LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಸೇರಿ ಎಲ್ಲಾ ಆಚರಣೆಗಳಿಗೂ ಅನುಮತಿ 

ಧಾರವಾಡ : ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಸೇರಿ ಎಲ್ಲಾ ಆಚರಣೆಗಳಿಗೆ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ಅವಕಾಶ ನೀಡಿದೆ. ಇತ್ತೀಚೆಗೆ ಈ ಮೈದಾನದಲ್ಲಿ ಭಾರಿ ವಿವಾದದ ಬಳಿಕ ಗಣೇಶೋತ್ಸವ ಆಚರಿಸಲಾಗಿತ್ತು, ನಂತರ ಟಿಪ್ಪು ಜಯಂತಿ ಆಚರಣೆಗೆ ಮನವಿ ನೀಡುವಂತೆ ಪಟ್ಟು ಹಿಡಿಯಲಾಗಿತ್ತು.



ಇದೀಗ ಭಾರೀ ಚರ್ಚೆ-ವಿವಾದದ ಬಳಿಕ ಇಂದು ಸಭೆ ನಡೆದಿದ್ದು, ಸಭೆ ಬಳಿಕ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರು ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಸೇರಿ ಎಲ್ಲಾ ಆಚರಣೆಗಳಿಗೂ ಅನುಮತಿ ನೀಡಿದ್ದಾರೆ.



ಮೈದಾನದಲ್ಲಿ ಟಿಪ್ಪು ಜಯಂತಿ ಆಚರಿಸಲು ಅನುಮತಿ ನೀಡಬೇಕೆಂದು ಆಲ್ ಇಂಡಿಯಾ ಮಜ್ಲಿಸ್ ಎ ಇತ್ತೇಹಾದುಲ್ ಮುಸ್ಲಿಮೀನ್ ಹಾಗೂ ಸಮತಾ ಸೈನಿಕದಳ ಕಾರ್ಯಕರ್ತರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಮಾಡಿದ್ದರು. ಇತ್ತೀಚೆಗೆ ಭಾರೀ ವಿವಾದ ಹುಟ್ಟು ಹಾಕಿದ್ದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಲಾಗಿತ್ತು, ನಂತರ ಟಿಪ್ಪು ಜಯಂತಿ ಆಚರಣೆಗೂ ಅವಕಾಶ ನೀಡುವಂತೆ ಮನವಿ ಸಲ್ಲಿಸಲಾಗಿತ್ತು.



ಹಲವು ದಶಕಗಳಿಂದ ಜಮೀನಿನ ವಿವಾದವಿದ್ದು, ಹಿಂದೆ ಮೈಸೂರಿನ ರಾಜಮನೆತನದ ಒಡೆಯರ್ ಕುಟುಂಬದಿಂದ 10 ಎಕರೆಗೂ ಹೆಚ್ಚು ಭೂಮಿಯನ್ನು ಮುಸ್ಲಿಂ ಸಮುದಾಯಕ್ಕೆ ಸ್ಮಶಾನಕ್ಕಾಗಿ ಹಾಗೂ ಈದ್ಗಾಗಾಗಿ ನೀಡಲಾಗಿತ್ತು. ಈದ್ಗಾ ಮುಸ್ಲಿಂ ಸಮುದಾಯಕ್ಕೆ ವರ್ಷಕ್ಕೆ ಎರಡು ಬಾರಿ ಈದ್ ಪ್ರಾರ್ಥನೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ