LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಆಮಿರ ಖಾನ್‌ಗೆ ಜೀವ ಬೆದರಿಕೆ : ಲಾರೆನ್ಸ್ ಬಿಷ್ಣೋಯ ಗ್ಯಾಂಗ್ ವಿರುದ್ಧ ತನಿಖೆ

ಹೊಸದಿಲ್ಲಿ, ಜುಲೈ 18: ಬಾಲಿವುಡ್ ನಟ ಆಮಿರ ಖಾನ್ ಅವರಿಗೆ ಲಾರೆನ್ಸ್ ಬಿಷ್ಣೋಯ ಗ್ಯಾಂಗ್‌ನಿಂದ ಜೀವ ಬೆದರಿಕೆ ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಪೋಸ್ಟ್ ಮತ್ತು ಆಡಿಯೊ ಕ್ಲಿಪ್‌ಗಳ ಕುರಿತು ತನಿಖಾ ಸಂಸ್ಥೆಗಳು ಪರಿಶೀಲನೆ ನಡೆಸುತ್ತಿವೆ.

ಗ್ಯಾಂಗ್‌ಗೆ ಸಂಬಂಧಿಸಿದೆ ಎನ್ನಲಾದ ಆರ್ಜೂ ಬಿಷ್ಣೋಯ ಮತ್ತು ಟೈಸನ್ ಬಿಷ್ಣೋಯ ಹೆಸರಿನ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಆಮಿರ ಖಾನ್ ವಿರುದ್ಧ ಆರೋಪಗಳನ್ನು ಮಾಡಲಾಗಿದೆ. ನಟರು 'ಲವ್ ಜಿಹಾದ' ಅನ್ನು ಉತ್ತೇಜಿಸುತ್ತಿದ್ದಾರೆ ಎಂದು ಪೋಸ್ಟ್‌ನಲ್ಲಿ ಆರೋಪಿಸಿ, ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ.

ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ತನಿಖಾಧಿಕಾರಿಗಳು, ಅಮೆರಿಕದ ಎಫ್‌ಬಿಐ ನಡೆಸಿದ 'ಆಪರೇಷನ್ ಹಾರ್ಡಬಾಲ್' ಕಾರ್ಯಾಚರಣೆಯಿಂದ ಗ್ಯಾಂಗ್ ಹಿಂದೆ ಸರಿದಿಲ್ಲ ಎಂಬ ಸಂದೇಶ ನೀಡುವ ಉದ್ದೇಶದಿಂದಲೇ ಇಂತಹ ಪೋಸ್ಟಗಳನ್ನು ಪ್ರಕಟಿಸಿರಬಹುದು ಎಂಬ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ. ಈ ಎಲ್ಲ ಅಂಶಗಳ ಕುರಿತು ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಮಿರ ಖಾನ್ ವಿರುದ್ಧದ ಪೋಸ್ಟ್ ಜೊತೆಗೆ, ಇತ್ತೀಚೆಗೆ ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಯುವತಿಯೊಬ್ಬಳ ಮೇಲಿನ ಅಪರಾಧ ಪ್ರಕರಣವನ್ನೂ ಅದರಲ್ಲಿ ಉಲ್ಲೇಖಿಸಲಾಗಿದೆ. ಪ್ರಕರಣವನ್ನು ಸ್ಥಳೀಯ ಆಡಳಿತ ನಿರ್ವಹಿಸಿದ ರೀತಿಯನ್ನು ಶ್ಲಾಘಿಸಿರುವ ಪೋಸ್ಟನಲ್ಲಿ, ಆರೋಪಿಗಳಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಆರೋಪಿಸಲಾದ ಕೆಲ ರಾಜಕೀಯ ವ್ಯಕ್ತಿಗಳ ವಿರುದ್ಧವೂ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ.

ಪೋಸ್ಟ್ ಮತ್ತು ಆಡಿಯೊ ಕ್ಲಿಪ್‌ಗಳ ಸತ್ಯಾಸತ್ಯತೆ, ಅವುಗಳ ಮೂಲ ಹಾಗೂ ಅವುಗಳನ್ನು ಪ್ರಕಟಿಸಿದವರ ಗುರುತಿನ ಕುರಿತು ಸಂಬಂಧಪಟ್ಟ ತನಿಖಾ ಸಂಸ್ಥೆಗಳು ಪರಿಶೀಲನೆ ನಡೆಸುತ್ತಿದ್ದು, ಭದ್ರತಾ ದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣಸಮಾಜದ ಜಟಿಲ ಸಮಸ್ಯೆಗಳ ಪರಿಹಾರಕ್ಕೆ ಸಂಘಟನೆಗಳು ಮುಂದಾಗಲಿ: ಡಾ. ಅಲ್ಲಮಪ್ರಭು ಶ್ರೀ