LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಎಸಿಬಿ ರದ್ದು ಪ್ರಶ್ನಿಸಿ ಸುಪ್ರೀಮ ಕೋರ್ಟಗೆ ಮೇಲ್ಮನವಿ

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ವನ್ನು ರದ್ದುಗೊಳಿಸಿ, ಅಲ್ಲಿನ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿದ್ದ ಕರ್ನಾಟಕ ಹೈಕೋರ್ಟ ಆದೇಶ ಪ್ರಶ್ನಿಸಿ ಸುಪ್ರೀಮ ಕೋರ್ಟಗೆ ಮೇಲ್ಮನವಿ ಸಲ್ಲಿಸಲಾಗಿದೆ.



ಕನಕರಾಜು ಎನ್ನುವ ವ್ಯಕ್ತಿಯೊಬ್ಬರು ವಕೀಲ ಅಶೋಕ ಪಾಣಿಗ್ರಾಹಿ ಅವರ ಮೂಲಕ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ, ಸಿ.ಟಿ.ರವಿಕುಮಾರ ಪೀಠದ ಮುಂದೆ ಅರ್ಜಿ ಸಲ್ಲಿಸಿದ್ದಾರೆ. ಇನ್ನು ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ತ್ರಿಸದಸ್ಯ ಪೀಠ ಹೇಳಿದೆ.



ರಾಜ್ಯ ಸರ್ಕಾರವೇ ಎಸಿಬಿ ರದ್ದು ಪ್ರಶ್ನಿಸಿ ಸುಪ್ರೀಮ ಕೋರ್ಟಗೆ ಮೇಲ್ಮನವಿ ಸಲ್ಲಿಸಿದೆ ಹೇಳಲಾಗಿತ್ತು. ಆದರೆ ಈ ವರದಿಯನ್ನು ತಳ್ಳಿಹಾಕಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಖಾಸಗಿ ಮೇಲ್ಮನವಿ ಅರ್ಜಿ ದಾಖಲಾಗಿದೆ. ಈ ವಿಚಾರದಲ್ಲಿ ಸರ್ಕಾರದ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ. ಎಸಿಬಿ ರದ್ದು ಮಾಡುವ ನಮ್ಮ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.



ಮಹತ್ವದ ಬೆಳವಣಿಗೆಯಲ್ಲಿ ಈ ಹಿಂದಿನ ಸರ್ಕಾರ 2016ರಲ್ಲಿ ರಚನೆ ಮಾಡಿದ್ದ ಭ್ರಷ್ಟಾಚಾರ ನಿಗ್ರಹ ದಳವನ್ನು ಕರ್ನಾಟಕ ಹೈಕೋರ್ಟ ಇತ್ತೀಚಿಗೆ ರದ್ದುಗೊಳಿಸಿ, ಎಸಿಬಿಗೆ ನೀಡಲಾಗಿದ್ದ ಪೊಲೀಸ್ ಠಾಣೆ ಸ್ಥಾನಮಾನವನ್ನು ಮರಳಿ ಲೋಕಾಯುಕ್ತ ಸಂಸ್ಥೆಗೆ ನೀಡಿತ್ತು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ