಟಿಫಿಕೇಟ್ ನೀಡುವ ಮುನ್ನ ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜದ ಇತಿಹಾಸ ಹೇಳಲಿ: ಪ್ರಿಯಾಂಕ್ ಖರ್ಗೆಖರ್ಗೆ ರ‍್ಯಾಲಿ ನಡೆದ ಸ್ಥಳದಲ್ಲಿ ‘ಶುದ್ಧೀಕರಣ’ ಹವನ; ಬಿಜೆಪಿ–ಕಾಂಗ್ರೆಸ್ ನಡುವೆ ವಾಕ್ಸಮರ