LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಗಾಂಜಾ ದಂಧೆಕೋರರ ದಾಳಿ: ಸಿಪಿಐ ಸ್ಥಿತಿ ಚಿಂತಾಜನಕ

ಕಲಬುರಗಿ: ಮಹಾರಾಷ್ಟ್ರದ ತರೂರಿ ಗ್ರಾಮದಲ್ಲಿ ಗಾಂಜಾ ಬೆಳೆಯುತ್ತಿದ್ದವರನ್ನು ಹಿಡಿಯಲು ತೆರಳಿದ್ದ ವೇಳೆ ಕಮಲಾಪುರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ ಶ್ರೀಮಂತ ಇಲ್ಲಾಳ ಅವರ ಮೇಲೆ ದಾಳಿ ನಡೆಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಕಲಬುರಗಿಯ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.



ಗಂಭೀರವಾಗಿ ಗಾಯಗೊಂಡಿರುವ ಶ್ರೀಮಂತ ಇಲ್ಲಾಳ ಅವರಿಗೆ ಅಗತ್ಯವಿದ್ದರೇ ಬೆಂಗಳೂರು ಅಥವಾ ಹೈದರಾಬಾದ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲಾಗುವುದೆಂದು ಈಶಾನ್ಯ ವಲಯ ಐಜಿಪಿ ಮನೀಶ ಖಾರ್ಬಿಕರ ತಿಳಿಸಿದ್ದಾರೆ.



ಮಹಾಗಾಂವ ಪೊಲೀಸ್ ಠಾಣೆಯ ಪೊಲೀಸರ ಕೈಗೆ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬ ಸಿಕ್ಕಿಬಿದ್ದಿದ್ದ. ಬಸವಕಲ್ಯಾಣ ತಾಂಡಾದ ಗಡಿಭಾಗದ ಮಹಾರಾಷ್ಟ್ರದ ತರೂರಿನಿಂದ ಗಾಂಜಾ ಖರೀದಿಸುತ್ತಿದ್ದಾಗಿ ಆತ ಪೊಲೀಸರಿಗೆ ಮಾಹಿತಿ ನೀಡಿದ್ದ. ಈತನ ಮಾಹಿತಿಯ ಮೇರೆಗೆ ಸಿಪಿಐ ಶ್ರೀಮಂತ ಇಲ್ಲಾಳ ನೇತೃತ್ವದ ಮಹಾಗಾಂವ ಪೊಲೀಸರ ತಂಡ ತರೂರಿ ಗ್ರಾಮಕ್ಕೆ ತೆರಳಿತ್ತು.



ಅವರಲ್ಲಿ ಕೆಲವರು, ಸ್ಥಳೀಯ ಪೊಲೀಸರಿಗೆ ವಿಷಯ ತಿಳಿಸಲು ಮತ್ತು ಹೆಚ್ಚಿನ ಪೊಲೀಸ್ ಪಡೆಯನ್ನು ತರೂರಿ ಗ್ರಾಮಕ್ಕೆ ತರಲು ಉಮ್ಮರ್ಗಾಗೆ ಹೋಗಿದ್ದಾಗ ಅವರ ಮೇಲೆ ದಾಳಿ ಮಾಡಲಾಗಿದೆ.



ಸುಮಾರು 40 ಜನರ ತಂಡ ಶ್ರೀಮಂತ ಇಲ್ಲಾಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ. ಇಲ್ಲಾಳ ಅವರ ಮುಖ, ಎದೆ ಮತ್ತು ಬೆನ್ನಿನ ಮೇಲೆ ಗಂಭೀರವಾದ ಗಾಯಗಳಾಗಿದ್ದು ಇಲ್ಲಾಳ ಅವರ ಮೇಲೆ ದಾಳಿ ನಡೆಸಿದ ಬಳಿಕ ತಂಡ ಪರಾರಿಯಾಗಿದೆ.



ನಂತರ ಮಹಾರಾಷ್ಟ್ರ ಪೊಲೀಸರು ಹಾಗೂ ಬಸವಕಲ್ಯಾಣ ತಾಲೂಕಿನ ಮಂಠಾಳ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಶ್ರೀಮಂತ ಇಲ್ಲಾಳರನ್ನು ಕಲಬುರಗಿಯ ಆಸ್ಪತ್ರೆಗೆ ಬೆಳಿಗ್ಗೆ 5.00 ಗಂಟೆಗೆ ದಾಖಲಿಸಿದ್ದಾರೆ.



ಶ್ರೀಮಂತ ಇಲ್ಲಾಳ ಪರಿಸ್ಥಿತಿ ಚಿಂತಾಜನಕವಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎಂದು ಇಲ್ಲಾಳರನ್ನು ನೋಡಿಕೊಳ್ಳುತ್ತಿರುವ ಆಸ್ಪತ್ರೆಯ ಡಾ.ಸುದರ್ಶನ ಮಾಹಿತಿ ನೀಡಿದ್ದಾರೆ.



ಶ್ರೀಮಂತ ಇಲ್ಲಾಳ ಅವರ ರಕ್ತದೊತ್ತಡಲ್ಲಿ ಏರು ಪೇರು ಉಂಟಾಗುತ್ತಿದ್ದು ರಕ್ತದೊತ್ತಡ ಸಹಜ ಸ್ಥಿತಿಗೆ ಬಂದ ನಂತರವೇ ಅವರಿಗೆ ಬೇರೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಕಳುಹಿಸುವ ನಿರ್ಧಾರ ಮಾಡಬಹುದು ಎಂದು ವೈದ್ಯರು ತಿಳಿಸಿದ್ದಾರೆ.



 

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣಸಮಾಜದ ಜಟಿಲ ಸಮಸ್ಯೆಗಳ ಪರಿಹಾರಕ್ಕೆ ಸಂಘಟನೆಗಳು ಮುಂದಾಗಲಿ: ಡಾ. ಅಲ್ಲಮಪ್ರಭು ಶ್ರೀ