LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಬೆಳಗಾವಿ ಜಿಲ್ಲೆಯಿಂದ ಮತ್ತೊಬ್ಬ ಮಟ್ಕಾ ಬುಕ್ಕಿ ಗಡಿಪಾರು

ಬೆಳಗಾವಿ: ನಗರದಲ್ಲಿ ಮಟ್ಕಾ ಆಡಲು ಜನರನ್ನು ಹುರಿದುಂಬಿಸುತ್ತಿದ್ದ ಮಟ್ಕಾ ಬುಕ್ಕಿಯನ್ನು ಜಿಲ್ಲೆಯಿಂದ ಗಡಿಪಾರು ಮಾಡುವ ಮೂಲಕ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವೀಂದ್ರ ಗಡಾದಿ ಬಿಸಿ ಮುಟ್ಟಿಸಿದ್ದಾರೆ.



ನಗರದ ಅನಗೋಳದ ಪರಶುರಾಮ ಬಾಬು ಮೇತ್ರಿ ಎಂಬಾತನನ್ನು ಒಂದು ವರ್ಷಗಳ ಕಾಲ ಅಂದರೆ ಸೆಪ್ಟೆಂಬರ್, 18 - 2023ರ ವರೆಗೆ ಗಡಿಪಾರು ಮಾಡಲಾಗಿದೆ. ಬೆಳಗಾವಿಯಿಂದ ಬಳ್ಳಾರಿ ಜಿಲ್ಲೆಗೆ ಗಡಿಪಾರು ಮಾಡಿ ಗಡಾದಿ ಆದೇಶ ಹೊರಡಿಸಿದ್ದಾರೆ. ಪರಶುರಾಮ ಮೇತ್ರಿ ವಿರುದ್ಧ ಏಳು ಪ್ರಕರಣಗಳು ದಾಖಲಾಗಿದ್ದವು. ಆರೋಪಿಗೆ ನ್ಯಾಯಾಲಯದಲ್ಲಿ ಶಿಕ್ಷೆ ಕೂಡ ಆಗಿತ್ತು.



ಆದರೂ ಸಾರ್ವಜನಿಕವಾಗಿ ಮಟ್ಕಾ ಆಡಲು ಜನರನ್ನು ಪ್ರೇರೇಪಿಸುತ್ತಿದ್ದನು. ಈ ಬಗ್ಗೆ ಪೊಲೀಸರು ಈತನನ್ನು ಕರೆಯಿಸಿ ವಿಚಾರಣೆ ನಡೆಸಿ ಅನೇಕ ಸಲ ಎಚ್ಚರಿಕೆ ನೀಡಿದ್ದರೂ ಮಟ್ಕಾ ದಂಧೆಯಲ್ಲಿ ತೊಡಗಿದ್ದನು. ಹೀಗಾಗಿ ಡಿಸಿಪಿ ಗಡಾದಿ ಆರೋಪಿ ಪರಶುರಾಮನಿಗೆ ಗಡಿಪಾರು ಮಾಡುವ ಮೂಲಕ ಸಮಾಜಘಾತುಕರಿಗೆ ಎಚ್ಚರಿಕೆ ನೀಡಿದ್ದಾರೆ.



ಮೂರು ತಿಂಗಳ ಹಿಂದೆಯೂ ಇದೇ ರೀತಿಯಾಗಿ ಮಟ್ಕಾ ಆಡುತ್ತ ಜನರನ್ನು ಪ್ರೇರೇಪಿಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬೆಳಗಾವಿ ಜಿಲ್ಲೆಯಿಂದ ಡಿಸಿಪಿ ಗಡಾದಿ ಗಡಿಪಾರು ಮಾಡಿದ್ದರು.



ಮಾರೀಹಾಳ ಪೊಲೀಸ್ ಠಾಣೆ ವ್ಯಾಪ್ತಿಯ ಮಹೇಶ ಯಲ್ಲಪ್ಪ ಯಲ್ಲಾರಿ,‌ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ವಿಲಾಶ ಶಂಕರ ಬಾಳೆಕುಂದ್ರಿ ಎಂಬಾತರನ್ನು ಗಡಿಪಾರು ಮಾಡಿದ್ದರು. ಈಗ ಮತ್ತೊಬ್ಬ ಆರೋಪಿಯನ್ನು ಗಡಿಪಾರು ಮಾಡಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ