LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಎನ್‌ಡಿಎಗೆ ಮರಳಿದ ಅಕಾಲಿದಳ; ಜಂಟಿ ಸ್ಪರ್ಧೆ

ಹೊಸದಿಲ್ಲಿ, ನ. 24: ಮುಂಬರುವ 2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮೈತ್ರಿ ಮಾಡಿಕೊಂಡಿದ್ದು, ಈ ಮೂಲಕ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ (ಎನ್‌ಡಿಎ) ಅಕಾಲಿದಳ ಮರಳಿದೆ. ಪಂಜಾಬ್‌ನಲ್ಲಿ ಅಕಾಲಿದಳವೇ ಮೈತ್ರಿಕೂಟದ ಹಿರಿಯ ಪಾಲುದಾರನಾಗಿರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ ಷಾ ತಿಳಿಸಿದ್ದಾರೆ.

ಹೊಸದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಂಗಳವಾರ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಮಿತ ಷಾ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಎಲ್.ಕೆ. ಅಡ್ವಾಣಿ ಅವರ ಕಾಲದಿಂದಲೂ ಬಿಜೆಪಿ ಮತ್ತು ಅಕಾಲಿದಳದ ನಡುವೆ ಗಟ್ಟಿಯಾದ ಬಾಂಧವ್ಯವಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಂಜಾಬ್‌ನ ಎಲ್ಲ 117 ಕ್ಷೇತ್ರಗಳಲ್ಲೂ ಎನ್‌ಡಿಎ ಒಗ್ಗಟ್ಟಿನಿಂದ ಸ್ಪರ್ಧಿಸಲಿದೆ ಎಂದು ಘೋಷಿಸಿದರು.

ಪಂಜಾಬ್‌ನಲ್ಲಿ ವ್ಯಾಪಕವಾಗಿರುವ ಮಾದಕವಸ್ತುಗಳ ಹಾವಳಿಯನ್ನು 2029ರ ಡಿ. 30ರೊಳಗೆ ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದಾಗಿ ಭರವಸೆ ನೀಡಿದ ಅವರು, ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಸ್ತಿತ್ವಕ್ಕೆ ಬಂದ 3 ತಿಂಗಳೊಳಗೆ ರೈತರ ಸಮಸ್ಯೆಗಳು ಹಾಗೂ ಇತರ ಬಾಕಿ ಬೇಡಿಕೆಗಳನ್ನು ಬಗೆಹರಿಸಲಾಗುವುದು ಎಂದು ಹೇಳಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಹಾಗೂ ಅಕಾಲಿದಳದ ನಾಯಕರ ನಡುವೆ ನಡೆದ ಸುದೀರ್ಘ ಮಾತುಕತೆಯ ಬಳಿಕ ಪಂಜಾಬ್‌ನ ಅಭಿವೃದ್ಧಿಗಾಗಿ ಹೊಸ ಕಾರ್ಯಯೋಜನೆ ರೂಪಿಸಲಾಗಿದೆ. ರಾಜ್ಯದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬಂದ ಬಳಿಕ ಅದನ್ನು ಜಾರಿಗೊಳಿಸಲಾಗುವುದು ಎಂದು ಅಮಿತ ಷಾ ತಿಳಿಸಿದರು.

ಆಮ್ ಆದ್ಮಿ ಪಕ್ಷದ ವಿರುದ್ಧ ವಾಗ್ದಾಳಿ

ಮೈತ್ರಿ ಘೋಷಣೆಯ ಬೆನ್ನಲ್ಲೇ ಪಂಜಾಬ್‌ನ ಆಡಳಿತಾರೂಢ ಆಮ್ ಆದ್ಮಿ ಪಕ್ಷದ ವಿರುದ್ಧ ಎನ್‌ಡಿಎ ನಾಯಕರು ವಾಗ್ದಾಳಿ ನಡೆಸಿದರು. ಮುಂಬರುವ ಚುನಾವಣೆಯಲ್ಲಿ ಪಂಜಾಬ್‌ನ ಜನತೆ ತಮ್ಮ ಮತದಾನದ ಮೂಲಕ ಆಮ್ ಆದ್ಮಿ ಪಕ್ಷದ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲಿದ್ದಾರೆ ಎಂದು ಅಮಿತ ಷಾ ಹೇಳಿದರು.

ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಮಾತನಾಡಿ, ಬಿಜೆಪಿ ಜತೆಗಿನ ಮೈತ್ರಿ ಕೇವಲ ಚುನಾವಣಾ ರಾಜಕೀಯಕ್ಕೆ ಸೀಮಿತವಾದ ಹೊಂದಾಣಿಕೆಯಲ್ಲ. ಪಂಜಾಬ್‌ನ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ರೂಪುಗೊಂಡ ಸಹಜ ಬಾಂಧವ್ಯವಾಗಿದೆ ಎಂದು ಪ್ರತಿಪಾದಿಸಿದರು.

106 ವರ್ಷಗಳ ಇತಿಹಾಸ ಹೊಂದಿರುವ ಅಕಾಲಿದಳವು ವಾಜಪೇಯಿ ಅವರ ಕಾಲದಿಂದಲೂ ಬಿಜೆಪಿಯೊಂದಿಗೆ ಮೈತ್ರಿ ಹೊಂದಿತ್ತು ಎಂದು ಸ್ಮರಿಸಿದ ಅವರು, ಆಮ್ ಆದ್ಮಿ ಪಕ್ಷದ ಆಡಳಿತದಲ್ಲಿ ಪಂಜಾಬ್‌ನ ಆಡಳಿತ ವ್ಯವಸ್ಥೆ ಕುಸಿದಿದ್ದು, ಅಪರಾಧಿ ಗುಂಪುಗಳ ಅಟ್ಟಹಾಸ ಹೆಚ್ಚಾಗಿದೆ ಎಂದು ಆರೋಪಿಸಿದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST