LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರ

ಬೆಂಗಳೂರು, ಮೇ 15 : ಪೆಟ್ರೋಲ್‌ ಹಾಗೂ ಡೀಸೆಲ್‌ ದರ ಏರಿಕೆಯ ಬೆನ್ನಲ್ಲೇ ರಾಜ್ಯದ ಖಾಸಗಿ ಬಸ್‌ ಪ್ರಯಾಣಿಕರಿಗೆ ಮತ್ತೊಂದು ಶಾಕ್‌ ಎದುರಾಗಿದೆ. ಇಂಧನ ವೆಚ್ಚ ಹೆಚ್ಚಳದಿಂದ ಕಾರ್ಯಾಚರಣೆ ದುಬಾರಿಯಾಗಿರುವ ಹಿನ್ನೆಲೆಯಲ್ಲಿ ಖಾಸಗಿ ಬಸ್‌ ಟಿಕೆಟ್‌ ದರವನ್ನು ಇಂದಿನ ಮಧ್ಯರಾತ್ರಿಯಿಂದಲೇ ಶೇ.20ರಿಂದ 30ರವರೆಗೆ ಹೆಚ್ಚಿಸಲು ಬಸ್‌ ಮಾಲೀಕರು ತೀರ್ಮಾನಿಸಿದ್ದಾರೆ.

ಈ ದರ ಏರಿಕೆಯಿಂದ ರಾಜ್ಯದಾದ್ಯಂತ ಲಕ್ಷಾಂತರ ಪ್ರಯಾಣಿಕರ ಮೇಲೆ ನೇರ ಪರಿಣಾಮ ಬೀಳಲಿದ್ದು, ಪ್ರತಿದಿನ ಉದ್ಯೋಗ, ಶಿಕ್ಷಣ ಹಾಗೂ ವ್ಯಾಪಾರ ಉದ್ದೇಶಗಳಿಗೆ ಬಸ್‌ ಅವಲಂಬಿಸಿರುವ ಜನರ ಜೇಬಿಗೆ ಮತ್ತಷ್ಟು ಹೊರೆ ಬೀಳಲಿದೆ.

ಇತ್ತೀಚಿನ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಲೇ ಜನಸಾಮಾನ್ಯರು ಸಂಕಷ್ಟ ಅನುಭವಿಸುತ್ತಿರುವ ಸಂದರ್ಭದಲ್ಲಿ ಇದೀಗ ಸಾರಿಗೆ ವೆಚ್ಚವೂ ಹೆಚ್ಚಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಡೀಸೆಲ್‌ ದರ ನಿರಂತರ ಏರಿಕೆಯಿಂದ ಬಸ್‌ಗಳ ನಿರ್ವಹಣೆ, ಬಿಡಿಭಾಗಗಳ ಖರೀದಿ, ಚಾಲಕರು ಹಾಗೂ ಸಿಬ್ಬಂದಿಗಳ ವೇತನ ಸೇರಿದಂತೆ ವಿವಿಧ ಕಾರ್ಯಾಚರಣಾ ವೆಚ್ಚಗಳು ಹೆಚ್ಚಾಗಿವೆ. ಈ ಹಿನ್ನೆಲೆಯಲ್ಲಿ ಟಿಕೆಟ್‌ ದರ ಏರಿಕೆ ಅನಿವಾರ್ಯವಾಗಿದೆ ಎಂದು ಖಾಸಗಿ ಬಸ್‌ ಮಾಲೀಕರು ತಿಳಿಸಿದ್ದಾರೆ.

ಇಂದು ಬೆಳಿಗ್ಗೆ ತೈಲ ಕಂಪನಿಗಳು ಪೆಟ್ರೋಲ್‌ ಹಾಗೂ ಡೀಸೆಲ್‌ ದರ ಪರಿಷ್ಕರಣೆ ಮಾಡಿದ್ದು, ಬೆಂಗಳೂರಿನಲ್ಲಿ ಪೆಟ್ರೋಲ್‌ ದರ ಲೀಟರ್‌ಗೆ ₹3.27 ಹಾಗೂ ಡೀಸೆಲ್‌ ದರ ₹3.12 ಏರಿಕೆಯಾಗಿದೆ. ಇದೇ ವೇಳೆ ದೇಶಾದ್ಯಂತ ಸಿಎನ್‌ಜಿ ದರವನ್ನೂ ಪ್ರತಿ ಕೆಜಿಗೆ ₹2 ಹೆಚ್ಚಿಸಲಾಗಿದೆ.

ಹಾರ್ಮುಜ್‌ ಜಲಸಂಧಿಯಲ್ಲಿ ಉಂಟಾದ ದಿಗ್ಬಂಧನದಿಂದ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವುದೇ ದರ ಏರಿಕೆಗೆ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ.

ಖಾಸಗಿ ಬಸ್‌ ದರ ಏರಿಕೆಯಿಂದ ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ದೂರ ಪ್ರಯಾಣ ಮಾಡುವ ಸಾಮಾನ್ಯ ಜನರಿಗೆ ಹೆಚ್ಚುವರಿ ಆರ್ಥಿಕ ಹೊರೆ ಬೀಳಲಿದೆ. ಈಗಾಗಲೇ ಬೆಲೆ ಏರಿಕೆ ಬಿಸಿಯಲ್ಲಿರುವ ಜನರು ಈ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST